September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಬೆಳ್ತಂಗಡಿವರದಿಶಾಲಾ ಕಾಲೇಜುಸಮಸ್ಯೆ

ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ವಿದ್ಯಾರ್ಥಿನಿಯರು: ಬಸ್ ಚಾಲಕ ಮತ್ತು ನಿರ್ವಾಹಕನ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ : ಕಳಿಯ ಗ್ರಾಮದ ಗೇರುಕಟ್ಟೆ ಸಮೀಪ ಚಲಿಸುತ್ತಿದ್ದ ಬಸ್ಸಿನ ಬಾಗಿಲು ತೆರೆದು ವಿದ್ಯಾರ್ಥಿನಿಯರಿಬ್ಬರು ಮಾ.31ರಂದು ಬೆಳಗ್ಗೆ ರಸ್ತೆಗೆ ಎಸೆಯಲ್ಪಟ್ಟು ಗಾಯಗೊಂಡ ಘಟನೆಯ ಬಗ್ಗೆ ಬಸ್ಸಿನ ಚಾಲಕ ಹಾಗೂ ನಿರ್ವಾಹಕನ ವಿರುದ್ದ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕಳಿಯದಿಂದ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸನ್ನು ಅದರ ಚಾಲಕ ದಯಾನಂದ ಅತ್ಯಂತ ಅಜಾಗರೂಕತೆಯಿಂದ ಚಲಾಯಿಸುತ್ತಾ ಬಂದಿದ್ದು ನಿರ್ವಾಹಕ ಕಾಶಿನಾಥ್ ಅವರು ಬಸ್ಸಿನ ಬಾಗಿಲು ಸರಿಯಾಗಿ ಹಾಕದೆ ಅಜಾಗರೂಕತೆಯಿಂದ ಇದ್ದ ಕಾರಣದಿಂದಾಗಿ ಚಲಿಸುತ್ತಿದ್ದ ಬಸ್ಸಿನ ಬಾಗಿಲು ತೆರದು ಇಬ್ಬರು ವಿದ್ಯಾರ್ಥಿನಿಯರಾದ ಒಂದೇ ಮನೆಯ ಸಹೋದರಿಯರು ಚರಿಷ್ಮಾ(17) ಮತ್ತು ಚದ್ಮಿಕಾ(15) ರಸ್ತೆಗೆ ಎಸೆಯಲ್ಪಟ್ಟು ಗಾಯಗೊಂಡಿದ್ದಾರೆ. ಅಪಘಾತಕ್ಕೆ ಕಾರಣರಾದ ಚಾಲಕ ಹಾಗೂ ನಿರ್ವಾಹಕನ ವಿರುದ್ದ ಗಾಯಗೊಂಡ ವಿದ್ಯಾರ್ಥಿನಿ ಚರಿಷ್ಮಾ(17) ನೀಡಿದ ದೂರಿನ ಮೇರೆಗೆ ಕಲಂ 281,125,125(a) ಬಿಎನ್ ಎಸ್ ಅಡಿಯಲ್ಲಿ ಮಾ.31 ರಂದು ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ದಾಖಲಿಸಲಾಗಿದೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿನಿಯರು ಬಸ್ಸಿನಿಂದ ಹೊರಗೆ ಎಸೆಯಲ್ಪಟ್ಟು ಅಪಘಾತದಲ್ಲಿ ಗಾಯಗೊಂಡ ವಿದ್ಯಾರ್ಥಿನಿಯರಾದ ಶರಿಷ್ಮಾ ಹಾಗೂ ಚದ್ಮಿಕಾ ಅವರು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದು ಚೇತರಿಸಿಕೊಂಡಿದ್ದಾರೆ.

Related posts

ಕುಂದಾಪುರ : ಚಾಲಕನ ನಿಯಂತ್ರಣ ತಪ್ಪಿ ಭೀಕರ ರಸ್ತೆ ಅಪಘಾತ: ಪಡಂಗಡಿ ನಡಿಬೆಟ್ಟು ನೇಮಿರಾಜ ಶೆಟ್ಟಿಯವರ ಮೊಮ್ಮಗ ಪ್ರದ್ಯೋತ್ ಮೃತ್ಯು

Suddi Udaya

ಜ. 20 : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಸಭಾಂಗಣದಲ್ಲಿ ಯುವ ನಿಧಿ ನೋಂದಣಿ ಶಿಬಿರ

Suddi Udaya

ಪಶ್ಚಿಮ ಬಂಗಾಳದ ಚಾರಿತ್ರಿಕ ಗೆಲುವು ಬಿಜೆಪಿಯ ಸೈದಾಂತಿಕ ನಿಲುವು ಮತ್ತು ಪ್ರಧಾನಿ ಮೋದಿಯವರ ‘ವಿಕಸಿತ ಭಾರತ’ದ ಸಂಕಲ್ಪಕ್ಕೆ ಸಂದ ಜಯ: ಸಂಸದ ಕ್ಯಾ. ಚೌಟ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಚ್ಛತಾ ಆಂದೋಲನ ಶಿಬಿರ

Suddi Udaya

ಉಜಿರೆ: ಶ್ರೀ ಧ. ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya
error: Content is protected !!