September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಭೀಮ ಗೋಲ್ಡ್ CSR ಸಹಕಾರದಿಂದ ಬೈಂದೂರು ಸೇವಾಧಾಮದಲ್ಲಿ ನೀರಿನ ಘಟಕದ ಉದ್ಘಾಟನೆ

ಸಮೃದ್ಧ ಬೈಂದೂರು ಪರಿಕಲ್ಪನೆಯ 300 ಸ್ಟ್ರೀಸ್ ಯೋಚನೆಯಡಿ ಭೂಮಿ ಟ್ರಸ್ಟ್ ಸಹಕಾರದೊಂದಿಗೆ ಭೀಮ ಗೋಲ್ಡ್ ಪ್ರೈವೇಟ್ ಲಿಮಿಟೆಡ್ ಇದರ ವತಿಯಿಂದ ಸೇವಾಧಾಮ ಬೈಂದೂರಿನಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಇದರ ಉದ್ಘಾಟನಾ ಕಾರ್ಯಕ್ರಮವನ್ನು ಮಾ.31ರಂದು ಬೈಂದೂರು ಸೇವಾಧಾಮ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರ ಪುನಶ್ಚೇತನ ಕೇಂದ್ರದಲ್ಲಿ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಉದ್ಘಾಟಿಸಿ ಭೀಮ ಗೋಲ್ಡ್ ಸಂಸ್ಥೆಯ CSR ನಿಂದ ನಮ್ಮ ಸೇವಾಧಾಮ ಸಂಸ್ಥೆಗೆ ನೀರಿನ ವ್ಯವಸ್ಥೆಯನ್ನು ಕಲ್ಪಿಸಿ ಕೊಟ್ಟಿದಕ್ಕೆ ಧನ್ಯವಾದಗಳನ್ನು ಸಲ್ಲಿಸಿದರು. ಪುನಶ್ಚೇತನವನ್ನು ಪಡೆದುಕೊಳ್ಳುತ್ತಿರುವ ದಿವ್ಯಾಂಗರು ಸಕ್ಷಮವಾಗಿ ಉಜ್ವಲ ಬದುಕನ್ನು ಕಾಣಲಿ ಎಂದು ಶುಭಹಾರೈಸಿದರು.

ಈ ಸಂದರ್ಭದಲ್ಲಿ ವಿಶ್ವನಾಥ್ ಶೆಟ್ಟಿ , ಗೋಪಾಲ ವರ್ಸೆ, ಭಾನುಮತಿ, ರವಿಚಂದ್ರ, ಮಂಜುಳ ವಿಷ್ಣುಪ್ರಸಾಧ್, ಸೇವಾಭಾರತಿಯ ಕಾರ್ಯದರ್ಶಿ ವಿಷ್ಣುಪ್ರಸಾದ್ ತೆಂಕಿಲ್ಲಾಯ, ಗ್ರಾಮಸ್ಥರು, ಪ್ರಮುಖರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಕಾಯರ್ತಡ್ಕದ ಅಂಬಿಕಾ ರವರಿಗೆ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಬೆಳ್ತಂಗಡಿ ಪ್ರಥಮ‌‌ ದರ್ಜೆ ಕಾಲೇಜಿನಲ್ಲಿ “ವಿಶ್ವ ತಂಬಾಕು ವಿರೋಧಿ ದಿನಾಚರಣೆ”- “ಸ್ವಾಸ್ಥ್ಯ ಸಂಕಲ್ಪ” ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನ ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮಕ್ಕಿಮನೆ ಕಲಾವೃಂದ ಬಳಗದಿಂದ ಸಾಂಸ್ಕೃತಿಕ ವೈಭವ

Suddi Udaya

ಕಲ್ಮಂಜ : ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ಕಾರ್ಯಾರಂಭ

Suddi Udaya

ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ಅ.19: ಉಜಿರೆ ಅನುಗ್ರಹದಲ್ಲಿ ಹಿರಿಯ ವಿದ್ಯಾರ್ಥಿಗಳ “ಅನುಗ್ರಹ ಸಮಾಗಮ”

Suddi Udaya
error: Content is protected !!