September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಂತರಾಷ್ಟ್ರಮಟ್ಟದ ಯೂತ್ ಗೇಮ್ಸ್ : ಎಸ್‌ಡಿಎಂ ಶಾಲಾ ವಿದ್ಯಾರ್ಥಿನಿ ಅನೀಶ ಆರೋಲ್‌ಗೆ ಚಿನ್ನದ ಪದಕ

ಉಜಿರೆ : ಯೂತ್ ಗೇಮ್ಸ್  ಫೌಂಡೇಶನ್ ಇಂಡಿಯಾ (YGF) ನೇಪಾಳ ಪೋಖರಾ ನಗರದ ರಂಗಶಾಲಾ ಕ್ರೀಡಾಂಗಣದಲ್ಲಿ  ಆಯೋಜಿಸಿದ್ದ ಇಂಡೋ-ನೇಪಾಳ ಅಂತಾರಾಷ್ಟ್ರೀಯ ಮಟ್ಟದ ಯೂತ್ ಗೇಮ್ಸ್ ನಲ್ಲಿ ಭಾಗವಹಿಸಿದ  ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ಹಾಗು ಎಸ್.ಡಿ.ಎಂ ಕ್ರೀಡಾ ಸಂಘದ ವಿದ್ಯಾರ್ಥಿನಿ ಅನೀಶ ಆರೋಲ್  ಡಿಸೋಜಾ ಗುಂಡೆಸೆತ ಸ್ಪರ್ಧೆಯಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಚಿನ್ನದ ಪದಕ ಪಡೆದುಕೊಂಡಿದ್ದಾರೆ.

ಭಾರತ ದೇಶವನ್ನು ಪ್ರತಿನಿಧಿಸಿ ಪ್ರಥಮ ಸ್ಥಾನ ಪಡೆಯುವ ಮೂಲಕ ಚಾಂಪಿಯನ್ ಆಗಿರುವ ಕುಮಾರಿ ಅನೀಶ, ಇತ್ತೀಚೆಗೆ ಯೂತ್ ಗೇಮ್ಸ್ ಕೌನ್ಸಿಲ್ ಆಫ್ ಇಂಡಿಯಾ (YGCI) ದೆಹಲಿಯ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಓಪನ್ ಯೂತ್ ಗೇಮ್ಸ್ ನಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಪ್ರಥಮ ಸ್ಥಾನ ಪಡೆಯುವ ಮೂಲಕ ಅಂತಾರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಯ್ಕೆ ಯಾಗಿದ್ದರು.

ಈ ಕ್ರೀಡಾ ಕೂಟದಲ್ಲಿ ಒಟ್ಟು 7 ಮಂದಿ ಭಾರತದ ಕ್ರೀಡಾಪಟುಗಳು ಭಾಗವಹಿಸಿದ್ದರು. ಕುಮಾರಿ ಅನೀಶಾ ಉತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಪಡೆದು ದೇಶಕ್ಕೆ ಹೆಮ್ಮೆ ತಂದಿದ್ದಾರೆ. ಬಹುಮಾನ ವಿತರಣಾ ಸಮಾರಂಭದಲ್ಲಿ ಯೂತ್ ಗೇಮ್ಸ್ ಫೌಂಡೇಶನ್ ಸಮಿತಿಯ ಕಾರ್ಯದರ್ಶಿ ಅಮರ್‌ಸಿಂಗ್ ಚಂದೇಲೆ ಹಾಗೂ ಭಾರತೀಯ ಸೇನೆಯ ಹರೇಂದ್ರಸಿಂಗ್ ಚೌಧರಿ ಅವರು ಪದಕಗಳನ್ನು ನೀಡಿ ಅಭಿನಂದಿಸಿದರು.

ಪ್ರಸಕ್ತ ಸಾಲಿನಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಕುಮಾರಿ  ಅನೀಶ  ಇವರು ಇತ್ತೀಚೆಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಸ್ಕೂಲ್ ಒಲಿಂಪಿಕ್ಸ್‌ ಅಥ್ಲೆಟಿಕ್ಸ್‌ ಕ್ರೀಡಾಕೂಟದಲ್ಲಿ  ಗುಂಡೆಸೆತ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕ ಪಡೆದಿದ್ದಾರೆ. ಮೈಸೂರಿನ ಚಾಮುಂಡಿ ವಿಹಾರ ಸ್ಟೇಡಿಯಂನಲ್ಲಿ ಆಯೋಜಿಸಲಾದ ರಾಜ್ಯ ಮಟ್ಟದ ಕಿಡ್ಸ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲೂ ಭಾಗವಹಿಸಿ  ಪ್ರಥಮ ಸ್ಥಾನ ಪಡೆದಿದ್ದರು. ಈ ಮೊದಲು ಸುಳ್ಯ ತಾಲೂಕಿನ ಪಂಜ ದಲ್ಲಿ ನಡೆದ ದ.ಕ. ಜಿಲ್ಲಾ ಮಟ್ಟದ ಅತ್ಲೇಟಿಕ್ಸ್ ನಲ್ಲಿ 17 ವಯೋಮಾನದ ಬಾಲಕಿಯರ ಗುಂಡು ಎಸೆತದಲ್ಲಿ ಬೆಳ್ತಂಗಡಿ ತಾಲೂಕಿನ್ನು ಪ್ರತಿನಿಧಿಸಿ ಸುಮಾರು 11.43  ಮೀ ದೂರಕ್ಕೆ ಎಸೆದು ಕೂಟದಲ್ಲೇ ವಿನೂತನ ದಾಖಲೆಯನ್ನು ನಿರ್ಮಿಸಿದ್ದರು.

ಚಿಕ್ಕಮಗಳೂರು ಜಿಲ್ಲೆಯ ಬಸರಿಕಟ್ಟೆಯ ಕ್ಲೆಮೆಂಟ್ ಡಿಸೋಜಾ ಮತ್ತು ಆಶಾ ಡಿಸೋಜಾ ದಂಪತಿಗಳ ಮಗಳಾದ ಕುಮಾರಿ ಅನೀಶ ಡಿಸೋಜಾ ಕಳೆದ ಎರಡು ವರ್ಷ ಸತತ ವಾಗಿ ಜಾರ್ಖಂಡ್ ಹಾಗೂ ಲಕ್ನೋ ದಲ್ಲಿ ನಡೆದ ಅಂಡರ್ 14 ವಿಭಾಗದ ರಾಷ್ಟ್ರ ಮಟ್ಟದ ಗುಂಡು ಎಸೆತದಲ್ಲಿ ಭಾಗವಹಿಸಿ 4ನೇ ಸ್ಥಾನವನ್ನು ಪಡೆದಿರುತ್ತಾಳೆ. ಜೊತೆಗೆ  ಎರಡು ಭಾರಿ ರಾಜ್ಯ ಮಟ್ಟದ ಚಕ್ರ ಎಸೆತದಲ್ಲಿ ಭಾಗವಹಿಸಿರುತ್ತಾರೆ.  ಪ್ರಶಸ್ತಿ ವಿಜೇತ ಕುಮಾರಿ ಅನೀಶರವರಿಗೆ ಉಜಿರೆಯ ಎಸ್.ಡಿ.ಎಂ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಸಂದೇಶ್ ಬಿ ಪೂಂಜ ಹಾಗು ಶಾಲೆಯ ದೈಹಿಕ ಶಿಕ್ಷಕ ಸುಭಾಷ್ ಚಂದ್ರ ತರಬೇತಿ ನಿಡಿರುತ್ತಾರೆ.

ಈ ವಿಶೇಷ ಸಾಧನೆಗೈದು ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶವನ್ನು ಪ್ರತಿನಿಧಿಸುತ್ತಿರುವ ವಿದ್ಯಾರ್ಥಿನಿಗೆ ಎಸ್.ಡಿ.ಎಂ ಆಡಳಿತ ಮಂಡಳಿ ಸೇರಿದಂತೆ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್, ಐಟಿ ಮತ್ತು ಹಾಸ್ಟೆಲ್ ಆಡಳಿತ ವಿಭಾಗದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪೂರನ್ ವರ್ಮ, ಶಾಲೆಯ ಮುಖ್ಯ ಶಿಕ್ಷಕಿ ವಿದ್ಯಾ ಲಕ್ಷ್ಮಿ, ಎಸ್.ಡಿ.ಎಂ ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್, ದೈಹಿಕ ಶಿಕ್ಷಣ ಉಪನ್ಯಾಸಕ ಸಂದೇಶ್ ಬಿ ಪೂಂಜ, ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಸೇರಿದಂತೆ ಸಿಬ್ಬಂದಿವರ್ಗದವರು ಅಭಿನಂದನೆಗಳನ್ನು ತಿಳಿಸಿರುತ್ತಾರೆ.

Related posts

ಕು| ಅದಿತಿ ಮುಗೆರೋಡಿ “ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್” ನಲ್ಲಿ ದಾಖಲೆ”

Suddi Udaya

ಬೆಳ್ತಂಗಡಿ: ಮುಳಿಯ ಗೋಲ್ಡ್ & ಡೈಮಂಡ್ಸ್‌ನ ‘ಡೈಮಂಡ್ ಫೆಸ್ಟ್’ಗೆ ಚಾಲನೆ

Suddi Udaya

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯಿಂದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಮಾಹಿತಿ ಕಾರ್ಯಾಗಾರ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ‘ಸಾಧನಾ ಪ್ರಶಸ್ತಿ’

Suddi Udaya

ಅಳದಂಗಡಿ: ಸೂಳಬೆಟ್ಟು ನಿವಾಸಿ ವಾಣಿ ಜೋಶಿ ನಿಧನ

Suddi Udaya
error: Content is protected !!