28.3 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎ 6-7:ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳ, “ಉದ್ಯೋಗಂ-2026”

ಉಜಿರೆ: ಕರ್ನಾಟಕ ರಾಜ್ಯದಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಎಸ್.ಡಿ.ಎಂ ನ ಸುಮಾರು 56 ಶಿಕ್ಷಣ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದು ನರ್ಸರಿಯಿಂದ- ಮೆಡಿಕಲ್ ತನಕ ಎಲ್ಲಾ ರೀತಿಯ ಶಿಕ್ಷಣವು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳಲ್ಲಿ ಸಿಗುತ್ತಿದೆ.ಏ.6ಮತ್ತು 7 ರಂದು ಎಸ್.ಡಿ.ಎಂ ಶಿಕ್ಷಣ ಸಂಸ್ಥೆ ಇದರ ಆಶ್ರಯದಲ್ಲಿ ‘ಎಸ್.ಡಿ.ಎಂ ಉದ್ಯೋಗಂ – 2026’ ಎಂಬ ಬೃಹತ್ ಉದ್ಯೋಗ ಮೇಳ ನಡೆಯಲಿದೆ ಎಂದು ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ ವಿಶ್ವನಾಥ್ ಹೇಳಿದರು

ಅವರು ಎಸ್.ಡಿ.ಎಂ ಕಾಲೇಜಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಉಜಿರೆಯ ಎಸ್.ಡಿ.ಎಂ ಕಾಲೇಜು (ಸ್ವಾಯತ್ತ), ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ ಹಾಗೂ ಎಸ್.ಡಿ.ಎಂ ಪಾಲಿಟೆಕ್ನಿಕ್ ಕಾಲೇಜು ಸಹಯೋಗದಲ್ಲಿ ನಡೆಯಲಿರುವ ಈ ಉದ್ಯೋಗ ಮೇಳದಲ್ಲಿ ಈಗಾಗಲೇ 100ಕ್ಕೂ ಅಧಿಕ ಕಂಪನಿಗಳು ನೊಂದಾಯಿಸಿಕೊಂಡಿವೆ. ಒಟ್ಟು ೪೦೦೦ಕ್ಕೂ ಅಧಿಕ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ಸಲುವಾಗಿ ಅಭ್ಯರ್ಥಿಗಳ ಸಂದರ್ಶನ ನಡೆಸಲಿವೆ.‌ಉದ್ಯೋಗ ಮೇಳದ ಉದ್ಘಾಟನೆಯನ್ನು ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್ ನೇರವೇರಿಸಲಿದ್ದಾರೆ ಎಂದರು.

ಉಚಿತ ನೋಂದಣಿ: ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಬೆಳಗ್ಗೆ ೯.೩೦ ರಿಂದ ‘ಎಸ್.ಡಿ.ಎಂ ಉದ್ಯೋಗಂ – ೨೦೨೬’ ಎಂಬ ಈ ಬೃಹತ್ ಉದ್ಯೋಗ ಮೇಳ ಆರಂಭವಾಗಲಿದೆ. ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಸಮೂಹ ಆಯೋಜಿಸಿರುವ ಈ ಉದ್ಯೋಗ ಮೇಳದಲ್ಲಿ ಎಲ್ಲಾ ಉದ್ಯೋಗಾಕಾಂಕ್ಷಿಗಳಿಗೆ ಉಚಿತವಾಗಿ ನೊಂದಣಿ ಮಾಡಿಕೊಳ್ಳುವ ಅವಕಾಶ ನೀಡಲಾಗಿದೆ.

ಉದ್ಯೋಗಾಕಾಂಕ್ಷಿಗಳಿಗೆ ವಿಸ್ತೃತ ಆಯ್ಕೆ: ಐಟಿ ಮತ್ತು ಸಾಪ್ಟ್ವೇರ್ ಡೆವಲಪ್‌ಮೆಂಟ್, ಫಾರ್ಮಾಸ್ಯೂಟಿಕಲ್ಸ್, ಬ್ಯಾಂಕಿಂಗ್ ಮತ್ತು ಫಿನ್ಯಾನ್ಸ್, ಐಟಿ ಮತ್ತು ಐಟಿಇಎಸ್, ಸೇಲ್ಸ್ ಮತ್ತು ಮಾರ್ಕೆಟಿಂಗ್, ರೀಟೈಲ್ ಮತ್ತು ಸೇಲ್ಸ್, ಶಿಕ್ಷಣ, ಪ್ರವಾಸೋದ್ಯಮ ಮತ್ತು ಆತಿಥ್ಯ, ಅಕೌಂಟಿಂಗ್ ಮತ್ತು ಟ್ಯಾಕ್ಸ್ ಕನ್ಸಲ್ಟೆನ್ಸಿ, ಉತ್ಪಾದನೆ, ಅಟೋಮೊಬೈಲ್, ಟೆಲಿಕಾಂ ಮತ್ತು ಮೀಡಿಯಾ, ಕನ್‌ಸ್ಟçಕ್ಷನ್ ಮತ್ತು ಇನ್‌ಫ್ರಾಸ್ಟçಕ್ಚರ್ ಹಾಗೂ ಫಿನಾನ್ಶಿಯಲ್ ಕನ್‌ಸಲ್ಟೆನ್ಸಿ ಸೇರಿದಂತೆ ಹಲವು ವರ್ಗಗಳಿಗೆ ಸಂಬಂಧಿಸಿದ ಕಂಪನಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲಿದ್ದು ಉದ್ಯೋಗಾಕಾಂಕ್ಷಿಗಳಿಗೆ ವಿಸ್ತೃತ ಆಯ್ಕೆಯ ಅವಕಾಶವನ್ನು ಒದಗಿಸಿವೆ.

ಮುಕ್ತ ಅವಕಾಶ:
ಪಿ.ಯು.ಸಿ, ಬಿ.ಎ, ಬಿ.ಬಿ.ಎ, ಬಿ.ಕಾಂ, ಬಿ.ಸಿ.ಎ, ಬಿ.ಎಸ್ಸಿ, ಬಿ.ವೋಕ್, ಐ.ಟಿ.ಐ, ಡಿಪ್ಲೋಮಾ, ಇಂಜಿನಿಯರಿAಗ್, ಬಿ.ಟೆಕ್, ಬಿ.ಎಡ್, ಎಂ.ಎ, ಎಂ.ಸಿ.ಜೆ, ಎಂ.ಎಸ್.ಡಬ್ಲುö್ಯ, ಎಂ.ಕಾಂ, ಎಂ.ಸಿ.ಎ, ಎಂ.ಎಸ್ಸಿ, ಎಂ.ಬಿ.ಎ, ಮತ್ತು ಜಿ.ಎನ್.ಎಂ ನರ್ಸಿಂಗ್ ಸೇರಿದಂತೆ ಯಾವುದೇ ಶೈಕ್ಷಣಿಕ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಕೂಡಾ ‘ಎಸ್.ಡಿ.ಎಂ ಉದ್ಯೋಗಂ – ೨೦೨೬’ ಬೃಹತ್ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದ್ದು, ಇದರ ಜೊತೆಗೆ ತಾಲೂಕಿನಾದ್ಯಂತವಿರುವ ವಿವಿಧ ಶೈಕ್ಷಣಿಕ ಸಂಸ್ಥೆಗಳಲ್ಲಿ ಅಂತಿಮ ಪದವಿ ಹಂತದಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳೂ ಪಾಲ್ಕೊಳ್ಳುವ ಮುಕ್ತ ಅವಕಾಶ ಒದಗಿಸಲಾಗಿದೆ.

ಮೊಬೈಲ್ ಮೂಲಕ ಫಲಿತಾಂಶ: ಈಗಾಗಲೇ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ನೊಂದಾಯಿಸಿಕೊಳ್ಳುವ ಸಲುವಾಗಿ ಗೂಗಲ್ ಫಾರ್ಮ್ ಲಿಂಕ್ ಸೃಷ್ಟಿಸಿದ್ದು, ಅದರ ಮೂಲಕ ಎರಡು ಸಾವಿರಕ್ಕೂ ಅಧಿಕ ಉದ್ಯೋಗಾಕಾಂಕ್ಷಿಗಳು ಈಗಾಗಲೇ ರಿಜಿಸ್ಟರ್ ಮಾಡಿಕೊಂಡಿದ್ದಾರೆ. ಸಂಪೂರ್ಣ ಉದ್ಯೋಗ ಮೇಳದ ನೊಂದಣಿ ಮತ್ತು ಆಯ್ಕೆ ಪ್ರಕ್ರಿಯೆಯನ್ನು ಪೇಪರ್ ರಹಿತವಾಗಿಸಿದ್ದು, ಆನ್‌ಲೈನ್ ಮೂಲಕವೇ ಎಲ್ಲಾ ನೊಂದಣಿ ಮಾಡಿಕೊಳ್ಳಲಾಗುತ್ತಿದೆ. ಇದರ ಜೊತೆಗೆ ಎಸ್.ಡಿ.ಎಂ ಉದ್ಯೋಗ ಮೇಳಂ ಸಲುವಾಗಿ ವಿಶೇಷ ಸಾಪ್ಟ್ವೇರ್ ರೂಪಿಸಲಾಗಿದ್ದು, ಅದರ ಮೂಲಕ ಸಂದರ್ಶನ ಪ್ರಕ್ರಿಯೆಯಲ್ಲಿ ಪಾಲ್ಗೊಂಡ ಅಭ್ಯರ್ಥಿಗಳಿಗೆ ತಮ್ಮ ಸಂದರ್ಶನದ ಫಲಿತಾಂಶವನ್ನು ಮೊಬೈಲ್ ಮೂಲಕವೇ ತಿಳಿದುಕೊಳ್ಳುವಂತಹ ವ್ಯವಸ್ಥೆಯನ್ನೂ ಮಾಡಲಾಗಿದೆ.

ಪ್ರಥಮ ಬಾರಿಗೆ ಆಯೋಜನೆ: ತಾಲೂಕಿನ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳು ಪ್ರಪ್ರಥಮ ಬಾರಿಗೆ ಆಯೋಜಿಸಲಾಗುತ್ತಿದೆ ಎರಡು ದಿನಗಳ ಈ ಬೃಹತ್ ಉದ್ಯೋಗ ಮೇಳದಲ್ಲಿ ಉದ್ಯೋಗಾಕಾಂಕ್ಷಿಗಳೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸದುಪಯೋಗ ಪಡಿಸಿಕೊಳ್ಳಬೇಕಾಗಿ ಕೋರಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಎಸ್.ಡಿ.ಎಂ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ಸಂತೋಷ್,ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನ ಪ್ರಬಾರ ಪ್ರಾಂಶುಪಾಲರಾದ ಗೀರೀಶ್ ಕುಮಾರ್,ಉಪನ್ಯಾಸಕರಾದ ಡಾ‌.ಸುಬ್ರಹ್ಮಣ್ಯ ತೋಳ್ಪಾಡಿತ್ತಾಯ,ಅಮರೇಶ್ ಹೆಬ್ಬಾರ್, ಡಾ‌.ನಾಗರಾಜ್ ಪೂಜಾರಿ,ಹಾಗೂ ಶೈಲೇಶ್ ಕುಮಾರ್,ಸುನಿಲ್ ಮೊದಲಾದವರು ಉಪಸ್ಥಿತರಿದ್ದರು.

Related posts

ಚಾರ್ಮಾಡಿ ಎಸ್.ಡಿ.ಪಿ.ಐ ಪಕ್ಷದ ಸಂಸ್ಥಾಪನ ದಿನಾಚರಣೆ

Suddi Udaya

ವೇಣೂರು: ಹಂದೇವು ನಿವಾಸಿ ಕಲ್ಯಾಣಿ ದೇವಾಡಿಗ ನಿಧನ

Suddi Udaya

ಉಜಿರೆ ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘ ಆಡಳಿತ ಮಂಡಳಿಯ 15 ನಿರ್ದೇಶಕರುಗಳ ಸ್ಥಾನಕ್ಕೆ ಅವಿರೋಧ ಆಯ್ಕೆ

Suddi Udaya

ಜೆ ಡಿ ಎಸ್ ಅಭ್ಯರ್ಥಿಯಿಂದ ತಾಲೂಕಿನಲ್ಲಿ ಮತಯಾಚನೆ   

Suddi Udaya

ಬೆಳ್ತಂಗಡಿ ಗ್ರಂಥಾಲಯ ಮೇಲ್ವಿಚಾರಕರಿಗೆ ಡಿಜಿಟಲ್ ಕೌಶಲ್ಯ, ನಾಯಕತ್ವ ಮತ್ತು ಸಹಭಾಗಿತ್ವ ಚಟುವಟಿಕೆಯ ತರಬೇತಿ ಕಾರ್ಯಕ್ರಮ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya
error: Content is protected !!