24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಧಾರ್ಮಿಕ

ಬಂದಾರು-ಕುರಾಯ ಶ್ರೀ ಸದಾಶಿವ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ ಆರಂಭ

ಬೆಳ್ತಂಗಡಿ: ಶ್ರೀ ಸದಾಶಿವ ದೇವಸ್ಥಾನ ಕುರಾಯ-ಬಂದಾರು ಇಲ್ಲಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಹಾಗೂ ಗೌರವಾಧ್ಯಕ್ಷರಾದ ಶರತ್‌ಕೃಷ್ಣ ಪಡ್ವೆಟ್ನಾಯ ಇವರ ಕೃಪಾಶೀರ್ವಾದಗಳೊಂದಿಗೆ ಏ.2ರಿಂದ ಪ್ರಾರಂಭಗೊಂಡು ಎ.10ರವರೆಗೆ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವವು ಬ್ರಹ್ಮಶ್ರೀ ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಜರಗಲಿದೆ.

ಏ.2ರಂದು ಬೆಳಿಗ್ಗೆ ಹಸಿರುವಾಣಿ ಸಮರ್ಪಣೆ, ಭಜನೆ, ಸಾಮೂಹಿಕ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹವಾಚನ, ಪಂಚಗವ್ಯಶುದ್ಧಿ, ಗಣಪತಿ ಹವನ, ಪ್ರತಿಷ್ಠಾ ಮಹೋತ್ಸವ, ಶ್ರೀ ದೇವರಿಗೆ ಕಲಶಾಭಿಷೇಕ, ರುದ್ರಾಭಿಷೇಕ, ವಿಶೇಷ ಪೂಜೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ ದುರ್ಗಾಪೂಜೆ, ರಾತ್ರಿ ರಂಗ ಪೂಜೆ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ. ಏ.3ರಂದು ಬೆಳಿಗ್ಗೆ ಗೊನೆ ಮುಹೂರ್ತ, ಶ್ರೀ ದೇವರಿಗೆ ರುದ್ರಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ರಾತ್ರಿ ತೋರಣ ಮುಹೂರ್ತ, ಧ್ವಜಾರೋಹಣ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ. ಏ.4ರಂದು ಬೆಳಿಗ್ಗೆ ಶ್ರೀ ದೇವರಿಗೆ ಕಲಶಾಭಿಷೇಕ, ರುದ್ರಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ರಾತ್ರಿ ಮಹಾಪೂಜೆ, ನಿತ್ಯಬಲಿ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ.

ಏ.5ರಂದು ಬೆಳಿಗ್ಗೆ ಗಣಪತಿ ಹವನ, ಶ್ರೀ ದೇವರಿಗೆ ಕಲಶಾಭಿಷೇಕ, ರುದ್ರಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ ಭಜನೆ, ರಾತ್ರಿ ಬೈಗಣ ಬಲಿ, ಮಹಾಪೂಜೆ, ನಿತ್ಯಬಲಿ, ಅನ್ನಸಂತರ್ಪಣೆ. ಏ.6ರಂದು ಬೆಳಿಗ್ಗೆ ಉತ್ಸವ ಬಲಿ, ಗಣಪತಿ ಹವನ, ಶ್ರೀ ಕ್ಷೇತ್ರಕ್ಕೆ ಸಂಬAಧಪಟ್ಟ ನಾಗನ ಕಟ್ಟೆಯಲ್ಲಿ ಶ್ರೀ ನಾಗದೇವರಿಗೆ ಪವಮಾನಾಭಿಷೇಕ ಮತ್ತು ಪರ್ವಸೇವೆ, ಕಲಶಾಭಿಷೇಕ, ರುದ್ರಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ ಭಜನೆ, ರಾತ್ರಿ ಉತ್ಸವ ಬಲಿ, ಕೆರೆ ಪೂಜೆ, ಕೆರೆಕಟ್ಟೆ ಪೂಜೆ, ಮಹಾಪೂಜೆ, ನಿತ್ಯಬಲಿ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ

ಏ.7ರಂದು ಉತ್ಸವ ಬಲಿ, ಗಣಪತಿ ಹವನ, ಶ್ರೀ ದೇವರಿಗೆ ಕಲಶಾಭಿಷೇಕ, ರುದ್ರಾಭಿಷೇಕ ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ ಭಜನೆ, ದುರ್ಗಾಪೂಜೆ, ರಾತ್ರಿ ಉತ್ಸವ ಬಲಿ, ರೆಂಜೆ ಕಟ್ಟೆ ಪೂಜೆ, ಮಹಾಪೂಜೆ, ನಿತ್ಯಬಲಿ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ.

ಏ.8ರಂದು ಬೆಳಿಗ್ಗೆ ಉತ್ಸವ ಬಲಿ, ವಿಶೇಷ ಸುತ್ತುಗಳು, ದರ್ಶನ ಬಲಿ, ಬಟ್ಟಲು ಕಾಣಿಕೆ, ಅಪ್ಪಂಗಾಯಿ, ಶ್ರೀ ದೇವರಿಗೆ ಕಲಶಾಭಿಷೇಕ, ರುದ್ರಾಭಿಷೇಕ, ತುಲಾಭಾರ ಸೇವೆ ಮಧ್ಯಾಹ್ನ ಮಹಾಪೂಜೆ, ಪಲ್ಲಪೂಜೆ, ಆರಾಟಕ್ಕೆ ಕುದಿ ಕರೆಯುವುದು, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ ಭಜನೆ, ತೇರ ಕಲಶ, ಉತ್ಸವ ಬಲಿ, ವಿಶೇಷ ಸುತ್ತುಗಳು ನಂತರ ರಕ್ತೇಶ್ವರಿ ದೈವದ ನೇಮೋತ್ಸವ, ರಾತ್ರಿ ಶ್ರೀ ಸದಾಶಿವ ದೇವರ ರಥೋತ್ಸವ ನಂತರ ರಕ್ತೇಶ್ವರಿ ದೈವದ ಸಹಿತ ಶ್ರೀ ದೇವರು ಮೂಲ ಕ್ಷೇತ್ರಕ್ಕೆ ಭೇಟಿ, ಕ್ಷೇತ್ರಕ್ಕೆ ದೇವರ ಆಗಮನ, ನಂತರ ಫಲಾಹಾರ ಮತ್ತು ಭೂತಬಲಿ, ದೇವರ ಶಯನೋತ್ಸವ.

ಏ.9ರಂದು ಬೆಳಿಗ್ಗೆ ಗಣಹವನ, ಕವಟೋದ್ಘಾಟನೆ, ಕಟೀಲು ಮೇಳದ ದೇವರ ಮಹಾಪೂಜೆ, ದೇವರಿಗೆ ರುದ್ರಾಭಿಷೇಕ, ನಂತರ ಮಹಾಪೂಜೆ, ಪ್ರಸಾದ ವಿತರಣೆ, ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ ಪಿಲಿಚಾಮುಂಡಿ ದೈವದ ನೇಮೋತ್ಸವ, ಶ್ರೀ ದೇವರ ಆರಾಟೋತ್ಸವ, ಅವಭ್ರತ ಸ್ನಾನ, ಧ್ವಜಾ ಅವರೋಹಣ, ಸಂಜೆ ಭಜನೆ, ಸಂಜೆ ಚೌಕಿ ಪೂಜೆ, ವೇ.ಮೂ. ಶ್ರೀ ಲಕ್ಷ್ಮೀನಾರಾಯಣ ಅಸ್ರಣ್ಣರವರ ಆಶೀರ್ವಾದಗಳೊಂದಿಗೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ “ಸಂಪೂರ್ಣ ಶ್ರೀ ದೇವಿ ಮಹಾತ್ಮೆ” ಯಕ್ಷಗಾನ ಬಯಲಾಟ, ರಾತ್ರಿ ಸಾರ್ವಜನಿಕ ಅನ್ನಸಂತರ್ಪಣೆ.

ಏ.10ರಂದು ಬೆಳಿಗ್ಗೆ ಸಂಪ್ರೋಕ್ಷಣೆ, ಶ್ರೀ ದೇವರಿಗೆ ರುದ್ರಾಭಿಷೇಕ ನಂತರ ಮಹಾಪೂಜೆ, ಪ್ರಸಾದ ವಿತರಣೆ, ರಾತ್ರಿ ಭಜನಾ ಕಾರ್ಯಕ್ರಮ ಮತ್ತು ದುರ್ಗಾಪೂಜೆ ನಂತರ ರಂಗಪೂಜೆ ನಡೆಯಲಿದೆ.

Related posts

ಬಿಜೆಪಿಯ ಬೆಂಬಲಿತ ಅಭ್ಯರ್ಥಿಯಾಗಿಯೇ ದಕ್ಷಿಣ ಕನ್ನಡ ಹಾಲು ಒಕ್ಕೂಟದ ನಿರ್ದೇಶಕನಾಗಿ ಆಯ್ಕೆಯಾಗಿರುವೆ : ಪ್ರಭಾಕರ್ ಎಚ್.

Suddi Udaya

ಅರಸಿನಮಕ್ಕಿ: ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya

ಅಳದಂಗಡಿ ಪದ್ಮಾಂಭ ಕಾಂಪ್ಲೆಕ್ಸ್ ಮಾಲಕ ರವಿರಾಜ್ ಹೆಗ್ಡೆ ನಿಧನ

Suddi Udaya

ಕುಕ್ಕೇಡಿ ಬುಳೆಕ್ಕರ ಶ್ರೀ ಶಾರದಾಂಭ ಭಜನಾ ಮಂಡಳಿ ಅಧ್ಯಕ್ಷರಾಗಿ ಶಶಿಕಲಾ, ಕಾರ್ಯದರ್ಶಿಯಾಗಿ ತೃಪ್ತಿ

Suddi Udaya
error: Content is protected !!