ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬೆಳ್ತಂಗಡಿ ಬಸದಿಯಲ್ಲಿ 12ನೇ ವಾರ್ಷಿಕೋತ್ಸವ, ಲಘುಸಿದ್ಧಚಕ್ರ ಯಂತ್ರಾರಾಧನೆ

ಉಜಿರೆ: ಬೆಳ್ತಂಗಡಿ ಜೈನಪೇಟೆಯಲ್ಲಿರುವ ರತ್ನತ್ರಯ ಜೈನ ತೀರ್ಥಕ್ಷೇತ್ರದಲ್ಲಿ ಪೂಜ್ಯ ಏಲಾಚಾರ್ಯ ಪ್ರಸಂಗಸಾಗರ ಮುನಿಮಹಾರಾಜರ ದಿವ್ಯ ಉಪಸ್ಥಿತಿಯಲ್ಲಿ ಬಸದಿಯ 12ನೇ ವಾರ್ಷಿಕೋತ್ಸವ ಹಾಗೂ ಲಘುಸಿದ್ಧಚಕ್ರ ಯಂತ್ರಾರಾಧನೆ ನಡೆಯಿತು.

ಬೆಳಿಗ್ಗೆ ಏಳು ಗಂಟೆಯಿಂದ ತೋರಣ ಮುಹೂರ್ತ, ವಿಮಾನಶುದ್ಧಿ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆದವು.
ಭಗವಾನ್ ಮಹಾವೀರಸ್ವಾಮಿ ಮೂರ್ತಿಗೆ ಪಂಚಾಮೃತಾಭಿಷೇಕ, ಭಗವಾನ್ ಶಾಂತಿನಾಥಸ್ವಾಮಿಗೆ ೧೦೮ ಕಲಶಗಳಿಂದ ಅಭಿಷೇಕ, ಮೂರೂ ಬಸದಿಗಳಲ್ಲಿ ಪಂಚಾಮೃತಾಭಿಷೇಕ, ಮಹಾಮಾತೆ ಪದ್ಮಾವತಿ ದೇವಿಗೆ ಅಲಂಕಾರ ಪೂಜೆ ಹಾಗೂ ಬ್ರಹ್ಮಯಕ್ಷ ದೇವರಿಗೆ ವಿಶೇಷ ಪೂಜೆ ನಡೆಯಿತು.

ಬಸದಿಯ ಪ್ರಧಾನ ಅರ್ಚಕರಾದ  ಜಯರಾಜ ಇಂದ್ರರ ನೇತೃತ್ವದಲ್ಲಿ ಸಹಪುರೋಹಿತರು ಪೂಜಾ ವಿಧಿ-ವಿಧಾನಗಳನ್ನು ನೆರವೇರಿಸಿದರು.

ಜಯಶ್ರೀ ಹೊರನಾಡು ಮತ್ತು ಬಳಗದವರ ಸುಶ್ರಾವ್ಯ ಗಾಯನ ಕಾರ್ಯಕ್ರಮಕ್ಕೆ ವಿಶೇಷ ಮೆರುಗನ್ನು ನೀಡಿತು.
ಬಸದಿಯ ಅನುವಂಶಿಕ ಆಡಳಿತ ಮೊಕ್ತೇಸರ ಕೆ. ಜಯವರ್ಮರಾಜ ಬಳ್ಳಾಲ್ ಮತ್ತು ಕುಟುಂಬಸ್ಥರು, ಡಾ. ಕೆ. ಜೀವಂಧರ ಬಳ್ಳಾಲ್, ಕೆ. ರಾಜವರ್ಮ ಬಳ್ಳಾಲ್, ಡಾ. ಮಾಲತಿ ಹೆಗ್ಡೆ, ಡಾ. ಪ್ರಿಯಾ ಬಳ್ಳಾಲ್ ಮೊದಲಾದವರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ – ಮಂಗಳೂರು ತುಳುನಾಡು ಸಾರಿಗೆ ಬಸ್

Suddi Udaya

ಬಳಂಜ: ಅಟ್ಲಾಜೆ ದ.ಕ ಜಿ.ಪಂ. ಕಿ.ಪ್ರಾ ಶಾಲಾ ಪ್ರಾರಂಭೋತ್ಸವ ಸಂಭ್ರಮ: ಯುವ ಉದ್ಯಮಿ ಪ್ರವೀಣ್ ಪೂಜಾರಿ ಲಾಂತ್ಯಾರುರವರಿಂದ ಮಕ್ಕಳಿಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಫೆ.22: ಜಿಲ್ಲಾ ಮಾಗಣೆ ಮಟ್ಟದ ಕುಂಬಾರರ ಬೃಹತ್ ಸಮಾವೇಶ “ಕುಂಬಾ ಸಮಾಗಮ” ; ವಿವಿಧ ಸಾಧಕರಿಗೆ ಸನ್ಮಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸ್ವಜಾತಿ ಬಾಂಧವರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಕುಂದಾಪುರ ಜೆಸಿಯ ಆತಿಥ್ಯದಲ್ಲಿ ನಡೆದ ಲಾಟ್ಸ್ ನಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ಪ್ರಶಸ್ತಿ

Suddi Udaya

ಮುಂಡಾಜೆ: ಬಂಟರ ಸಂಘದ ಸಹಯೋಗದಲ್ಲಿ ಮನೆ ನಿರ್ಮಾಣಕ್ಕೆ ಸಹಕಾರ

Suddi Udaya

ಕುತ್ಲೂರು: ಅಕ್ರಮ ಗೋಮಾಂಸ ಸಾಗಾಟ : ಇಬ್ಬರು ಆರೋಪಿಗಳು ಪೊಲೀಸರ ವಶ

Suddi Udaya
error: Content is protected !!