25 C
ಪುತ್ತೂರು, ಬೆಳ್ತಂಗಡಿ
September 28, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆ: ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ.

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ನಿಂದ ನಡೆಸಲ್ಪಡುವ ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಏ. 4 ರಂದು ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವನ್ನು ಎಲ್ ಸಿ ಆರ್ ಸಭಾಂಗಣದಲ್ಲಿ ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮವು ಬೆಳಗ್ಗೆ 10 ಗಂಟೆಗೆ ಸರಿಯಾಗಿ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು.

ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೋ ಸಂಸ್ಥೆಯ ಬಗ್ಗೆ ಮಾತನಾಡಿ, ವಿದ್ಯಾರ್ಥಿಗಳಿಗೆ ಮುಂದಿನ ಹಂತದ ಶಿಕ್ಷಣಕ್ಕೆ ಬೇಕಾದ ಪೂರಕ ಮಾಹಿತಿಗಳನ್ನು ನೀಡಿ, ಶಿಕ್ಷಣ ಮತ್ತು ಜೀವನ ಇವೆರಡರ ಮಹತ್ವವನ್ನು ತಿಳಿಸಿ ವಿದ್ಯಾರ್ಥಿಗಳ ಮುಂದಿನ ಜೀವನಕ್ಕೆ ಶುಭ ಹಾರೈಸಿದರು.

ಸಂಸ್ಥೆಯ ಸಂಯೋಜಕರಾದ ಯಶವಂತ್ ಜಿ. ನಾಯಕ್ ಮಾತನಾಡಿ ವಿದ್ಯಾರ್ಥಿ ಜೀವನಕ್ಕೆ ಬೇಕಾದ ಪ್ರಮುಖ ಮೌಲ್ಯಗಳನ್ನು ತಿಳಿಸಿ ಅವರ ಮುಂದಿನ ಶೈಕ್ಷಣಿಕ ಬದುಕಿಗೆ ಶುಭ ಹಾರೈಸಿದರು.

ತದನಂತರ ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ವಿಜಯ ನೆರೆದಿದ್ದ ಎಲ್ಲಾ ಎಸ್ಎಸ್ಎಲ್ ಸಿ ವಿಧ್ಯಾರ್ಥಿಗಳಿಗೆ ಸ್ಮರಣಿಕೆಯನ್ನು ನೀಡಿ ಅವರ ಮುಂದಿನ ಶೈಕ್ಷಣಿಕ ಜೀವನಕ್ಕೆ ಪ್ರೇರಣದಾಯಕ ಮಾತುಗಳ ಮೂಲಕ ಶುಭ ಹಾರೈಸಿದರು.

ಕಾರ್ಯಕ್ರಮದ ಕೇಂದ್ರಬಿಂದುಗಳಾದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಸಂಸ್ಥೆಯ ಬಗ್ಗೆ ಹಾಗೂ ಮಾರ್ಗದರ್ಶನ ನೀಡಿದ ಎಲ್ಲಾ ಶಿಕ್ಷಕ ವೃಂದದವರನ್ನು ಅಭಿನಂದಿಸಿ, ವಿದ್ಯಾಸಂಸ್ಥೆಯಲ್ಲಿ ಕಳೆದ ಹಳೆಯ ನೆನಪುಗಳನ್ನು ಮೆಲುಕು ಹಾಕಿ ಭಾವನಾತ್ಮಕವಾಗಿ ತಮ್ಮತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಸಂಸ್ಥೆಯ ಗುರುವೃಂದದವರು ವಿದ್ಯಾರ್ಥಿಗಳ ಬಗ್ಗೆ ಅಭಿಪ್ರಾಯ ಗಳನ್ನು ಹಂಚಿಕೊಂಡು ಶುಭ ಹಾರೈಸಿದರು.

ತದನಂತರ ವಿವಿಧ ವಿನೋದಾವಳಿ ಆಟಗಳು, ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳನ್ನು ಮನರಂಜಿಸಿದರು.

ವಿಶೇಷವಾಗಿ ಸಂಸ್ಥೆಯಲ್ಲಿ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳು ಕಳೆದ ಸುಂದರ ಕ್ಷಣಗಳನ್ನು ದೃಶ್ಯಾವಳಿಗಳ ಮೂಲಕ ಮೆಲುಕು ಹಾಕಿ ಎಲ್ಲರನ್ನೂ ಭಾವುಕರನ್ನಾಗಿಸಿದರು.

ನೆರೆದಿದ್ದ ಎಲ್ಲರಿಗೂ ಸವಿರುಚಿ ಭೋಜನದ ವ್ಯವಸ್ಥೆಯನ್ನು ಮಾಡಲಾಗಿತ್ತು. ಸಂಭ್ರಮದ ಈ ಕಾರ್ಯಕ್ರಮವನ್ನು ಒಂಬತ್ತನೇ ತರಗತಿ ವಿದ್ಯಾರ್ಥಿಗಳು ಸುಂದರವಾಗಿ ಆಯೋಜಿಸಿದರು.

ವಿದ್ಯಾರ್ಥಿ ಗೌತಮ್ ಎಲ್ಲರನ್ನೂ ಸ್ವಾಗತಿಸಿ, ಸಮನ್ವಿ ಮತ್ತು ಅದಿತಿ ಎಂ. ಪ್ರಭು ನಿರೂಪಿಸಿ ಹವಿಶ್ ವಂದಿಸಿದರು. ಕಾರ್ಯಕ್ರಮವು ಅರ್ಥಪೂರ್ಣವಾಗಿ
ಸಂಪನ್ನಗೊಂಡಿತು.

Related posts

ಬೆಳ್ತಂಗಡಿ :ಪಿ.ಎಂ.ಶ್ರೀ .ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಯೂತ್ ನ್ಯಾಷನಲ್ ವಾಲಿಬಾಲ್ ಚಾಂಪಿಯನ್‌ಶಿಪ್‌ : ಉಜಿರೆಯ ಎಸ್.ಡಿ.ಎಂ ವಿದ್ಯಾರ್ಥಿಗಳ ಸಾಧನೆ

Suddi Udaya

ಉಜಿರೆ ಅನುಗ್ರಹ ಶಾಲಾ ಮಂತ್ರಿಮಂಡಲದ ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya

ವಾಣಿ ಕಾಲೇಜು: ವಾಣಿಜ್ಯ ಸಂಘದ ವತಿಯಿಂದ ‘ಲೀಡರ್ಸ್ ಟಾಕ್’ ಉಪನ್ಯಾಸ ಕಾರ್ಯಕ್ರಮ

Suddi Udaya

ಎಸ್ಸೆಸ್ಸೆಲ್ಸಿ ಇಂಗ್ಲೀಷ್ ಪರೀಕ್ಷೆಯಲ್ಲಿ 25ಮಂದಿ ಗೈರು

Suddi Udaya
error: Content is protected !!