27.1 C
ಪುತ್ತೂರು, ಬೆಳ್ತಂಗಡಿ
September 27, 2026
ಶಾಲಾ ಕಾಲೇಜು

ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ 2025-26

ಬೆಳ್ತಂಗಡಿ: ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ 2025-26ನೇ ಶೈಕ್ಷಣಿಕ ವರ್ಷದ ವಾರ್ಷಿಕ ವಿಶೇಷ ಶಿಬಿರವು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಕೊಯ್ಯೂರು ಕಸಬಾ ಇಲ್ಲಿ ಏ.3ರಂದು ಉದ್ಘಾಟನೆಗೊಂಡಿತು.

ಉದ್ಘಾಟನೆಯನ್ನು ರವೀಂದ್ರನಾಥ ಗೌಡ ಪೆರ್ಮುದೇ, ಅಧ್ಯಕ್ಷರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಕೊಯ್ಯೂರು ಉದ್ಘಾಟಿಸಿ ರಾಷ್ಟ್ರೀಯ ಸೇವಾ ಯೋಜನೆಗಳ ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕೆಂದು ಹೇಳಿದರು.

ವಿದ್ಯಾರ್ಥಿಗಳು ಈ ಶಿಬಿರದ ಸಂಪೂರ್ಣ ಸದುಪಯೋಗವನ್ನು ಮಾಡಿಕೊಳ್ಳಬೇಕೆಂದು ಕರೆಕೊಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಸವಿತಾ ವಹಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುಕೇಶ್ ಕುಮಾರ್, ಶಾಲಾ ಅಭಿವೃದ್ಧಿ ಮೇಲುಸ್ಟುವಾರಿ ಸಮಿತಿಯ ಅಧ್ಯಕ್ಷ ಜಗನ್ನಾಥ ಎಂ., ಶಾಲಾ ಮುಖ್ಯೋಪಾಧ್ಯಾಯರಾದ ವಸಂತಿ ಕೆ.ಎನ್., ಕೊಯೂರು ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷರಾದ ದಯ ದಯಾಮಣಿ, ಶ್ರೀರಾಮ ಭಜನಾ ಮಂಡಳಿ ಮಲೆಬೆಟ್ಟು ಇದರ ಅಧ್ಯಕ್ಷ ದೇಜಪ್ಪ ಪೂಜಾರಿ , ರಿಕ್ಷಾ ಮಾಲಕರ ಮತ್ತು ಚಾಲಕರ ಸಂಘದ ಕಾರ್ಯದರ್ಶಿ ಸಂತೋಷ್, ಜುಮ್ಮಾಮಸೀದಿ ಮಲೆಬೆಟ್ಟು ಇದರ ಅಧ್ಯಕ್ಷ ಅಬೂಬಕ್ಕರ್ , ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ಘಟಕದ ಯೋಜನಾಧಿಕಾರಿ ಗಣೇಶ್ ಬಿ. ಶಿರ್ಲಾಲು , ಶಾಲೆಯ ತಾಯಂದಿರ ಸಮಿತಿಯ ಅಧ್ಯಕ್ಷರಾದ ಜಯಂತಿ. ಉಪಸಿತರಿದ್ದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಬಿ.ಎ. ಶಮಿಉಲ್ಲಾ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಸಹಯೋಜನಾಧಿಕಾರಿ ಅಂಬಿಕಾ ಧನ್ಯವಾದ ಗೈದರು, ಸಹ ಯೋಚನಾಧಿಕಾರಿಗಳಾದ ಸತೀಶ್ ಸಾಲಿಯಾನ್ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಸಾರ್ವತ್ರಿಕ ಚುನಾವಣೆ ಮಾದರಿಯಲ್ಲಿ ನಡೆದ ಮನ್ಶರ್ ವಿದ್ಯಾರ್ಥಿ ಸಭಾ ಚುನಾವಣೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಇಂದು ಮಧ್ಯಾಹ್ನ 12ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ

Suddi Udaya

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ‘ಪರೋಪಕಾರ ಸಪ್ತಾಹ’

Suddi Udaya

ನಿಡ್ಲೆ , ಪೆರ್ಲ, ಕೊಕ್ಕಡ ವಲಯ ಮಟ್ಟದ ಖೋ ಖೋ ಪಂದ್ಯಾಟ

Suddi Udaya

ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಾರ್ಪಿಕೋತ್ಸವ ಹಾಗೂ ಪ್ರೌಢಶಾಲೆಯ ಬೆಳ್ಳಿ ಮಹೋತ್ಸವದ ಸಮಾರೋಪ

Suddi Udaya
error: Content is protected !!