25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸರ್ಕಾರಿ ಇಲಾಖಾ ಸುದ್ದಿ

ಏಪ್ರಿಲ್ 7ಕ್ಕೆ ಪಿಯು, 24ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ ನಿರೀಕ್ಷೆ

ಬೆಳ್ತಂಗಡಿ: ಫೆ.28 ರಿಂದ ಮಾರ್ಚ್ 17ರವರೆಗೆ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ-1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯಗೊಂಡಿದ್ದು, ಏ. 7ರಂದು ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ.

‘ಈಗಾಗಲೇ ಮೌಲ್ಯಮಾಪನ ಕಾರ್ಯ ಮುಕ್ತಾಯವಾಗಿದ್ದು, ಫಲಿತಾಂಶ ಬಿಡುಗಡೆಗೆ ಅಗತ್ಯ ಸಿದ್ಧತೆ ನಡೆಯುತ್ತಿದೆ. ಶೀಘ್ರದಲ್ಲಿಯೇ ಅಧಿಕೃತ ಫಲಿತಾಂಶದ ದಿನಾಂಕ ಪ್ರಕಟಿಸಲಾಗುವುದು,” ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷ ಪ್ರಕಾಶ್ ನಿಟ್ಟಾಲಿ ತಿಳಿಸಿದ್ದಾರೆ.

ಈ ಬಾರಿ 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿ ಗಳು ಪಿಯುಸಿ ಪರೀಕ್ಷೆ-1 ಬರೆದಿದ್ದರು. ಮಾರ್ಚ್ 20ರಿಂದ ಮೌಲ್ಯಮಾಪನ ಕಾರ್ಯ ಆರಂಭಗೊಂಡಿತ್ತು. ಪರೀಕ್ಷಾ ಮಂಡಳಿ ಈಗಾಗಲೇ ತಿಳಿಸಿದ್ದ ಸಂಭಾವ್ಯ ದಿನಾಂಕದಂತೆ ಏ. 7ರಂದು ಫಲಿತಾಂಶ ಪ್ರಕಟವಾಗುವ ನಿರೀಕ್ಷೆಯಿದೆ.

ಎಸ್ಸೆಸ್ಸೆಲ್ಸಿ ಪರೀಕ್ಷೆ-1 ಮುಕ್ತಾಯ ವಾಗಿದ್ದು, ಏ.5 ರಿಂದ 20 ರವರೆಗೆ ಮೌಲ್ಯಮಾಪನ ಕಾರ್ಯ ನಡೆಯಲಿದೆ. ಮಂಡಳಿಯ ತಾತ್ಕಾಲಿಕ ವೇಳಾಪಟ್ಟಿಯಂತೆ ಏ. 24ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗುವ ನಿರೀಕ್ಷೆಯಿದೆ. ಈ ಬಾರಿ 8 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

ಕೀ-ಉತ್ತರ ಪ್ರಕಟ: 2026ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-1ರ ಕೀ ಉತ್ತರವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವೆಬ್‌ಸೈಟ್ ನಲ್ಲಿ ಪ್ರಕಟಿಸಿದೆ. ಕೀ ಉತ್ತರಗಳಿಗೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರಿಂದ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ನೀಡಲಾಗಿದ್ದು, ಏ.5ರ ಒಳಗಾಗಿ ಆಕ್ಷೇಪಣೆ ಸಲ್ಲಿಸಬಹುದು ಎಂದು ಮಂಡಳಿ ತಿಳಿಸಿದೆ.

ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಕೀ ಉತ್ತರಗಳನ್ನು ಪಡೆದು, ಆಕ್ಷೇಪಣೆ ಸಲ್ಲಿಸಬಹುದು. ಏ.5ರ ಸಂಜೆ 5.30 ಗಂಟೆ ಬಳಿಕ ಬರುವ ಆಕ್ಷೇಪಣೆಗಳನ್ನು ಪರಿಗಣಿಸ ಲಾಗುವುದಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಿರ್ದೇಶಕ ಗೋಪಾಲಕೃಷ್ಣ ತಿಳಿಸಿದ್ದಾರೆ.

Related posts

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಡಾ. ಡಿ. ಹೆಗ್ಗಡೆಯವರಿಂದ ರೂ.25 ಲಕ್ಷ ಅನುದಾನ

Suddi Udaya

ಉಜಿರೆಯಲ್ಲಿ ಯಕ್ಷಭಾರತಿಯಿಂದ ತಾಳಮದ್ದಳೆ

Suddi Udaya

ಅಭ್ಯಾಸ್ ಪಿ .ಯು ಕಾಲೇಜಿನಲ್ಲಿ ಕನಕದಾಸ ಜಯಂತಿಯ ಆಚರಣೆ

Suddi Udaya

ರಕ್ತೇಶ್ವರಿಪದವು ಪೌಷ್ಟಿಕಾಹಾರ ಪೋಷಣ್ ಅಭಿಯಾನ

Suddi Udaya

ಕಳೆoಜ: ನಾಟಿ ವೈದ್ಯೆ ಕಮಲ ನಿಧನ

Suddi Udaya

ಫೆ.6-14: ಗುರುವಾಯನಕರೆ ಉರೂಸ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!