25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತೋಟತ್ತಾಡಿ ಗ್ರಾಮದ ದಡ್ಡುಗೆ ಲೋಕೋಪಯೋಗಿ ಸಚಿವರ ಭೇಟಿ: ಸ್ಥಳೀಯರ ಅಹವಾಲು ಸ್ವೀಕಾರ

ಬೆಳ್ತಂಗಡಿ: ತಾಲೂಕಿನ ವಿವಿಧ ಕಾರ್ಯಕ್ರಮಗಳಿಗೆ ಆಗಮಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಇವರ ಮನವಿ ಮೇರೆಗೆ ತೋಟತ್ತಾಡಿ ಗ್ರಾಮದ ದಡ್ಡುಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಸ್ಥಳೀಯರು ಸಚಿವರಲ್ಲಿ ತೋಟತ್ತಾಡಿ ಗ್ರಾಮದ ದಟ್ಟು ಪರಿಸರದ ನಿವಾಸಿಗಳು ತಮ್ಮ ಯಾವುದೇ ಕೆಲಸ ಕಾರ್ಯಗಳಿಗೆ ಜಾಕೆಡಿಯಿಂದ ದುಡ್ಡು ಮೂಲಕ ಹರಿವ ನದಿಯನ್ನು ದಾಟಿ ಹೋಗಬೇಕಾಗುತ್ತದೆ. ಮರದ ತಾತ್ಕಾಲಿಕ ಕಾಲು ಸಂಕ ಇದ್ದರೂ ಮಳೆಗಾಲದಲ್ಲಿ ಅದರಲ್ಲಿ ಹೋಗೋದು ಅಪಾಯಕಾರಿಯಾಗುತ್ತದೆ. ಹಾಗಾಗಿ ಇದರಲ್ಲಿ ಶಾಲಾ ಮಕ್ಕಳು ಕಾಲೇಜು ವಿದ್ಯಾರ್ಥಿಗಳು ಇದರಲ್ಲಿ ಹೋಗಲು ಭಯಪಡುತ್ತಾರೆ. ಇಲ್ಲಿ ಕಿರು ಸೇತುವೆಯ ಬಗ್ಗೆ ಸಚಿವರಲ್ಲಿ ಸ್ಥಳೀಯರು ಬೇಡಿಕೆಯನ್ನು ಇಟ್ಟರು ಸಚಿವರು ಪೂರಕವಾಗಿ ಸ್ಪಂದಿಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ನಾಗೇಶ್ ಕುಮಾರ್ ಗೌಡ, ಯಶೋಧರ ಚಾರ್ಮಾಡಿ, ಪ್ರದೀಪ್ ಕೆ ಸಿ, ಅಶ್ರಫ್ ನೆರಿಯ, ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು

Related posts

ಬಿಜೆಪಿ ಯುವ ಮೋರ್ಚಾ ನಾಯಕರಿಗೆ ನ್ಯಾಯಾಲಯದಿಂದ ಜಾಮೀನು ಮಂಜೂರು “ಸತ್ಯ ಧರ್ಮಕ್ಕೆ ಸಂದ ಜಯ”: ಶಾಸಕ ಹರೀಶ್ ಪೂಂಜ

Suddi Udaya

ವೇಣೂರು ತುಳುನಾಡ ಜವನೆರ್ ಹೆಚ್.ಪಿ.ಎಲ್ ಸೀಸನ್ -7 ರ ಪದಾಧಿಕಾರಿಗಳ ಆಯ್ಕೆ

Suddi Udaya

ಪುದುವೆಟ್ಟು ಶ್ರೀಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಇಂಗ್ಲೀಷ್ ಇಟಾಲಿಕ್ ಬರವಣಿಗೆಯ ತರಬೇತಿ

Suddi Udaya

ಭಾರತೀಯ ಸೇನೆಯಲ್ಲಿ 28 ವರ್ಷಗಳ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸಿದ ಸುಬೇದಾರ್ ಮೇಜರ್ ಶಿವಕುಮಾರ್ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ

Suddi Udaya

ಕಳಿಯ ಗ್ರಾ. ಪಂ ವ್ಯಾಪ್ತಿಯಲ್ಲಿ ಹಲವಾರು ಕಡೆಗಳಲ್ಲಿ ವಿದ್ಯುತ್ ತಂತಿಗಳು ಅಪಾಯದ ಸ್ಥಿತಿಯಲ್ಲಿ :ಸೂಕ್ತ ಕ್ರಮಕ್ಕೆ ನಾಗರಿಕರ ಆಗ್ರಹ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ ಸಂಪನ್ನ: ಶ್ರೀ ಭೂತ ಬಲಿ

Suddi Udaya
error: Content is protected !!