32 C
ಪುತ್ತೂರು, ಬೆಳ್ತಂಗಡಿ
October 2, 2026
ಕೃಷಿಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಚಾರ್ಮಾಡಿ: ತ್ರಿವರ್ಣ ಸಂಜೀವಿನಿ ಗ್ರಾ.ಪಂ. ಮಟ್ಟದ ಮಹಿಳಾ ಒಕ್ಕೂಟ ಮತ್ತು ಗ್ರಾಮ ಪಂಚಾಯತ್ ಆಶ್ರಯದಲ್ಲಿ ಮಹಿಳಾ ದಿನಾಚರಣೆ

ಚಾರ್ಮಾಡಿ: ತ್ರಿವರ್ಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಮತ್ತು ಗ್ರಾಮ ಪಂಚಾಯತ್ ಚಾರ್ಮಾಡಿ ಇದರ ಆಶ್ರಯದಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮವು ಏ.4ರಂದು ನಡೆಯಿತು.

ಪ್ರಥಮವಾಗಿ ಸಂಜೀವಿನಿ ಮಾರಾಟ ಸಂತೆಯನ್ನು ಡಾ| ವಂದನ ಇರ್ವತ್ರಯ ವೈದ್ಯಧಿಕಾರಿ ಹಾಸ್ಪಿಟಲ್ ಕಕ್ಕಿಂಜೆ ಇವರು ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ತ್ರಿ ವರ್ಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಅಧ್ಯಕ್ಷರಾದ ಜಯಂತಿ ವಹಿಸಿಕೊಂಡಿದ್ದರು. ಬೆಳ್ತಂಗಡಿ ತಾಲೂಕು ಪಂಚಾಯತ್ ನ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕತಿ ಪ್ರತಿಮಾ ಕಾರ್ಯಕ್ರಮದ ಕುರಿತಾಗಿ ಪ್ರಾಸ್ತವಿಕ ನುಡಿಗ ಗಳನ್ನಾಡಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಜೋಸೆಫ್ ಪಿ ಎಸ್ ಆಡಳಿತ ಅಧಿಕಾರಿಗಳು ಗ್ರಾಮ ಪಂಚಾಯತ್ ಚಾರ್ಮಾಡಿ, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರಾದ ಹರಿಪ್ರಸಾದ್, ಪಂಚಾಯತ್ ಅಭಿವೃದ್ಧಿ ಅಧಿಕಾರಿಯದ ಪುರುಷೋತ್ತಮ್, ತಾಲೂಕು ಬ್ಲಾಕ್ ಮೆನೇಜರ್ ಕೃಷಿಯೇತರ ನಿತೇಶ್ ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಮೀನಾಕ್ಷಿ ಉಪನ್ಯಾಸಕರು ರಾಜ್ಯಶಾಸ್ತ್ರ ವಿಭಾಗ ವಾಣಿ ಪದವಿ ಕಾಲೇಜು, ಬೆಳ್ತಂಗಡಿ ಮಹಿಳಾ ದಿನಾಚರಣೆಯ ಮಹತ್ವ ಪ್ರಾಮುಖ್ಯತೆ ಕುರಿತು ಜಾಗೃತಿಯನ್ನು ಮೂಡಿಸಿದರು.

ಸಭಾ ಕಾರ್ಯಕ್ರಮದ ಬಳಿಕ ವೈವಿಧ್ಯಮಯ ಸಂಸ್ಕೃತ ಕಾರ್ಯಕ್ರಮಗಳು ನಡೆದವು. ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಬೆಳ್ತಂಗಡಿ ತಾಲೂಕಿನ ಗ್ರಾಮ ಮಟ್ಟದ ಮಹಿಳಾ ಒಕ್ಕೂಟಗಳಿಂದ ಉತ್ಪಾದಿಸಿದ ವಸ್ತುಗಳ ಮಾರಾಟ ಮತ್ತು ಪ್ರದರ್ಶನವನ್ನು ಏರ್ಪಡಿಸಲಾಗಿತ್ತು.
ಈ ಸಂದರ್ಭದಲ್ಲಿ ತ್ರಿವರ್ಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಇದರ ಸರ್ವ ಪದಾಧಿಕಾರಿಗಳು, ಸ್ವ ಸಹಾಯ ಸಂಘದ ಸದಸ್ಯರು, ಒಕ್ಕೂಟದ ಸಿಬ್ಬಂದಿಗಳು, ಬೆಳ್ತಂಗಡಿ ತಾಲೂಕಿನ ಇತರ ಒಕ್ಕೂಟಗಳ ಮುಖ್ಯ ಪುಸ್ತಕ ಬರಹಗಾರರು, ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳು, ಕೃಷಿ ಶಕ್ತಿ ಪಶುಸಕ್ಕಿ ಪದಾಧಿಕಾರಿಗಳು, ಚಾರ್ಮಾಡಿ ಗ್ರಾಮದ ಸಜ್ಜನ ನಾಗರಿಕ ಬಂಧುಗಳು, ಬೆಳ್ತಂಗಡಿ ಸಂಜೀವಿನಿ ಅಭಿಯಾನ ನಿರ್ವಹಣ ಘಟಕದ ವಲಯ ಮೇಲ್ವಿಚಾರಕರಾದ ಜಯನಂದ, ಸ್ವಸ್ತಿಕ್ ಜೈನ್, ವೀಣಾ, ಶ್ರೀಕಲಾ ಉಪಸ್ಥಿತರಿದ್ದರು.
ರಾಜೇಶ್ವರಿ ಕಾರ್ಯಕ್ರಮ ನಿರೂಪಿಸಿ, ಭವ್ಯ ಸ್ವಾಗತವಿತ್ತು, ಕೃಷಿ ಸಖಿ ಅಶ್ವಿನಿ ಧನ್ಯವಾದವಿತ್ತರು.

Related posts

ಮಹಾಮಂಡಲೇಶ್ವರ 1008 ಸದ್ಗುರು ಬ್ರಹ್ಮಾನಂದ ಸರಸ್ವತಿ ಜೀ ಮಹಾರಾಜರವರಿಂದ ಅಯೋಧ್ಯೆಯಲ್ಲಿ ರಾಮ ಜನ್ಮಭೂಮಿ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರಿಗೆ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಅಯೋಧ್ಯೆಯ ಶಾಖಾ ಮಠದ ಭೂಮಿ ಪೂಜೆಗೆ ಆಹ್ವಾನ

Suddi Udaya

ನೆರಿಯ : ಪೆಟ್ರೋನೆಟ್ ಪೈಪ್ ಲೈನ್ ನಿಂದ ಪೆಟ್ರೋಲ್ ಕಳ್ಳತನ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿ ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ

Suddi Udaya

ಕಳೆಂಜ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya

ಮಿತ್ತಬಾಗಿಲು ಗ್ರಾ.ಪಂ. ಮಾಜಿ ಸದಸ್ಯೆ ನಂದಾರು ನಿಧನ

Suddi Udaya

ಬೆಳ್ತಂಗಡಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಬಳಿ ಗುಡ್ಡ ಕುಸಿತ

Suddi Udaya
error: Content is protected !!