22.6 C
ಪುತ್ತೂರು, ಬೆಳ್ತಂಗಡಿ
July 23, 2026
ಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಹಸಿರು ಕ್ರಾಂತಿಯ ಹರಿಕಾರ ದಿ. ಡಾ. ಬಾಬು ಜಗಜೀವನ್ ರಾಮ್ ಜಯಂತಿ ಆಚರಣೆ

ಬೆಳ್ತಂಗಡಿ: ತಾಲೂಕು ಆಡಳಿತ, ತಾಲೂಕು ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಪಟ್ಟಣ ಪಂಚಾಯತ್ ಬೆಳ್ತಂಗಡಿ ಇದರ ಸಂಯುಕ್ತ ಆಶ್ರಯದಲ್ಲಿ ಹಸಿರು ಕ್ರಾಂತಿಯ ಹರಿಕಾರ ದಿ. ಡಾ. ಬಾಬು ಜಗಜೀವನ್ ರಾಮ್ ಜಯಂತಿಯನ್ನು ತಾಲೂಕು ಕಚೇರಿ ಬೆಳ್ತಂಗಡಿ ಇಲ್ಲಿ ಆಚರಿಸಲಾಯಿತು.

ಬೆಳ್ತಂಗಡಿ ತಾಲೂಕಿನ ತಹಶೀಲ್ದಾರರಾದ ಪ್ರಥ್ವಿ ಸಾನಿಕಂ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಗಳಾದ ಭವಾನಿ ಶಂಕರ್, ಕಾರ್ಯನಿರ್ವಾಣಾಧಿಕಾರಿಗಳು ತಾಲೂಕು ಪಂಚಾಯತ್, ಬೆಳ್ತಂಗಡಿ ಇವರು ಎಲ್ಲಾ ಅತಿಥಿ ಗಣ್ಯರೊಂದಿಗೆ ದೀಪ ಪ್ರಜ್ವಲನಗೊಳಿಸಿ ಡಾ. ಬಾಬು ಜಗಜೀವನ್ ರಾಮ್ ಇವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ , ಡಾ. ಬಾಬು ಜಗಜೀವನ್ ರಾಮ್ ಅವರ ಆದರ್ಶಗಳನ್ನು ಹಾಗೂ ಅವರ ಜೀವನ ಸಾಧನೆಗಳ ಕುರಿತು ಮಾತನಾಡಿದರು.

ಸಂಪನ್ಮೂಲ ವ್ಯಕ್ತಿಯಾಗಿ ಅರವಿಂದ ಚೊಕ್ಕಾಡಿ, ಸಹ ಶಿಕ್ಷಕರು, ಮುರಾರ್ಜಿ ದೇಸಾಯಿ ವಸತಿ ಶಾಲೆ ಮುಂಡಾಜೆ ಇವರು ಮಾತನಾಡಿ “ಪರಿಶ್ರಮದಿಂದ ಮಾತ್ರ ಜ್ಞಾನ ಗಳಿಸಲು ಸಾಧ್ಯ. ಶಿಸ್ತುಬದ್ಧವಾಗಿ ನಡೆದುಕೊಂಡಾಗ ಸಾಧನೆ ಸಾಧ್ಯ. ಅವಕಾಶಗಳನ್ನು ಹೇಗೆ ಉತ್ತಮ ರೀತಿಯಲ್ಲಿ ಬಳಸಿಕೊಳ್ಳಬೇಕು ಎಂಬುದನ್ನು ಡಾ. ಬಾಬು ಜಗಜೀವನ್ ರಾಮ್ ಇವರ ಜೀವನ ನಿದರ್ಶನಗಳೊಂದಿಗೆ ಉತ್ತಮವಾಗಿ ಮನದಟ್ಟು ಮಾಡಿದರು.”

ಕಾರ್ಯಕ್ರಮದಲ್ಲಿ ಸಹಾಯಕ ನಿರ್ದೇಶಕರಾದ ಧನಂಜಯ್ ಸಮಾಜ ಕಲ್ಯಾಣ ಇಲಾಖೆ ಇವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಹೇಮಲತಾ, ಮೇಲ್ವಿಚಾರಕರು, ಡಾಕ್ಟರ್ ಬಿ ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯ ಬೆಳ್ತಂಗಡಿ ಇವರು ಸ್ವಾಗತಿಸಿ, ಬಸವರಾಜ್,‌ ಮೇಲ್ವಿಚಾರಕರು ಪವರ್ಗದಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಉಜಿರೆ – ಇವರು ವಂದಿಸಿದರು.

ಡಾ. ಅರ್ಷಿಯ, ಮೇಲ್ವಿಚಾರಕರು ಡಾ. ಬಿಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ ವೇಣೂರು – ಇವರು ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು, ವಿವಿಧ ವಿದ್ಯಾರ್ಥಿ ನಿಲಯಗಳ ವಿದ್ಯಾರ್ಥಿಗಳು ಹಾಜರಿದ್ದರು.

Related posts

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಗೆ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಿಬ್ಬಂದಿಗಳಿಬ್ಬರಿಂದ ಸಂಘದ ಲಕ್ಷಾಂತರ ಹಣ ದುರುಪಯೋಗ ಬೆಳಕಿಗೆ

Suddi Udaya

ಕೊಯ್ಯೂರು ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಮಿತ್ತಬಾಗಿಲು ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರದಲ್ಲಿ ನಡೆಯಿತೊಂದು ಪವಾಡ: ಕಲಶೋತ್ಸವ ಸಂದರ್ಭದಲ್ಲಿ ಮಾಂಗಲ್ಯ ಸರಮಾಲೆ ಕಳೆದುಕೊಂಡ ಮಹಿಳೆಗೆ ಮಂದಿರದ ಆವರಣದಲ್ಲೇ ಸಿಕ್ಕಿತು ಮಾಂಗಲ್ಯ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ರವರ 134 ನೇ ಜನ್ಮದಿನಾಚರಣೆ

Suddi Udaya

ಕಲ್ಲೇರಿ: ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya
error: Content is protected !!