23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರಾಜ್ಯಮಟ್ಟದ ‘ಎಸ್.ಡಿ.ಎಂ ಉದ್ಯೋಗಂ – 2026’ ಗೆ ಚಾಲನೆ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ ಇದರ ಆಶ್ರಯದಲ್ಲಿ ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನಲ್ಲಿ ಆಯೋಜಿಸಲಾದ ಎರಡು ದಿನಗಳ ‘ಎಸ್.ಡಿ.ಎಂ ಉದ್ಯೋಗಂ-2026’ ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ ನೀಡಲಾಯಿತು.

ರಾಜ್ಯ ಮಟ್ಟದ ಉದ್ಯೋಗ ಮೇಳವನ್ನು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್ ಚಾಲನೆ ನೀಡಿದರು. ಬಳಿಕ ಮಾತನಾಡಿದ ಇವರು, ಶೈಕ್ಷಣಿಕ ಕ್ಷೇತ್ರದ ಎಲ್ಲಾ ವಲಯಗಳಲ್ಲಿನ ಬಹುದೊಡ್ಡ ಸವಾಲು ಎಂದರೆ ಉದ್ಯೋಗದ ಅವಕಾಶಗಳು. ಅನೇಕ ಉದ್ಯೋಗಾಕಾಂಕ್ಷಿಗಳು ಸಮರ್ಥರಾಗಿದ್ದರೂ ನುರಿತ ಅವಕಾಶಗಳಿಂದ ವಂಚಿತಾರಾಗಿರುತ್ತಾರೆ. ಇದಕ್ಕೆ ಕಾರಣ ಹಲವು ಆಯಾಮಗಳಲ್ಲಿ ಗುರುತಿಸಬವುದು ಆದರೆ ಪ್ರಮುಖ ಕಾರಣವೆಂದರೆ ಉದ್ಯೋಗ ದಾತರು ಮತ್ತು ಉದ್ಯೋಗಾಕಾಂಕ್ಷಿಗಳ ನಡುವಿನ ಅಂತರ. ಇದಕ್ಕೆ ಪರಿಹಾರೋಪಾಯ ಮಾರ್ಗವಾಗಿ ಉಜಿರೆಯಂತಹ ಗ್ರಾಮೀಣ ಪ್ರದೇಶಕ್ಕೆ ದೇಶದ ನೂರಕ್ಕೂ ಅಧಿಕ ಸಂಸ್ಥೆಗಳನ್ನು ಕರೆಸಿ ಎರಡು ದಿನಗಳ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ವಿಶೇಷವಾಗಿ ಇದು ಎಸ್.ಡಿ.ಎಂ ಸಂಸ್ಥೆಯ ವಿದ್ಯಾರ್ಥಿಗಳಿಗೆ ಮಾತ್ರವಲ್ಲದೇ ಈ ಭಾಗದ ಎಲ್ಲಾ ಉದ್ಯೋಗ ಆಕಾಂಕ್ಷಿಗಳಿಗೆ ಸಂದರ್ಶನಕ್ಕಾಗಿ ಅನುವು ಮಾಡಿಕೊಡಲಾಗಿದೆ.

ಸಂಸ್ಥೆಯ ಅಧ್ಯಕ್ಷರಾದ ಡಾ.ಡಿ. ವಿರೇಂದ್ರ ಹೆಗ್ಗಡೆಯವರ ಆಶಯದಂತೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಯಾವುದೇ ರೀತಿಯ ಅವಕಾಶ ಮತ್ತು ಸವಲತ್ತುಗಳಿಂದ ವಂಚಿತರಾಗಬಾರದು ಎಂಬ ಸದಾಶಯ ದಂತೆ ಇದನ್ನು ಆಯೋಜಿಸಲಾಗಿದೆ. ಇದು ಬೃಹತ್ ಸಂಖ್ಯೆಯ ಗ್ರಾಮೀಣ ಭಾಗಗಳ ವಿದ್ಯಾರ್ಥಿ ಸಮೂಹಕ್ಕೆ ಅವಕಾಶ ಮತ್ತು ಹೊಸ ಅನುಭವವನ್ನು ನೀಡಲಿದೆ ಎಂದು ಶುಭ ಹಾರೈಸಿದರು.

ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಅಗ್ರಿಲೀಫ್ ಸಂಸ್ಥೆಯ ಸಂಸ್ಥಾಪಕರು ಮತ್ತು ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿರುವ ಅವಿನಾಶ್ ರಾವ್ ಮಾತನಾಡಿ, ಹಿಂದೆ ಒಂದು ಪೀಳಿಗೆಗೊಮ್ಮೆ ಬದಲಾವಣೆ ಕಾಣುತ್ತಿದ್ದ ಬಹುತೇಕ ಕ್ಷೇತ್ರಗಳು ಇಂದು ಆಧುನಿಕ ಬೆಳವಣಿಗೆಯಿಂದಾಗಿ ಬಹುಬೇಗ ಬದಲಾವಣೆಯನ್ನು ಕಾಣುತ್ತಿದೆ. ಈ ಬದಲಾವಣೆಗೆ ವಿದ್ಯಾರ್ಥಿ ಸಮೂಹ ಒಗ್ಗಿಕೊಳ್ಳಬೇಕು. ಕೃತಕ ಬುದ್ಧಿಮತ್ತೆಯಂತ ತಂತ್ರಜ್ಞಾನ ಇಂದು ಎಲ್ಲೆಡೆ ಆವರಿಸಿದೆ. ಈ ನಡುವೆ ಯುವಕರು ಕೌಶಲ್ಯವಂತರಾಗಿ ಸುಸ್ಥಿರ ಸಾಧನೆಯತ್ತ ಸಾಗಬೇಕು.

ಉದ್ಯೋಗಾಕಾಂಕ್ಷಿಗಳಿಗೆ ತಮ್ಮ ಕ್ಷೇತ್ರದಲ್ಲಾಗುತಿರುವ ಬದಲಾವಣೆ ಮತ್ತು ಆ ಕುರಿತಾದ ಸಮಗ್ರ ಜ್ಜಾನದ ಅರಿವಿರಬೇಕು. ಸಾವಿರಾರು ಸಂಖ್ಯೆಯ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಿದ ಶಿಕ್ಷಣ ಸಂಸ್ಥೆಗಳಿಗೆ ತಂದೆ ತಾಯಿಯಂತೆ ಒಂದು ಉದ್ಯೋಗ ಪಡೆದು ಬದುಕು ಕಟ್ಟಿಕೊಳ್ಳಲು ಅನುವು ಮಾಡಿ ಕೊಡುವ ಜವಾಬ್ದಾರಿ ಇರುತ್ತದೆ. ಇಂತಹ ಮಹತ್ವದ ಕಾರ್ಯವನ್ನು ಎಸ್.ಡಿ.ಎಂ ಶಿಕ್ಷಣ ಸಂಸ್ಥೆ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸುವ ಮೂಲಕ ವಿದ್ಯಾರ್ಥಿಗಳಿಗೆ ಅವಕಾಶವನ್ನು ನೀಡುತ್ತಿದೆ ಎಂದರು.

ಕಾರ್ಯಕ್ರಮದ ವೇದಿಕೆಯಲ್ಲಿ ಅತಿಥಿಗಳಾದ ಅಗ್ರಿಲೀಫ್ ಸಂಸ್ಥೆಯ ಸಂಸ್ಥಾಪಕರು ಮತ್ತು ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿರುವ ಅವಿನಾಶ್ ರಾವೋ ರವರನ್ನು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಎಸ್‌.ಡಿ.ಎಂ ಸ್ವಾಯತ್ತ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಶ್ವನಾಥ್ ಪಿ, ಎಸ್ ಡಿ ಎಂ ಐಟಿ ಕಾಲೇಜು ಪ್ರಾಂಶುಪಾಲ ಡಾ. ಅಶೋಕ್ ಕುಮಾರ್ ಟಿ, ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಪ್ರಾಂಶುಪಾಲ ಸಂತೋಷ್, ಉದ್ಯೋಗ ಮೇಳದ ಆಯೋಜಕ ಸಮಿತಿಯ ಕಾರ್ಯದರ್ಶಿಗಳಾದ ಡಾ.ನಾಗರಾಜ್ ಪೂಜಾರಿ, ಡಾ.ಸುಬ್ರಹ್ಮಣ್ಯ ಮತ್ತು ಅಮರೇಶ್‌ ಹೆಬ್ಬಾರ್ ಉಪಸ್ಥಿತರಿದ್ದರು.

ಉದ್ಘಾಟನಾ ಸಮಾರಂಭದಲ್ಲಿ ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳ ವಿವಿಧ ಕಾಲೇಜುಗಳ ಮುಖ್ಯಸ್ಥರು, ಆಡಳಿತ ಕುಲಸಚಿವರು, ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಸೇರಿದಂತೆ ನೂರಾರು ಸಂಖ್ಯೆಯ ಉದ್ಯೋಗಾಕಾಂಕ್ಷಿಗಳು ಭಾಗಿಯಾಗಿದ್ದರು. ಉದ್ಘಾಟನಾ ಸಮಾರಂಭದಲ್ಲಿ ಕಾಲೇಜಿನ ವೈದೇಹಿ ಮತ್ತು ತಂಡದವರು ಪ್ರಾರ್ಥನೆಯನ್ನು ಹಾಡಿದರು. ಕಾರ್ಯಕ್ರಮವನ್ನು ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ. ಮಹೇಶ್ ಕುಮಾರ್ ಶೆಟ್ಟಿ ನಿರೂಪಿಸಿ, ವಂದಿಸಿದರು.

‘ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಶಿಕ್ಷಣ ಸಂಸ್ಥೆಯ ವತಿಯಿಂದ ಇದೊಂದು ಪ್ರಥಮ ಬಾರಿಗೆ ಆಯೋಜಿಸುತ್ತಿರುವ ಮಹತ್ವಾಕಾಂಕ್ಷೆಯ ಮತ್ತು ಅತ್ಯಂತ ಹೆಮ್ಮೆಯ ಕಾರ್ಯಕ್ರಮ. ಇದು ಸಾವಿರಾರು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸದುಪಯೋಗವಾಗುವುದರ ಜೊತೆಗೆ ಹೊಸ ಅವಕಾಶಗಳನ್ನು ಕಲ್ಪಿಸಿಕೊಡಲಿದೆ. ಭಾಗವಹಿಸುತ್ತಿರುವ ಎಲ್ಲಾ ಉದ್ಯೋಗಾಕಾಂಕ್ಷಿಗಳಿಗೆ ಶುಭಕೋರುತ್ತಾ, ಎಸ್.ಡಿ.ಎಂ ಉದ್ಯೋಗ ಮೇಳಕ್ಕೆ ಆಗಮಿಸಿದ ರಾಜ್ಯದ ಎಲ್ಲಾ ಪ್ರತಿಷ್ಠಿತ ಕಂಪೆನಿ ಮತ್ತು ಸಂಸ್ಥೆಗಳಿಗೆ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ವತಿಯಿಂದ ಧನ್ಯವಾದಗಳನ್ನು ತಿಳಿಸುತ್ತೇನೆ.’
– ಡಾ. ಸತೀಶ್ಚಂದ್ರ ಎಸ್
ಕಾರ್ಯದರ್ಶಿಗಳು ಎಸ್.ಡಿ.ಎಂ ಶಿಕ್ಷಣ ಸಂಸ್ಥೆ
ಉಜಿರೆ.

Related posts

ಕನ್ನಡ ರಾಜ್ಯೋತ್ಸವದಲ್ಲಿ ಸಂಸ್ಕೃತಿ ಸುವಾಸನೆ ಚೆಲ್ಲಿದ “ಕಾಯೌ ಶ್ರೀಗೌರಿ” ಉಜಿರೆ ಎಸ್‌ಡಿಎಂ ಪ್ರಕೃತಿ ಚಿಕಿತ್ಸಾ ಮಹಾವಿದ್ಯಾಲಯದಲ್ಲಿ ಭವ್ಯ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಅಚ್ಚಿನಡ್ಕದಲ್ಲಿ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ನಡ: ಸರಕಾರಿ ಪ.ಪೂ. ಕಾಲೇಜಿನಲ್ಲಿ ವಿವೇಕಾನಂದ ಜಯಂತಿ ಆಚರಣೆ

Suddi Udaya

ತಲೆಮರೆಸಿಕೊಂಡಿದ್ದ ಜ್ಯೋತಿಷಿಯನ್ನು ಹಿಡಿದು ನ್ಯಾಯಾಲಯಕ್ಕೆ ಹಾಜರುಪಡಿಸಿದ ಧರ್ಮಸ್ಥಳ ಪೊಲೀಸರು

Suddi Udaya

ಕಳೆಂಜ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ: ಅಂಗನವಾಡಿ ಕೇಂದ್ರಗಳ ಕಟ್ಟಡಗಳು ಶಿಥಿಲಾವ್ಯಸ್ಥೆಯಲ್ಲಿ ಇರುವುದರಿಂದ ನೂತನ ಕಟ್ಟಡ ರಚನೆಗೆ ಮನವಿ

Suddi Udaya
error: Content is protected !!