September 6, 2026
ಚಿತ್ರ ವರದಿಪುತ್ತೂರುಶಿಕ್ಷಣ ಸಂಸ್ಥೆ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ “ಯುರೇಕಾ- 2026” ರ ಉದ್ಘಾಟನೆ

ಪುತ್ತೂರು: ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಹಂತವು ವಿದ್ಯಾರ್ಥಿ ಜೀವನದ ಅತ್ಯಂತ ಸಂಕೀರ್ಣ ಘಟ್ಟವಾಗಿದ್ದು, ಈ ಹಂತದಲ್ಲಿ ಸ್ಪಷ್ಟತೆ ಹಾಗೂ ನಿಖರತೆ ಅತ್ಯಗತ್ಯವಾಗಿರುತ್ತದೆ. ಅದಕ್ಕಾಗಿ ಸ್ಪಷ್ಟ ಗುರಿ, ಕಠಿಣ ಪರಿಶ್ರಮ ಹಾಗೂ ಸಾಧಿಸುವ ಛಲ – ಈ ಮೂರು ಅಂಶಗಳನ್ನು ಸಮನ್ವಯವಾಗಿ ಬೆಳೆಸಿಕೊಂಡಾಗ ವಿದ್ಯಾರ್ಥಿ ತನ್ನ ಕನಸುಗಳನ್ನು ನಿಜವಾಗಿಸಿಕೊಳ್ಳಲು ಮಾತ್ರವಲ್ಲ, ಆತ್ಮವಿಶ್ವಾಸದಿಂದ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ ಎಂದು ಪುತ್ತೂರು ನೆಹರೂ ನಗರದ ವಿವೇಕಾನಂದ ಕೇಂದ್ರೀಯ ವಿದ್ಯಾಲಯದ ಆಡಳಿತ ಮಂಡಳಿ ಸಂಚಾಲಕಭರತ್ ಪೈ ಹೇಳಿದರು.

ಅವರು ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಏಪ್ರಿಲ್ 6 ರಿಂದ 11ರವರೆಗೆ ನಡೆಯಲಿರುವ ರಾಜ್ಯಮಟ್ಟದ ವ್ಯಕ್ತಿತ್ವ ವಿಕಸನ ಶಿಬಿರ “ಯುರೇಕಾ-2026″ ಇದರ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.

ಕಲಿಕೆಯು ಪುಸ್ತಕಗಳ ಪಾಠಗಳಲ್ಲಿ ಮಾತ್ರ ಸೀಮಿತವಾಗದೆ, ವ್ಯಕ್ತಿತ್ವವನ್ನು ರೂಪಿಸುವ, ಮೌಲ್ಯಗಳನ್ನು ಬೆಳೆಸುವ ಮತ್ತು ಸೃಜನಾತ್ಮಕ ಚಿಂತನೆಗೆ ಪ್ರೇರೇಪಿಸುವ ಶಕ್ತಿಯಾಗಿದೆ. ನಿಜವಾದ ಶಿಕ್ಷಣವು ನಮ್ಮೊಳಗಿನ ಸಾಮರ್ಥ್ಯವನ್ನು ಹೊರತಂದು, ಸಮಾಜದೊಂದಿಗೆ ಸಮನ್ವಯವಾಗಿ ಬದುಕುವ ದಾರಿಗೆ ದೀಪವಾಗುತ್ತದೆ ಎಂದು ನುಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತಮಂಡಳಿ ನಿರ್ದೇಶಕರಾದ ಡಾ. ಕೆ.ಎನ್ ಸುಬ್ರಹ್ಮಣ್ಯ ವಹಿಸಿಕೊಂಡು, ವಿವೇಕಾನಂದ ಪದವಿಪೂರ್ವ ಕಾಲೇಜು ಒಬ್ಬ ವಿದ್ಯಾರ್ಥಿ ಪಡೆದುಕೊಳ್ಳಬೇಕಾದ ಪರಿಪೂರ್ಣ ಶಿಕ್ಷಣವನ್ನು ಕಳೆದ ಹಲವಾರು ವರ್ಷಗಳಿಂದ ನೀಡುತ್ತಾ ಬಂದಿದೆ. ಸಂಸ್ಥೆ ಒದಗಿಸುತ್ತಿರುವ ಈ ಅವಕಾಶಗಳನ್ನು ವಿದ್ಯಾರ್ಥಿಗಳು ಪಡೆದುಕೊಂಡು ತಮ್ಮ ಭವಿಷ್ಯವನ್ನು ಭದ್ರಪಡಿಸಿಕೊಳ್ಳಬೇಕು. ವ್ಯಕ್ತಿತ್ವ ವಿಕಸನ, ಜೀವನ ಕೌಶಲ್ಯ, ತಂತ್ರಜ್ಞಾನ,ಕಲೆ ಮುಂತಾದ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆಗಳನ್ನು ಮಾಡಿದ ಸಂಪನ್ಮೂಲ ವ್ಯಕ್ತಿಗಳು ಮುಂದಿನ ಆರು ದಿನಗಳಲ್ಲಿ ಹಲವು ಅವಧಿಗಳನ್ನು ನಡೆಸಿಕೊಡಲಿದ್ದಾರೆ. ವಿದ್ಯಾರ್ಥಿಗಳು ದೊಡ್ಡ ಸಂಖ್ಯೆಯಲ್ಲಿ ಇದರಲ್ಲಿ ಭಾಗಿಗಳಾಗಿ ಸಾಕಷ್ಟು ವಿಚಾರಗಳನ್ನು ತಿಳಿದುಕೊಂಡು, ಮುಂದಿನ ಜೀವನಕ್ಕೆ ಅಡಿಪಾಯ ಹಾಕಿಕೊಳ್ಳುವಂತೆ ಕಿವಿಮಾತನ್ನಿತ್ತರು.

ಮುಖ್ಯ ಅತಿಥಿ ಬೆಂಗಳೂರಿನ ಶೈಕ್ಷಣಿಕ ಸಲಹೆಗಾರ ರಾಜೇಶ್ ಭಟ್ ಭಾಗವಹಿಸಿದರು. ಮುಂದಿನ ಆರು ದಿನಗಳ ಕಾಲ ನಡೆಯಲಿರುವ ಈ ಶಿಬಿರದಲ್ಲಿ ವಿವಿಧ ಕ್ಷೇತ್ರಗಳ ನುರಿತ ಸಂಪನ್ಮೂಲ ವ್ಯಕ್ತಿಗಳು ವಿದ್ಯಾರ್ಥಿಗಳಿಗಾಗಿ ವ್ಯತ್ಯಸ್ತ ವಿಷಯಗಳ ಮೇಲೆ ಹಲವು ಅವಧಿಗಳನ್ನು ನಡೆಸಿಕೊಡಲಿದ್ದಾರೆ.

ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದೇವಿಚರಣ್ ರೈ ಎಂ ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿದರು. ರಸಾಯನಶಾಸ್ತ್ರ ವಿಭಾಗದ ಉಪನ್ಯಾಸಕಿ ದಯಾಮಣಿ ಟಿ.ಕೆ ಕಾರ್ಯಕ್ರಮವನ್ನು ನಿರೂಪಿಸಿ, ಭೌತಶಾಸ್ತ್ರ ವಿಭಾಗದ ಉಪನ್ಯಾಸಕಿ ಕುಮಾರಿ ಸಂಪ್ರೀತಾ ವಂದಿಸಿದರು. ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಹಂಸಿನಿ ಪ್ರಾರ್ಥಿಸಿದರು.

Related posts

ಆದಿದ್ರಾವಿಡ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಗಣರಾಜ್ಯೋತ್ಸವ ಸಂಭ್ರಮಾಚರಣೆ

Suddi Udaya

ಕಳೆಂಜ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ- ಶವ ಮೇಲೆತ್ತಿದ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya

ಬೆಳ್ತಂಗಡಿ “ಜನ ಸ್ಪಂದನ ಕಾರ್ಯಕ್ರಮ ಮುಂದೂಡಿಕೆ

Suddi Udaya

ಉಜಿರೆ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯಲ್ಲಿ ‘ ನಶಾ ಮುಕ್ತ ಭಾರತ’ ಬೃಹತ್ ಜಾಗೃತಿ ಕಾರ್ಯಕ್ರಮ

Suddi Udaya

ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ :ಮೈರೋಳ್ತಡ್ಕದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮ

Suddi Udaya

ದ.ಕ. ಜಿಲ್ಲೆಯಲ್ಲಿ ಗಣೇಶ ಚತುರ್ಥಿಗೆ ಸೆ.19 ರಂದು ಸರ್ಕಾರಿ ರಜೆ

Suddi Udaya
error: Content is protected !!