September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಸ್ವಯಂ ಜನಗಣತಿ ಪ್ರಾರಂಭ

ಬೆಳ್ತಂಗಡಿ: ಭಾರತದ ಜನಗಣತಿಯ ಮೊದಲ ಹಂತವಾದ ಮನೆಗಳ ಪಟ್ಟಿ ಮತ್ತು ಮನೆ ಗಣತಿ'ಪ್ರಕ್ರಿಯೆಯು ಏಪ್ರಿಲ್ 1 ರಿಂದ ಅಧಿಕೃತವಾಗಿ ಆರಂಭಗೊಂಡಿದೆ. ಈ ಬಾರಿ ಸಾರ್ವಜನಿಕರಿಗೆ ತಮ್ಮ ವಿವರಗಳನ್ನು ತಾವೇ ಆನ್‌ಲೈನ್ ಮೂಲಕ ದಾಖಲಿಸಲು 'ಸ್ವಯಂ ಗಣತಿ' ಎಂಬ ವಿಶೇಷ ಅವಕಾಶ ಕಲ್ಪಿಸಲಾಗಿದೆ. ಕಂದಾಯ ಇಲಾಖೆ ಆದೇಶದಂತೆ, ಏ.೧ರಿಂದ ೧೫ರವರೆಗೆ ಸಾರ್ವಜನಿಕರು ಸ್ವಯಂ ಗಣತಿ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬಹುದಾಗಿದೆ. ಭಾರತ ಸರ್ಕಾರದ ಅಧಿಕೃತ ವೆಬ್ ಪೋರ್ಟಲ್ https://se.census.gov.in ಮೂಲಕ ಸಾರ್ವಜನಿಕರು ನೇರವಾಗಿ ಮನೆಯ ವಿವರಗಳನ್ನು ದಾಖಲಿಸಲು ಅವಕಾಶ ನೀಡಲಾಗಿದೆ. ಮನೆಯ ಒಬ್ಬ ಸದಸ್ಯರು ಸುಮಾರು 15 ರಿಂದ 20 ನಿಮಿಷಗಳಲ್ಲಿ ಕುಟುಂಬದ ವಿವರಗಳನ್ನು ಪೋರ್ಟಲ್‌ನಲ್ಲಿ ಭರ್ತಿ ಮಾಡಬಹುದು. ವಿವರಗಳನ್ನು ಸಲ್ಲಿಸಿದ ನಂತರ, ಅರ್ಜಿದಾರರ ಮೊಬೈಲ್ ಅಥವಾ ಇ-ಮೇಲ್‌ಗೆ ಸ್ವಯಂ ಗಣತಿ ಐಡಿ’ ಬರಲಿದೆ. ಮುಂದೆ ಗಣತಿದಾರರು ಮನೆಗೆ ಭೇಟಿ ನೀಡಿದಾಗ, ಈ ಐಡಿ ನೀಡಿ ಮಾಹಿತಿ ದೃಢೀಕರಿಸಬೇಕಾಗುತ್ತದೆ.

ಜಾಗೃತಿ ಮೂಡಿಸಲು ಸೂಚನೆ: ಪ್ರಕ್ರಿಯೆ ಸುಗಮ ಗೊಳಿಸಲು ಸರ್ಕಾರವು ಜಿಲ್ಲಾಧಿಕಾರಿ, ಪಾಲಿಕೆ ಆಯುಕ್ತರು, ಇಲಾಖಾ ಮುಖ್ಯಸ್ಥರಿಗೆ ಸೂಚನೆ ನೀಡಿದೆ. ಸರ್ಕಾರಿ ನೌಕರರು ಮಾತ್ರವಲ್ಲದೆ, ಸಾಮಾನ್ಯ ನಾಗರಿಕರಿಗೂ ಈ ಬಗ್ಗೆ ಅರಿವು ಮೂಡಿಸಲು ಮತ್ತು ಗರಿಷ್ಠ ಸಂಖ್ಯೆಯಲ್ಲಿ ಜನರು ಸ್ವಯಂ ಗಣತಿಯಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸಲು ಆದೇಶಿಸಲಾಗಿದೆ.

Related posts

ಶಿಶಿಲ: ‘ವೇದ ಕುಸುಮ’ ಶಿಬಿರ ಸಂಪನ್ನ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಆರಾಧ್ಯ ಜಿಲ್ಲಾ ಮಟ್ಟಕ್ಕೆ ಆಯ್ಕೆ.

Suddi Udaya

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಮತದಾನ ಪ್ರಕ್ರಿಯೆ ಆರಂಭ

Suddi Udaya

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ 30ನೇ ವಸತಿಯುತ ಉಚಿತ ಆರೋಗ್ಯ ತಪಾಸಣೆ, ಜಾಗೃತಿ ಶಿಬಿರ ಹಾಗೂ ಗಾಲಿಕುರ್ಚಿ ಜಾಥಾ:

Suddi Udaya

ಬಂಗೇರ‌ ಪಾಥಿ೯ವ ಶರೀರದ ಅಂತಿಮ ದಶ೯ನಕ್ಕೆ ಹರಿದು ಬಂದ ಜನ ಸಾಗರ: ಬೆಳ್ತಂಗಡಿ ನಗರದಲ್ಲಿ ಅಂತಿಮ ಯಾತ್ರೆ: ಹುಟ್ಟೂರು ಕೇದೆಯಲ್ಲಿ ಅಂತ್ಯಸಂಸ್ಕಾರ

Suddi Udaya

ಉಡುಪಿ ಜಿಲ್ಲಾ ಸಮಾವೇಶ 2024 ಮತ್ತು 26ನೇ ಉಚಿತ ವೈದ್ಯಕೀಯ ತಪಾಸಣೆ ಮಾಹಿತಿ ಹಾಗೂ ಜಾಗೃತಿ ಶಿಬಿರ

Suddi Udaya
error: Content is protected !!