September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ನಾವೂರು ಹಿ.ಪ್ರಾ. ಶಾಲೆಯಲ್ಲಿ ಶೈಕ್ಷಣಿಕ ಮಾಹಿತಿ ಕಾರ್ಯಾಗಾರ

ನಾವೂರು: ನಾವೂರು ಶ್ರೀ ಗೋಪಾಲಕೃಷ್ಣ ಸೇವಾ ಟ್ರಸ್ಟ್ ಇದರ ನೇತೃತ್ವದಲ್ಲಿ ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಸರ್ವೋದಯ ಟ್ರಸ್ಟ್(ರಿ) ನಾವೂರು ಇವುಗಳ ಸಹಭಾಗಿತ್ವದಲ್ಲಿ ಎಸ್ ಎಸ್ ಎಲ್ ಸಿ ಮುಗಿಸಿದ ವಿದ್ಯಾರ್ಥಿಗಳಿಗೆ ಮುಂದಿನ ಶಿಕ್ಷಣ ಅವಕಾಶಗಳ ಕುರಿತು ಸಮಗ್ರ ಮಾಹಿತಿಯ “ಶೈಕ್ಷಣಿಕ ಮಾಹಿತಿ ಕಾರ್ಯಾಗಾರ” ಕಾರ್ಯಕ್ರಮವು ಎ.5ರಂದು ನಾವೂರು ಹಿ.ಪ್ರಾ. ಶಾಲಾ ವಠಾರದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ರೋಟರಿ ಕ್ಲಬ್ ನ ಅಧ್ಯಕ್ಷರಾದ ರೋ।ಡಾ। ಪ್ರಕಾಶ್ ಪ್ರಭು ನೆರವೇರಿಸಿ “ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಇಂತಹ ಕಾರ್ಯಕ್ರಮಗಳು ಅತ್ಯವಶ್ಯ, ಎಲ್ಲಾ ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದು ಮುಂದಿನ ಜೀವನದಲ್ಲಿ ಯಶಸ್ಸನ್ನು ಕಾಣುವಂತಾಗಲಿ” ಎಂದು ಶುಭ ಹಾರೈಸಿದರು.

ಅಧ್ಯಕ್ಷತೆಯನ್ನು ವಹಿಸಿದ ಹರೀಶ್ ಮೋರ್ತಾಜೆ ಇವರು “ನಾವೂರು ದೇವಸ್ಥಾನದ ಸೇವಾ ಟ್ರಸ್ಟ್ ಮೂಲಕ ಈ ಭಾಗದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಮಾತ್ರವಲ್ಲದೆ, ಸಾಮಾಜಿಕ, ಸೇವಾ ಹಾಗೂ ಶೈಕ್ಷಣಿಕ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸುತ್ತಿದ್ದೇವೆ. ಆ ಮೂಲಕ ಸಾಮಾಜಿಕ ಪರಿವರ್ತನೆಯ ಸಂದೇಶವನ್ನು ಸಮಾಜಕ್ಕೆ ನೀಡುತ್ತಿದ್ದೇವೆ. ಎಲ್ಲರೂ ಇಂತಹ ಕಾರ್ಯಕ್ರಮಗಳಿಗೆ ಸಹಕರಿಸಬೇಕು” ಎಂದು ವಿನಂತಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಡಾ। ಪ್ರದೀಪ್ ಅವರು ಕಾರ್ಯಕ್ರಮದ ಹಿಂದಿರುವ ಉದ್ದೇಶ ಮತ್ತು ಮಹತ್ವವನ್ನು ವಿವರಿಸಿದರು.

ನಾವೂರು ಪ್ರೌಢ ಶಾಲಾ ಮುಖ್ಯೋಪಾಧ್ಯಾಯ ರಾಜೇಂದ್ರ ಭಟ್,ಮತ್ತು ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಪ್ರೌಢ ಶಾಲಾ ಮುಖ್ಯೋಪಾಧ್ಯಾಯಿನಿ ಜಾಕಿನ್ ಬಿನ್ ಸರಾವೊ ಇವರು ಮಕ್ಕಳ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಧ. ಮ. ವಸತಿ ಪಿ ಯು ಕಾಲೇಜಿನ ಪ್ರಾಚಾರ್ಯ ಪ್ರೋ। ಸುನಿಲ್ ಪಂಡಿತ್ ರವರು ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡುತ್ತಾ “ಇಂದಿನ ಕಾಲಮಾನದಲ್ಲಿ ಅಸಂಖ್ಯ ಅವಕಾಶಗಳು ನಿಮ್ಮೆದುರಿಗಿವೆ. ನಿಮ್ಮ ನಿಮ್ಮ ಆಸಕ್ತಿಯ ಕ್ಷೇತ್ರವನ್ನು ಆರಿಸಿಕ್ಕೊಳ್ಳುವ ಜಾಣತನವನ್ನು ಬೆಳೆಸಿಕ್ಕೊಳ್ಳಬೇಕು. ಸರಿಯಾದ ಆಯ್ಕೆ ಉತ್ತಮ ಭವಿಷ್ಯ ನಿರ್ಮಾಣಕ್ಕೆ ತುಂಬಾ ಅವಶ್ಯ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲಿ ವಿಶೇಷ ಆತ್ಮಸ್ಥೈರ್ಯ ಸಹಜವಾಗಿಯೇ ಇರುತ್ತದೆ, ಹಿರಿಯರ ಮಾರ್ಗದರ್ಶನದಲ್ಲಿ ಮುನ್ನಡೆಯಿರಿ” ಎಂದು ಕಿವಿಮಾತನ್ನು ಹೇಳುತ್ತಾ ಮುಂದಿನ ಶಿಕ್ಷಣದ ಅವಕಾಶಗಳ ಮಾಹಿತಿಯನ್ನು ಸಮಗ್ರವಾಗಿ ನೀಡಿದರು.

ಕಾರ್ಯಕ್ರಮದಲ್ಲಿ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ನ ಪೂರ್ವಾಧ್ಯಕ್ಷರಾದ ಎ ಬಿ ಉಮೇಶ್ ಅತ್ಯಡ್ಕ, ಟ್ರಸ್ಟಿಗಳಾದ ಗಣೇಶ್ ಕನಾಲು, ತಿಮ್ಮಪ್ಪ ಜಿ, ಹರೀಶ್ ಕಾರಿಂಜ,ಕೋಶಾಧಿಕಾರಿ ಉಮೇಶ್ ಪ್ರಭು, ಸಂಚಾಲಕರಾದ ಕೆ ಮೋಹನ್ ಬಂಗೇರ ಕಾರಿಂಜ, ಸಿಂಡಿಕೇಟ್ ಬ್ಯಾಂಕ್ ನ ನಿವೃತ್ತ ಹಿರಿಯ ಪ್ರಬಂಧಕರಾದ ಶ್ರೀ ಸೂರ್ಯನಾರಾಯಣ ಭಟ್ , ಮಹಿಳಾ ಸಮಿತಿ ಅಧ್ಯಕ್ಷರಾದ ಶ್ರೀಮತಿ ಪ್ರಿಯಾ ಲಕ್ಷ್ಮಣ್ , ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಕೃಷ್ಣಪ್ಪ ಗೌಡ ದೇರ್ಲೆಕ್ಕಿ, ಹಾಗೂ ಮಕ್ಕಳ ಪೋಷಕರು ಉಪಸ್ಥಿತರಿದ್ದರು.

ಟ್ರಸ್ಟ್ ನ ಪ್ರಧಾನಕಾರ್ಯದರ್ಶಿ ಕೆ.ಧರ್ಣಪ್ಪ ಮೂಲ್ಯ ನಿರೂಪಿಸಿದ ಕಾರ್ಯಕ್ರಮದಲ್ಲಿ ಗಣೇಶ್ ಗೌಡ ನೆಲ್ಲಿಪಲ್ಕೆ ವಂದಿಸಿದರು.

Related posts

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ನಾಯಕರ ಶೃಂಗಸಭೆ ಕಾರ್ಯಕ್ರಮ

Suddi Udaya

ಬ್ಯಾಂಕ್ ಆಫ್ ಬರೋಡದ 116ನೇ ಸಂಸ್ಥಾಪನ ದಿನದ ಪ್ರಯುಕ್ತ ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಗೆ ಶಾಲಾ ಸೂಚನಾ ಫಲಕ ಹಾಗೂ ವೈರ್ಲೆಸ್ ಸೌಂಡ್ ಬಾಕ್ಸ್ ಕೊಡುಗೆ

Suddi Udaya

ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ನಾಮನಿರ್ದೇಶಿತ ಸದಸ್ಯರಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ, ಅಭಿನಂದನೆ

Suddi Udaya

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರವರಿಗೆ ನಿಡ್ಲೆ ಅಗ್ರಿಲೀಫ್ ಸಂಸ್ಥೆಯ ಉತ್ಪನ್ನವನ್ನು ನೀಡಿದ ಅವಿನಾಶ್ ರಾವ್

Suddi Udaya

ಡಿ.17: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ, ಬಿರುಸಿನ ಪೈಪೋಟಿ: ಬಿಜೆಪಿ-ಕಾಂಗ್ರೆಸ್ ಬಿಗ್ ಫೈಟ್, 12 ಸ್ಥಾನಕ್ಕೆ 24 ನಾಮಪತ್ರ ಸಲ್ಲಿಕೆ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಉಚಿತ ವೈದ್ಯಕೀಯ ಶಿಬಿರ

Suddi Udaya
error: Content is protected !!