ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಬಳಂಜ ಸ.ಉ.ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ಕೈಗಾರಿಕೋದ್ಯಮಿ ಕೃಷ್ಣ ಸಂಪಿಗೆತ್ತಾಯ ಭೇಟಿ

ಬಳಂಜ : ಬೆಂಗಳೂರಿನ ಪ್ರಸಿದ್ಧ ಕೈಗಾರಿಕೋದ್ಯಮಿಗಳು ಹಾಗೂ ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರ ಕೃಷ್ಣ ಸಂಪಿಗೆತ್ತಾಯರವರು ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಬಳಂಜಕ್ಕೆ ಭೇಟಿ ನೀಡಿದರು.

ಸಂಪಿಗೆತ್ತಾಯರು ಕೈಗಾರಿಕೋದ್ಯಮಿಗಳಾಗಿದ್ದುಕೊಂಡು ಸಾಮಾಜಿಕ ಬದ್ಧತೆಯಿಂದ ಅನೇಕ ಸಮಾಜಮುಖಿ ಕೆಲಸ ಕಾರ್ಯಗಳನ್ನು ನಡೆಸಿಕೊಂಡು ಬಂದಿರುತ್ತಾರೆ. ಇತ್ತೀಚಿಗೆ ಅಮೃತ ಮಹೋತ್ಸವ ಆಚರಿಸಿದ ಶಾಲೆಯ ಬದಲಾವಣೆಯ ಬಗ್ಗೆ ಸಂತಸ ವ್ಯಕ್ತ ಪಡಿಸಿದರು. ಸರಕಾರೀ ಶಾಲೆಯನ್ನು ಮಾದರಿ ಶಾಲೆಯನ್ನಾಗಿ ಬೆಳೆಸುವ ನಿಟ್ಟಿನಲ್ಲಿ ವ್ಯಸ್ತವಾಗಿರುವ ಬಳಂಜ ಶಿಕ್ಷಣ ಟ್ರಸ್ಟ್ ಮತ್ತು ಊರ ಹಳೆವಿದ್ಯಾರ್ಥಿಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸುತ್ತಾ ಅಶ್ವಥ್ ಹೆಗ್ಡೆ ಫೌಂಡೇಶನ್ ಮೂಲಕ ಶಾಲೆಯಲ್ಲಿ ನಡೆಸಿದ ಅಭಿವೃದ್ಧಿ ಕಾರ್ಯಗಳಿಗೆ ಮೆಚ್ಚುತ್ತಾ ತಮ್ಮ ಸಂಪೂರ್ಣ ಸಹಕಾರ ಮಾರ್ಗದರ್ಶನ ನೀಡುತ್ತೇವೆ ಎಂದರು.

ಈ ಸಂಧರ್ಭದಲ್ಲಿ ಬಳಂಜ ಶಾಲಾ ಶಿಕ್ಷಕರು, ಶಿಕ್ಷಣ ಟ್ರಸ್ಟಿನ ಅಧ್ಯಕ್ಷರಾದ ಮನು ಬಳಂಜ ,ಅಮೃತ ಮಹೋತ್ಸವ ಸಮಿತಿಯ ಅಧ್ಯಕ್ಷರು ಚಂದ್ರಶೇಖರ್ ಪಿ ಕೆ , ಸಂತೋಷ್ ಸಾಲಿಯಾನ್ , ದಿನೇಶ್ ಪಿ ಕೆ ಹಾಗೂ ಇತರ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಗೌರವಿಸಲಾಯಿತು.

Related posts

ಬೆಳ್ತಂಗಡಿಯಲ್ಲಿ ನಡೆದ ಮಂಗಳೂರು ವಿಭಾಗದ ಜಿನಭಜನಾ ಸ್ಪರ್ಧೆ: ಕಾರ್ಯಕರ್ತರಿಗೆ ಅಭಿನಂದನೆ

Suddi Udaya

ವಾಲಿಬಾಲ್ ಪಂದ್ಯಾಟದಲ್ಲಿ ಬೆಳ್ಳಿ ಪದಕ ಗೆದ್ದ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

Suddi Udaya

ಟೀಮ್ ದೇವರಗುಡ್ಡೆ ವತಿಯಿಂದ ಮಕ್ಕಳ ದಿನಾಚರಣೆ ಪ್ರಯುಕ್ತ ಅಂಗನವಾಡಿಗೆ ಚೇರ್ ವಿತರಣೆ

Suddi Udaya

ನಡ ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಮಹಾಸಭೆ

Suddi Udaya

ಬಿಜೆಪಿಯಿಂದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ 6 ವರ್ಷಗಳ ಕಾಲ ಉಚ್ಚಾಟನೆ

Suddi Udaya

ಬೆಳ್ತಂಗಡಿ: ಹಿರಿಯ ವಕೀಲ ಶ್ರೀಧರ ಗೌಡ ನಿಧನ

Suddi Udaya
error: Content is protected !!