September 6, 2026
ಚಿತ್ರ ವರದಿಚುನಾವಣೆಪುತ್ತೂರು

ಮಂಜೇಶ್ವರ ವಿಧಾನಸಭಾ ಕ್ಷೇತ್ರ ಚುನಾವಣೆ: ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ರವರ ಪರವಾಗಿ ಎಂಎಲ್‌ಸಿ ಕಿಶೋರ್ ಕುಮಾರ್ ಪುತ್ತೂರು ಮತಯಾಚನೆ

ಕೇರಳದ ಮಂಜೇಶ್ವರ ವಿಧಾನಸಭಾ ಕ್ಷೇತ್ರ ಪ್ರತಿ ಚುನಾವಣೆಯಲ್ಲೂ ಕಠಿಣ ಸ್ಪರ್ಧೆ ನಡೆಯುವ “ಹಾಟ್ ಸೀಟ್” ಎಂದು ಪರಿಗಣಿಸಲಾಗುವ ಕ್ಷೇತ್ರ. ಪ್ರತೀ ಚುನಾವಣೆಯಲ್ಲಿ ಅತೀ ಕಡಿಮೆ ಅಂತರದಲ್ಲಿ ಸೋಲುವ ಬಿಜೆಪಿ ಈ ಬಾರಿ ಕಮಲ ಅರಳಿಸಲು ಶತಾಯಗತಾಯ ಪ್ರಯತ್ನ ಮಾಡುತ್ತಿದೆ ಈ ನಿಟ್ಟಿನಲ್ಲಿ ತುಳು ಕನ್ನಡ ಮಾತನಾಡುವ ಜನರೇ ಅಧಿಕವಾಗಿರುವ
ಎಣ್ಮಕಜೆ ವ್ಯಾಪ್ತಿಯ ಕಂಡೇರಿ ಗ್ರಾಮ ಪಂಚಾಯತ್ನಲ್ಲಿ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ರವರ ಪರವಾಗಿ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು.

ಎಲ್ ಡಿ ಎಫ್ ಹಾಗೂ ಯುಡಿಎಫ್ ನ ಆಡಳಿತ ವೈಫಲ್ಯ ಕಾಸರಗೋಡಿನ ಜ್ವಲಂತ ಸಮಸ್ಯೆಗಳಿಂದ ಬೇಸತ್ತಿರುವ ಜೊತೆಗೆ ನವ ಕಾಸರಗೋಡಿನ ನಿರ್ಮಾಣಕ್ಕಾಗಿ ಕಾಸರಗೋಡಿನ ಜನತೆ ಬದಲಾವಣೆಯನ್ನು ಬಯಸಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪದ್ಮನಾಭ ಭಟ್ ಕಂಡೇರಿ , ಪ್ರದೀಪ್ ಭಟ್ ಕಂಡೇರಿ, ಸಾತ್ವಿಕ್ ಕಂಡೇರಿ, ನಾಲ್ಕನೇ ವಾರ್ಡನ ಪಂಚಾಯತ್ ಸದಸ್ಯರಾದ ಪುಷ್ಪಾವತಿ ವಿ ರೈ, ಪಕ್ಷಕ್ಕೆ ಹೊಸದಾಗಿ ಸೇರ್ಪಡೆಗೊಂಡ ಸ್ವಸ್ತಿಕ್ ಕೆಂಗಣಾಜೆ , ಪ್ರಜ್ವಲ್ ಆರ್ ಕೆ ದಂಬೆಕಾನ, ವಿನೋದ್ ಕೊಲ್ಯ, ಪ್ರಶಾಂತ್ ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬಳಂಜ ಶಾಲೆಯ ಹಳೆ ವಿದ್ಯಾರ್ಥಿ ಪ್ರವೀಣ್ ಜೈನ್ ಅವರಿಗೆ ಡಾಕ್ಟರೇಟ್ ಪದವಿ

Suddi Udaya

ನಾರಾವಿ: ಮಂಜುನಗರದಲ್ಲಿ ಗೋವುವಿಗೆ ಅಪರಿಚಿತ ವಾಹನ ಡಿಕ್ಕಿ, ಗಾಯಗೊಂಡು ರಸ್ತೆ ಬದಿಯಲ್ಲಿ ನರಳಾಡುತ್ತಿರುವ ಗೋವು

Suddi Udaya

ಬೆಳ್ತಂಗಡಿ ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಕಲ್ಲೇರಿಯಲ್ಲಿ ಸಂಘದ ಎರಡನೇ ಶಾಖೆ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ಶ್ರೀ ರಾಘವೇಂದ್ರ ಸ್ವಾಮಿ ಬ್ರಹ್ಮಕಲಶೋತ್ಸವ ಸಮಿತಿಯ ಸಮಾಲೋಚನೆ ಸಭೆ: ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಆಯ್ಕೆ

Suddi Udaya

ವೇಣೂರು : ಹಂದೇವು ಮನೆಯ ಶ್ರೀಮತಿ ವೀರಮ್ಮ ದೇವಾಡಿಗ ನಿಧನ

Suddi Udaya

ತೋಟತ್ತಾಡಿ ಪರಿಸರದಲ್ಲಿ ಚಿರತೆ ಓಡಾಟ, ಭಯಭೀತರಾದ ಗ್ರಾಮಸ್ಥರು: ಚಿರತೆ ಸೆರೆಹಿಡಿಯಲು ಸ್ಥಳೀಯರ ಸಹಕಾರದಲ್ಲಿ ಇಲಾಖೆ ವತಿಯಿಂದ ಬೋನು ಅಳವಡಿಕೆ

Suddi Udaya
error: Content is protected !!