September 6, 2026
ಅಭಿನಂದನೆಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅಂತರಾಷ್ಟ್ರಮಟ್ಟದ ಯೂತ್ ಗೇಮ್ಸ್ : ಉಜಿರೆಯ‌ ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿ ಪ್ರಥಮ

ಉಜಿರೆ: ಎ.7ರಂದು ಯೂತ್ ಗೇಮ್ಸ್ ಫೌಂಡೇಶನ್ ಇಂಡಿಯಾ ನೇಪಾಳ ಪೋಖರಾ ನಗರದ ರಂಗಶಾಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಇಂಡೋ-ನೇಪಾಳ ಅಂತಾರಾಷ್ಟ್ರೀಯ ಮಟ್ಟದ ಯೂತ್ ಗೇಮ್ಸ್ನಲ್ಲಿ ಭಾಗವಹಿಸಿದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಹಾಗೂ ಎಸ್.ಡಿ.ಎಂ ಕ್ರೀಡಾ ಸಂಘದ ವಿದ್ಯಾರ್ಥಿ ಮಾರುತಿ ಲಾಂಗ್ ಜಂಪ್ ಸ್ಪರ್ಧೆಯಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಚಿನ್ನದ ಪದಕ ಪಡೆದುಕೊಂಡಿದ್ದಾರೆ.

ಭಾರತ ದೇಶವನ್ನು ಪ್ರತಿನಿಧಿಸಿ ಪ್ರಥಮ ಸ್ಥಾನ ಪಡೆಯುವ ಮೂಲಕ ಚಾಂಪಿಯನ್ ಆಗಿರುವ ಪ್ರಥಮ ವರ್ಷದ ಬಿಎ ವಿದ್ಯಾರ್ಥಿ ಮಾರುತಿ, ಇತ್ತೀಚೆಗೆ ಯೂತ್ ಗೇಮ್ಸ್ ಕೌನ್ಸಿಲ್ ಆಫ್ ಇಂಡಿಯಾ (YGCI) ದೆಹಲಿಯ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಓಪನ್ ಯೂತ್ ಗೇಮ್ಸ್ನಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಪ್ರಥಮ ಸ್ಥಾನ ಪಡೆಯುವ ಮೂಲಕ ಅಂತಾರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದರು. ಇವರಿಗೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಸಂದೇಶ್ ಬಿ. ಪೂಂಜ ತರಬೇತಿಯನ್ನು ನೀಡಿರುತ್ತಾರೆ.

ಈ ಕ್ರೀಡಾ ಕೂಟದಲ್ಲಿ ಒಟ್ಟು 7 ಮಂದಿ ಭಾರತದ ಕ್ರೀಡಾಪಟುಗಳು ಭಾಗವಹಿಸಿದ್ದರು. ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿ ಉತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಪಡೆದು ದೇಶಕ್ಕೆ ಹೆಮ್ಮೆ ತಂದಿದ್ದಾರೆ. ಬಹುಮಾನ ವಿತರಣಾ ಸಮಾರಂಭದಲ್ಲಿ ಯೂತ್ ಗೇಮ್ಸ್ ಫೌಂಡೇಶನ್ ಸಮಿತಿಯ ಕಾರ್ಯದರ್ಶಿ ಅಮರ್‌ಸಿಂಗ್ ಚಂದೇಲೆ ಹಾಗೂ ಭಾರತೀಯ ಸೇನೆಯ ಹರೇಂದ್ರಸಿAಗ್ ಚೌಧರಿ ಅವರು ಪದಕಗಳನ್ನು ನೀಡಿ ಅಭಿನಂದಿಸಿದರು.

Related posts

ಉಜಿರೆ: ಮುಂಡತ್ತೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಅಂತರರಾಷ್ಟ್ರೀಯ ಇಂಗ್ಲಿಷ್ ಒಲಿಂಪಿಯಾಡ್ 2025–26: ಎಕ್ಸೆಲ್ ಪಿಯು ಕಾಲೇಜು, ಗುರುವಾಯನಕೆರೆ ವಿದ್ಯಾರ್ಥಿಗಳ ಅದ್ಭುತ ಸಾಧನೆ: ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya

ಮಚ್ಚಿನ : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಉಜಿರೆ ಎಸ್ ಡಿ.ಎಂ. ಸೆಕೆಂಡರಿ ಶಾಲೆಯ ಮುಖ್ಯ ಶಿಕ್ಷಕರಾಗಿ ಸುರೇಶ ಕೆ ರವರು ಅಧಿಕಾರ ಸ್ವೀಕಾರ    

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ವೈದ್ಯರ ದಿನಾಚರಣೆ

Suddi Udaya

ಜಿಲ್ಲಾ ಮಟ್ಟದ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ: ಯಂಗ್ ಚಾಲೆಂಜರ್ಸ್ ತಂಡ ದ್ವಿತೀಯ

Suddi Udaya
error: Content is protected !!