September 6, 2026
ಸಾಧಕರು

ಗೇರುಕಟ್ಟೆ ದಿವಾಕರ ಆಚಾರ್ಯ ರವರಿಗೆ ಯಕ್ಷಗಾನದಲ್ಲಿ ಡಿಪ್ಲೊಮಾ ಪದವಿ ಪ್ರದಾನ

ಬೆಳ್ತಂಗಡಿ: ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಮೈಸೂರು ಸಂಯೋಜಿತವಾಗಿ ಬೆಂಗಳೂರಿನ ಕಲಾ ಕದಂಬ ಆರ್ಟ್ ಸೆಂಟರ್ ಮೂಲಕ 2024-25ನೇ ಸಾಲಿನ ಯಕ್ಷಗಾನ ಸರ್ಟಿಫಿಕೇಟ್ ಮತ್ತು ಡಿಪ್ಲೊಮಾ ಪದವಿಯ ಎರಡು ಸೆಮಿಸ್ಟರ್‌ಗಳ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಪದವಿ ಪ್ರದಾನ ಸಮಾರಂಭವು ವಿಶ್ವವಿದ್ಯಾಲಯದ ನಿಕಟಪೂರ್ವ ಕುಲಪತಿಗಳಾದ ಪ್ರೊ. ನಾಗೇಶ ವಿ. ಬೆಟ್ಟಕೋಟೆ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಬಿ.ಎಂ.ಶ್ರೀ ಕಲಾಭವನದಲ್ಲಿ ಜರಗಿತು.

ವಿ.ವಿ ಕುಲಪತಿಗಳಾದ ಡಾ.ಕೆ.ರಾಮಕೃಷ್ಣಯ್ಯ ಅವರು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ದಿವಾಕರ ಆಚಾರ್ಯ ಗೇರುಕಟ್ಟೆ ಇವರಿಗೆ ಪದವಿ ಪ್ರದಾನ ಮಾಡಿದರು.

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕರಾಗಿರುವ ಇವರು ಹವ್ಯಾಸಿ ಕಲಾವಿದ, ಸಂಘಟಕರಾಗಿದ್ದು ಕಾಳಿಕಾಂಬಾ ಯಕ್ಷಕಲಾ ಟ್ರಸ್ಟ್ ಉಪ್ಪಿನಂಗಡಿ ಇದರ ಅಧ್ಯಕ್ಷ, ಯಕ್ಷ ಭಾರತಿ ಬೆಳ್ತಂಗಡಿ ಇದರ ಕಾರ್ಯದರ್ಶಿಯಾಗಿದ್ದು, ದ.ಕ ಜಿಲ್ಲೆಯಲ್ಲಿ ಯಕ್ಷಗಾನ ಡಿಪ್ಲೋಮಾ ಪದವಿಯನ್ನು ಪಡೆದ ಮೊದಲಿಗರಾಗಿದ್ದಾರೆ.

ಪದವಿ ಪ್ರದಾನ ಸಮಾರಂಭದಲ್ಲಿ ಬಿ.ಎಂ. ಶ್ರೀ ಪ್ರತಿಷ್ಠಾನದ ಗೌರವಾಧ್ಯಕ್ಷ ಡಾ.ಆರ್. ಲಕ್ಷ್ಮೀನಾರಾಯಣ, ಯಕ್ಷಗಾನ ವಿದ್ವಾಂಸರಾದ ಆನಂದ ರಾಮ ಉಪಾಧ್ಯ, ಫಣಿಗಿರಿ ಪ್ರತಿಷ್ಠಾನದ ಉಮೇಶ ಶಿರೂರು, ಕಲಾಕದಂಬ ಆರ್ಟ್ ಸೆಂಟರ್ ನಿರ್ದೇಶಕ ಡಾ. ರಾಧಾಕೃಷ್ಣ ಉರಾಳ, ಕಾರ್ಯದರ್ಶಿ ಮುರಳೀಧರ ನಾವಡ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಹರ್ಷೇಂದ್ರ ಕುಮಾರ್ ಪ್ರತಿಷ್ಠಿತ ಅಗರಿ ಪ್ರಶಸ್ತಿಗೆ ಆಯ್ಕೆ

Suddi Udaya

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಡಾ. ರವೀಶ್ ಪಡುಮಲೆ, ರಾಜಾರಾಮ ಶರ್ಮ, ದೇವಿಪ್ರಸಾದ್, ಸದಾನಂದ ನಾರಾವಿ ಕನ್ನಡ ಸಿರಿ ಪ್ರಶಸ್ತಿಗೆ ಆಯ್ಕೆ

Suddi Udaya

ಸೇವಾಭಾರತಿಯಿಂದ ಈ ವರ್ಷದ “ಸೇವಾ ಶ್ರೇಷ್ಠ -2024” ಪುರಸ್ಕಾರ:

Suddi Udaya

ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಬರೋಡಾರವರಿಗೆ “ಬಂಟೆರ್ನ ರತ್ನ ಪ್ರಶಸ್ತಿ

Suddi Udaya

ಪ್ರತಿಭಾ ಪುರಸ್ಕಾರ ಮತ್ತು ಶೈಕ್ಷಣಿಕ ನಿಧಿ ವಿತರಣೆ ಕಾರ್ಯಕ್ರಮ

Suddi Udaya

ಎಂಡೋಸಲ್ಫಾನ್ ವಿರುದ್ಧ ಹೋರಾಟಗಾರರಾದ ಕೊಕ್ಕಡದ ಶ್ರೀಧರ ಗೌಡ ಕೆಂಗುಡೇಲುರವರಿಗೆ “ವಿಕ ಹಿರೋಸ್” ಪ್ರಶಸ್ತಿ

Suddi Udaya
error: Content is protected !!