September 6, 2026
ಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಾನಸಿಕ ಆರೋಗ್ಯ ಜಾಗೃತಿ ಕಾರ್ಯಕ್ರಮ

ಬೆಳ್ತಂಗಡಿ: ವಿಶ್ವ ಆರೋಗ್ಯ ದಿನದ ಅಂಗವಾಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬೆಳ್ತಂಗಡಿ ಇಲ್ಲಿನ ಐಕ್ಯೂಎಸಿ, ಯುವ ರೆಡ್ ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನಾ ಘಟಕ, ರೊವರ್ಸ್-ರೇಂಜರ್ಸ್ ಘಟಕಗಳ ಸಹಯೋಗದಲ್ಲಿ ಮಾನಸಿಕ ಆರೋಗ್ಯ ಜಾಗೃತಿ ಕಾರ್ಯಕ್ರಮವನ್ನು ಎ.೭ರಂದು ಆನ್ ಲೈನ್‌ನಲ್ಲಿ ಕಾಲೇಜು ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಪ್ರಖ್ಯಾತ ಮಾನಸಿಕ ತಜ್ಞರಾದ ಡಾ. ಸಿ.ಆರ್. ಚಂದ್ರಶೇಖರ್‌ರವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಅಧ್ಯಾಪಕಿಗೆ ಮತ್ತು ಯುವಜನರಿಗೆ ಮಾನಸಿಕ ಆರೋಗ್ಯದ ಬಗ್ಗೆ ಅದರಲ್ಲೂ ವಿದ್ಯಾರ್ಥಿಗಳು ಪ್ರಸಕ್ತ ಪರಿಸ್ಥಿತಿಯಲ್ಲಿ ಎದುರಿಸುತ್ತಿರುವ ಮಾನಸಿಕ ಸಮಸ್ಯೆಗಳ ಬಗ್ಗೆ ಸವಿವರವಾಗಿ ತಿಳಿಸಿದರು. ವಿದ್ಯಾರ್ಥಿಗಳು ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆಗೆ ಒಳಗಾಗುತ್ತಿರುವುದು ಅತ್ಯಂತ ನೋವಿನ ಸಂಗತಿ ಆಗಿದೆ. ಹಾಗಾಗಿ ಅಧ್ಯಾಪಕರು ವಿದ್ಯಾರ್ಥಿಗಳಿಗೆ ಕೌನ್ಸಿಲಿಂಗ್ ಮಾಡಬೇಕು . ಅವರೊಂದಿಗೆ ಆತ್ಮೀಯವಾಗಿ ಮಾತಾನಾಡಿಸುವ ಮೂಲಕ ಖಿನ್ನತೆಯಿಂದ ಬಳಲುತ್ತಿರುವ ವಿದ್ಯಾರ್ಥಿಗಳನ್ನು ಅದರಿಂದ ಹೊರಗೆ ತರಬೇಕು ಎಂದು ತಿಳಿಸಿದರು. ಸಮಾಜದಲ್ಲಿ ಪ್ರಸ್ತುತ ವಿದ್ಯಾಮಾನದಲ್ಲಿ ನಡೆಯುತ್ತಿರುವ ಜಾತಿ ವ್ಯವಸ್ಥೆ, ಭಷ್ಟಾಚಾರ, ಮೇಲು ಕೀಳು, ವ್ಯವಸ್ಥೆಗಳು ವಿದ್ಯಾರ್ಥಿಗಳಲ್ಲಿ ಖಿನ್ನತೆಯನ್ನು ಉಂಟುಮಾಡುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸುರೇಶ್ ವಿ., ರಾಷ್ಟ್ರೀಯ ಸೇವಾ ಯೋಜನಾ ಅಧಿಕಾರಿಗಳಾದ ಪ್ರೊ. ರೊನಾಲ್ಡ್ ಪ್ರವೀಣ್ ಕೊರಾಯ, ಯುವ ರೆಡ್ ಕ್ರಾಸ್ ಅಧಿಕಾರಿ ಹಾಗೂ ರೊವರ್ ಸ್ಕೌಟ್ ಲೀಡರ್ ಡಾ.ರವಿ ಎಂ.ಎನ್., ಕಾರ್ಯಕ್ರಮ ಸಂಯೋಜಕಾರದ ಡಾ. ದಿವ್ಯಪ್ರಭು ಮತ್ತು ಕಾಲೇಜಿನ ಎಲ್ಲಾ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದರು..

Related posts

ನಿಡ್ಲೆ ಆಯುಷ್ಮಾನ್ ಉಪ ಆರೋಗ್ಯ ಕೇಂದ್ರ ರಾಷ್ಟ್ರಮಟ್ಟದಲ್ಲಿ ಆಯ್ಕೆ

Suddi Udaya

ಸಾಂಪ್ರದಾಯಿಕ ಕೋಳಿ ಅಂಕಕ್ಕೆ ಅನುಮತಿ ನೀಡಲು ಪಡಂಗಡಿ ಜನಸ್ಪಂದನ ಸಭೆಯಲ್ಲಿ ಗ್ರಾಮಸ್ಥರು ಆಗ್ರಹ

Suddi Udaya

ಬೆಳ್ತಂಗಡಿ ತಾಲೂಕಿನ ವಿವಿದೆಡೆ ಧಾರಕಾರ ಗಾಳಿ ಮಳೆ, ವ್ಯಾಪಕ ಹಾನಿ: ಧರೆಗುರುಳಿದ ಮರ, ಗುಡ್ಡ ಕುಸಿತ, ಮನೆಗಳಿಗೆ ಹಾನಿ. ವಿದ್ಯುತ್ ವ್ಯತ್ಯಯ, ತೋಟಕ್ಕೆ ನುಗ್ಗಿದ ನೀರು: ಅಧಿಕಾರಿಗಳ ಭೇಟಿ, ಪರೀಶೀಲನೆ, ಹತೋಟಿಗೆ ಕ್ರಮ,

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಚಾರಣೆಯ ಅಂಗವಾಗಿ ಬಹುಮಾನ ವಿತರಣಾ ಸಮಾರಂಭ

Suddi Udaya

ಧರ್ಮಸ್ಥಳ: ಉಪರಾಷ್ಟ್ರಪತಿ ಭೇಟಿ ಹಿನ್ನಲೆ; ನೋ ಫ್ಲೈ ಝೋನ್ /ನೋ ಡ್ರೋನ್ ಝೋನ್ ಆದೇಶ

Suddi Udaya

ಲಾಯಿಲ: ರಸ್ತೆ ಬದಿಗೆ ಬಿದ್ದ ಲಾರಿ

Suddi Udaya
error: Content is protected !!