September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ-ಸ್ನೇಹಕಿರಣ ಮಹಿಳಾ ಜಿಲ್ಲಾ ಒಕ್ಕೂಟದ ಸದಸ್ಯರಿಗೆ ಸಾಮರ್ಥ್ಯ ವರ್ಧನಾ ತರಬೇತಿ

ಬೆಳ್ತಂಗಡಿ: ಮಿಸೇರಿಯೋರ್ ಪ್ರಾಯೋಜಕತ್ವದಲ್ಲಿ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸಹಕಾರದಿಂದ ನಡೆಸುತ್ತಿರುವ ಮಹಿಳಾ ಸಬಲೀಕರಣ ಯೋಜನೆಯಡಿಯಲ್ಲಿರುವ ಜಿಲ್ಲಾ ಒಕ್ಕೂಟದ ಸದಸ್ಯರಿಗೆ ಸಾಮರ್ಥ್ಯ ವರ್ಧನಾ ತರಬೇತಿಯನ್ನು ನೆಲ್ಯಾಡಿ ಸೈಂಟ್ ಆಲ್ಫೋನ್ಸಾ ಚರ್ಚ್ ಸಭಾಂಗಣದಲ್ಲಿ ಎ.7ರಂದು ಆಯೋಜಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ನೇಹ ಕಿರಣ ಜಿಲ್ಲಾ ಒಕ್ಕೂಟದ ಅಧ್ಯಕ್ಷೆ ಎಲಿಯಮ್ಮ ತೋಮಸ್ ವಹಿಸಿದ್ದರು. ಉದ್ಘಾಟನೆಯನ್ನು ಮಾನಿನಿ ರಾಜ್ಯ ಮಹಿಳಾ ಒಕ್ಕೂಟ ಬೆಂಗಳೂರು ಇದರ ಅಧ್ಯಕ್ಷೆ ಮಂಜುಳಾ ಜೋನ್ ನೆರವೇರಿಸಿ ಶುಭ ಹಾರೈಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕ ವಂ.ಫಾ. ಬಿನೋಯಿ ಎ.ಜೆ ಇವರು ಒಕ್ಕೂಟಗಳ ಸದಸ್ಯರು ನಾಯಕತ್ವ ವಹಿಸಿ ಸಂಘಟನೆಗಳನ್ನು ಬಲಪಡಿಸಬೇಕು ಹಾಗೂ ಉತ್ತಮ ರೀತಿಯಲ್ಲಿ ಸಂಘಟನೆಗಳನ್ನು ಮುನ್ನಡೆಸಲು ಬಲಗಳು. ಬಲಹೀನತೆಗಳು ಅವಕಾಶಗಳು ಮತ್ತು ಅಪಾಯಗಳನ್ನು ಗುರುತಿಸಿ ವೈಯಕ್ತಿಕ ಹಾಗೂ ಸಮೂದಾಯದ ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟಾಗಿ ಕಾರ್ಯ ನಿರ್ವಹಿಸಬೇಕು ಎಂಬ ಬಗ್ಗೆ ತರಬೇತಿ ನೀಡಿದರು.

ಕಿರಣ್ ಮಹಿಳಾ ತಾಲೂಕು ಒಕ್ಕೂಟದ ಸದಸ್ಯೆ ಚಂದನ ಪ್ರಾರ್ಥನಾ ಗೀತೆ ಹಾಡಿದರು. ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟದ ಉಪಾಧ್ಯಕ್ಷೆ ಜಿನ್ಸಿ ರಾಜೇಶ್ ಸ್ವಾಗತಿಸಿದರು. ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟದ ಜೊತೆ ಕಾರ್ಯದರ್ಶಿ ವೈಶಾಲಿ ವಂದಿಸಿದರು. ಮಾರ್ಕ್ ಡಿಸೋಜ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಒಕ್ಕೂಟದ ಸದಸ್ಯರು ಹಾಗೂ ಮಹಾ ಸಂಘಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

Related posts

ಬೆಳ್ತಂಗಡಿ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ಉಪಾಧ್ಯಕ್ಷರಾಗಿ ಸುಮಾ ಉಜಿರೆ ಆಯ್ಕೆ

Suddi Udaya

ಬೆಳ್ತಂಗಡಿ : ಅಕ್ರಮವಾಗಿ ಕಬ್ಬಿಣದ ಗುಜರಿ ವಸ್ತು ಸಾಗಾಟ: ಚಾಲಕ ಪರಾರಿ; ವಾಣಿಜ್ಯ ತೆರಿಗೆ ಇಲಾಖೆಯಿಂದ ಲಾರಿ ವಶಕ್ಕೆ

Suddi Udaya

ಮುಕ್ಕ ಶ್ರೀನಿವಾಸ್ ಯೂನಿವರ್ಸಿಟಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ ‘ಟೆಕ್ ಯುವ – 25’

Suddi Udaya

ಬೆಳ್ತಂಗಡಿ:ಸಹಕಾರಿಗಳ ನಡಿಗೆ ಧರ್ಮಸ್ಥಳ ಕಡೆಗೆ ಪೂರ್ವಭಾವಿ ಸಭೆ

Suddi Udaya

ಪುದುವೆಟ್ಟು: ಶ್ರೀ ವರಮಹಾಲಕ್ಷ್ಮೀ ವೃತ ಪೂಜೆ : ಶಾಸಕ ಹರೀಶ್ ಪೂಂಜಾ ಭಾಗಿ

Suddi Udaya

ರಸ್ತೆ ಬದಿ ವಾಹನ ನಿಲ್ಲಿಸುವರಿಗೆ ಎಚ್ಚರಿಕೆ, ಬ್ಯಾಟರಿ ಕಳ್ಳರಿದ್ದಾರೆ: ಸುಲ್ಕೇರಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಲವು ವಾಹನಗಳ ಬ್ಯಾಟರಿ ಕಳವು; ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya
error: Content is protected !!