September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ

ಬೆಳ್ತಂಗಡಿ: ಅನೇಕ ಮಂದಿ ವಿದ್ಯಾರ್ಥಿಗಳು ನಿರೀಕ್ಷೆ ಇಟ್ಟಿರುವ ದ್ವಿತೀಯ ಪಿಯುಸಿ ಫಲಿತಾಂಶ ಎ.9ರಂದು ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರ ಪ್ರಕಟಣೆ ಎ.8ರಂದು ತಿಳಿಸಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್‌ಇಎಬಿ) ಪ್ರಕಟಣೆ ಮೂಲಕ ತಿಳಿಸಿದ್ದು, ಏ.೭ರಂದು ಫಲಿತಾಂಶ ಪ್ರಕಟಿಸುತ್ತಿಲ್ಲ. ಕೊನೆಯ ಹಂತದ ಮೌಲ್ಯಮಾಪನ ಕೆಲಸ ಬಾಕಿ ಇರುವುದರಿಂದ ಫಲಿತಾಂಶ ಪ್ರಕಟಿಸಲಾಗುತ್ತಿಲ್ಲ ಎಂದು ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷ ಪ್ರಕಾಶ್ ಮಾಹಿತಿ ಕೊಟ್ಟಿದ್ದರು. ಇದೀಗ ಏ.೯ಕ್ಕೆ ಪರೀಕ್ಷೆ ದಿನಾಂಕ ಮರುನಿಗದಿಯಾಗಿದೆ. ಮಂಡಳಿ ತನ್ನ ಅಧಿಕೃತ ವೆಬ್‌ಸೈಟ್ karresults.nic.in ನಲ್ಲಿ ಫಲಿತಾಂಶ ಪ್ರಕಟಿಸಲಿದೆ.
ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಹಾಗೂ ಜನ್ಮ ದಿನಾಂಕ ಹಾಕಿ ಫಲಿತಾಂಶ ನೋಡಬಹುದು. ಅಂಕಪಟ್ಟಿ ಡೌನ್ಲೋಡ್ ಮಾಡಿ, ಪ್ರಿಂಟ್ ಕೂಡಾ ತೆಗೆದುಕೊಳ್ಳಬಹುದು. ಈ ವರ್ಷ ಒಟ್ಟು 7,10,363 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದು, ಫಲಿತಾಂಶಕ್ಕಾಗಿ ಎದುರು ನೋಡುತ್ತಿದ್ದಾರೆ. ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ಪರೀಕ್ಷೆಗಳು ನಡೆದಿದ್ದವು. ರಾಜ್ಯದಾದ್ಯಂತ ಒಟ್ಟು 1217 ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು.

Related posts

ಪಟ್ರಮೆ : ಮುಂಡೂರುಪಳಿಕೆ ನಿವಾಸಿ ವಸಂತಿ ನಿಧನ

Suddi Udaya

ಬಳಂಜ ಅಭಿಮಾನಿ ಬಳಗದಿಂದ ಮಾಜಿ ಶಾಸಕ ವಸಂತ ಬಂಗೇರರಿಗೆ ಸಾರ್ವಜನಿಕ ನುಡಿನಮನ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ವಿರೋಧಿಸಿ ತಣ್ಣೀರುಪಂತ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ, ಅಮೆರಿಕ – ನಾರ್ಥ್ ಕೆರೊಲಿನಾ ವಿವಿ (ಆಡಮ್ಸ್ ಸ್ಕೂಲ್ ಆಫ್ ಡೆಂಟಿಸ್ಟ್ರಿ) ದಂತ ವೈದ್ಯಕೀಯ ವಿದ್ಯಾರ್ಥಿಗಳ ಭೇಟಿ

Suddi Udaya

ಪಡ್ಡಂದಡ್ಕ ರಸ್ತೆ ದುರಸ್ಥಿ ಆಗ್ರಹಿಸಿ ಹೊಸಂಗಡಿ ಪಂಚಾಯತ್‌ಗೆ ಎಸ್‌ಡಿಪಿಐ ನಿಂದ ಮನವಿ

Suddi Udaya
error: Content is protected !!