September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ರಾಜ್ಯ ಸರ್ಕಾರದಿಂದ ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ : ಇದು ಬಡಜನರ ಮೇಲಿನ ಮರಣ ಶಾಸನ: ಶೇಖರ ಎಲ್

ಬೆಳ್ತಂಗಡಿ: ದ.ಕ ಜಿಲ್ಲೆಯ ವಿವಿಧ ಸಮುದಾಯ ಆರೋಗ್ಯ ಕೇಂದ್ರ , ತಾಲೂಕು ಆಸ್ಪತ್ರೆಗಳನ್ನು ಖಾಸಗಿ ಆಸ್ಪತ್ರೆಗಳೊಂದಿಗೆ ಕರಾರು ಒಪ್ಪಂದ ಮಾಡಿಕೊಳ್ಳುವ ಮೂಲಕ ರಾಜ್ಯ ಸರ್ಕಾರ ಸರ್ಕಾರಿ ಆಸ್ಪತ್ರೆಗಳನ್ನು ಖಾಸಗೀಕರಣ ಮಾಡಲು ಹೊರಟಿದೆ. ಇದು ಬಡಜನರ ಮೇಲಿನ ಮರಣ ಶಾಸನವಾಗಿದೆ ಎಂದು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಬೆಳ್ತಂಗಡಿ ಸಂಚಾಲಕ ಶೇಖರ್ ಎಲ್ . ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬಡಜನರಿಗೆ ಉಚಿತ ಆರೋಗ್ಯ ಸೇವೆ ನೀಡುವ ಸರ್ಕಾರಿ ಆಸ್ಪತ್ರೆಗಳು ಜನಸಾಮಾನ್ಯರಿಗೆ ವರದಾನವಾಗಿತ್ತು. ಇದೀಗ ಏಕಾಏಕಿ ಸರ್ಕಾರಿ ಆಸ್ಪತ್ರೆಗಳನ್ನು ಖಾಸಗಿ ಆಸ್ಪತ್ರೆಗಳೊಂದಿಗೆ ಕರಾರು ಒಪ್ಪಂದಕ್ಕೆ ಸಹಿ ಹಾಕುವ ಮೂಲಕ ಸರ್ಕಾರಿ ಆಸ್ಪತ್ರೆಗಳನ್ನು ಬಡಜನರ ಸುಲಿಗೆ ಕೇಂದ್ರವಾಗಿ , ಉಪಯೋಗಿಸಲು ಅವಕಾಶ ಮಾಡಿಕೊಟ್ಟಿದೆ. ಇದು ಸರ್ಕಾರದ ಅವಿವೇಕಿತನದ ತೀರ್ಮಾನವಾಗಿದ್ದು , ಸರ್ಕಾರಕ್ಕೆ ಸಂವಿಧಾನಬದ್ಧ ಉಚಿತ ಆರೋಗ್ಯ ಸೇವೆ ನೀಡಲು ಸಾಧ್ಯವಿಲ್ಲ ಎಂಬುದನ್ನು ಒಪ್ಪಿಕೊಂಡಂತಾಗಿದೆ. ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜ್ ಮಂಜೂರುಗೊಳಿಸಿ , ಖಾಸಗಿ ಮೆಡಿಕಲ್ ಕಾಲೇಜ್ ಗಳ ಕೆಂಗಣ್ಣಿಗೆ ಗುರಿಯಾದ ರಾಜ್ಯ ಸರ್ಕಾರ ಇದೀಗ ಅವರನ್ನು ಸಂತೋಷ ಪಡಿಸಲು ಜಿಲ್ಲೆಯ ಬಡಜನರನ್ನು ಬಲಿಕೊಡಲು ಸರ್ಕಾರಿ ಆಸ್ಪತ್ರೆಗಳನ್ನೇ ಖಾಸಗಿ ಆಸ್ಪತ್ರೆಗಳಿಗೆ ಮಾರಲು ಹೊರಟಿದೆ. ಯಾವುದೇ ಕಾರಣಕ್ಕೂ ಬಡಜನರ ಜೀವನದಲ್ಲಿ ಚೆಲ್ಲಾಟವಾಡಲು ಅವಕಾಶ ನೀಡುವುದಿಲ್ಲ. ಒಂದು ವೇಳೆ ಈ ಒಪ್ಪಂದದಿಂದ ಹಿಂದೆ ಸರಿಯದಿದ್ದರೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಆರೋಗ್ಯ ಸಚಿವರು ಜಿಲ್ಲೆಯಲ್ಲಿ ಭಾಗವಹಿಸುವ ಕಾರ್ಯಕ್ರಮಗಳಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ , ಘೇರಾವ್ ಹಾಕಲಾಗುತ್ತದೆ.

Related posts

ಮಡಂತ್ಯರು ವಲಯದಲ್ಲಿ ನೂತನವಾಗಿ ಆಯ್ಕೆಯಾದ ಒಕ್ಕೂಟದ ಪದಾಧಿಕಾರಿಗಳಿಗೆ ತರಬೇತಿ ಕಾರ್ಯಗಾರ

Suddi Udaya

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ಪದವಿಪೂರ್ವ ಕಾಲೇಜು ವಿಭಾಗದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ

Suddi Udaya

ಕೇರಳ ಹೊಟೇಲ್ ಮಾಲಕನ ಹತ್ಯೆ ಪ್ರಕರಣ: ಹೊಟೇಲ್ ಕೆಲಸಗಾರ ಬೆಳ್ತಂಗಡಿಯ ಯುವಕ ಬಂಧನ

Suddi Udaya

ವೇಣೂರು: ಕೃಷಿಕ ಕೆ. ಹಸನಬ್ಬ ನಿಧನ

Suddi Udaya

ಎಸ್.ಎಸ್.ಎಲ್.ಸಿ ಮರು ಮೌಲ್ಯ ಮಾಪನ: ಲಾಯಿಲ ವಿದ್ಯಾರ್ಥಿನಿ ತನ್ವಿ ಭಟ್ ಎಂ ಅವರಿಗೆ 624 ಅಂಕ, ರಾಜ್ಯಕ್ಕೆ 2 ನೇ ಸ್ಥಾನ, ಬೆಳ್ತಂಗಡಿ ತಾಲೂಕಿಗೆ ಪ್ರಥಮ

Suddi Udaya

ಶ್ರೀ ಕ್ಷೇತ್ರ ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆ – ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಇದರ ಆಶ್ರಯದಲ್ಲಿ : ಗಾಂಧಿ ಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ ಉದ್ಘಾಟನೆ

Suddi Udaya
error: Content is protected !!