September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕೊರಂಜ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ನೂತನ ಕೊಠಡಿ ಉದ್ಘಾಟನೆ

ಕೊರಂಜ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಪೋಷಕರು, ಶಾಲಾಭಿವೃದ್ಧಿ ಸಮಿತಿ, ಶಿಕ್ಷಕವೃಂದ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಹಿರಿಯ ವಿದ್ಯಾರ್ಥಿಗಳು,ಹಾಗೂ ಊರ ಪರವೂರಿನ ದಾನಿಗಳಿಂದ ನಿರ್ಮಿಸಲ್ಪಟ್ಟ ಸುಸಜ್ಜಿತ ತರಗತಿ ಕೊಠಡಿಯನ್ನು ದೀಪ ಬೆಳಗಿಸುವ ಮೂಲಕ ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಉದ್ಘಾಟಿಸಿದರು.

ಶಾಲೆಯಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿ, ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿ ನಿವೃತ್ತಿ ಹೊಂದಲಿರುವ ಮುಖ್ಯ ಶಿಕ್ಷಕಿ ಶಾಂತಾ, ಇತ್ತೀಚೆಗೆ ಮಂಗಳೂರು ವಿಶ್ವವಿದ್ಯಾನಿಲಯದ ಪಿಹೆಚ್ ಡಿ ಡಾಕ್ಟರೇಟ್ ಪದವಿ ಪಡೆದ ಕೇಶವ ಬಂಗೇರ ಗೇರುಕಟ್ಟೆ, ವೇದಿಕೆ ರಚನೆಗೆ ಸಂಪೂರ್ಣ ಗ್ರಾನೈಟ್ ನೀಡಿದ ಶಾಲೆಯ ಹಿರಿಯ ಶಿಕ್ಷಕಿ ಅನುರಾಧಾ ಬಿ.ಸಿ, ಶಾಲೆಯ ನಿವೃತ್ತಿ ಹೊಂದಿದ ಅಡುಗೆ ಸಹಾಯಕಿ ಕುಸುಮ ಬರಾಯ ಇವರನ್ನು ಸನ್ಮಾನಿಸಲಾಯಿತು.

ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಬಿ. ಹರೀಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಪ್ರಶಾಂತ್, ನಿವೃತ್ತ ಉಪಪ್ರಾಂಶುಪಾಲ ದಿವಾಕರ ಆಚಾರ್ಯ ಗೇರುಕಟ್ಟೆ, ಕಳಿಯ ಸಿ.ಎ.ಬ್ಯಾಂಕಿನ ಅಧ್ಯಕ್ಷ ವಸಂತ ಮಜಲು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಯಶೋಧರ ಕೆ, ನಾಟಿ ವೈದ್ಯ ಬಿ.ಹೆಚ್. ಆದಂ ಶಾಫಿ, ಹಿರಿಯ ವಿದ್ಯಾರ್ಥಿ ರಂಜನ್ ಕೆಳಗಿನಬೆಟ್ಟು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಅಬ್ದುಲ್ ಕರೀಮ್ ಗೇರುಕಟ್ಟೆ, ಕೇಶವ ಪೂಜಾರಿ, ರಿಕ್ಷಾ ಚಾಲಕ ಮಾಲಕ ಸಂಘದ ಅಧ್ಯಕ್ಷರು, ಶಾಲಾಭಿವೃದ್ಧಿ ಸಮಿತಿಯ ಉಪಾದ್ಯಕ್ಷರು, ಸದಸ್ಯರು, ಮಾಜಿ ಅಧ್ಯಕ್ಷರು, ಸದಸ್ಯರುಗಳು, ಮಾಜಿ ಪಂಚಾಯತ್ ಸದಸ್ಯರುಗಳು, ಶಿಕ್ಷಕ ವೃಂದ, ಪೋಷಕರು, ಬಿಸಿಯೂಟ ಸಿಬ್ಬಂದಿಗಳು, ಊರ ಪರವೂರವರು ,ವಿದ್ಯಾಭಿಮಾನಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸಹ ಶಿಕ್ಷಕರಾದ ಕಿರಣ್ ಕುಮಾರ್ ಸ್ವಾಗತಿಸಿದರು. ಮಮತಾ ಕೆ ಕಾರ್ಯಕ್ರಮ ನಿರೂಪಿಸಿ, ದೈಹಿಕ ಶಿಕ್ಷಣ ಶಿಕ್ಷಕ ರವಿರಾಜ್ ಗೌಡ ಧನ್ಯವಾದವಿತ್ತರು.

Related posts

ಉಜಿರೆ: ಧ.ಮಂ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಎಸ್.ಡಿ.ಎಂ. ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆ ವಿದ್ಯಾರ್ಥಿಗಳು ಚದುರಂಗ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವಾಣಿ ಕಾಲೇಜಿಗೆ ಪ್ರಾಜೆಕ್ಟರ್ ಹಸ್ತಾಂತರ ಮತ್ತು ರಾಷ್ಟ್ರೀಯ ಅಧ್ಯಕ್ಷರ ಭೇಟಿ

Suddi Udaya

ಬೆಳ್ತಂಗಡಿ: ಎಂ.ಎಸ್.ಡಬ್ಲ್ಯೂ ಕೌನ್ಸಿಲರ್ ನಾವೂರು ಗ್ರಾಮದ ಕಾರಿಂಜ ಸುಮಿತ್ರಾ ನಿಧನ

Suddi Udaya

ಆಳ್ವಾಸ್ ನ್ಯಾಚುರೋಪಥಿ ಕಾಲೇಜಿಗೆ 12 ರ‍್ಯಾಂಕ್

Suddi Udaya

ಗೇರುಕಟ್ಟೆ ಸರಕಾರಿ ಶಾಲೆ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya
error: Content is protected !!