September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ವಿಜ್ಞಾನ ವಿಭಾಗದಲ್ಲಿ 597 ಅಂಕ ಗಳಿಸಿದ ಕೊಕ್ಕಡದ ಅನಘ ಕೆ.

ಕೊಕ್ಕಡ: ಉಪ್ಪಿನಂಗಡಿ ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿನಿ ಅನಘ.ಕೆ ಅವರು ವಿಜ್ಞಾನ ವಿಭಾಗದಲ್ಲಿ 600ಕ್ಕೆ 597 (99.5%) ಅಂಕಗಳನ್ನು ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.

ಇವರು ಕನ್ನಡ, ಗಣಿತ ಹಾಗೂ ಕಂಪ್ಯೂಟರ್ ಸೈನ್ಸ್ ವಿಷಯಗಳಲ್ಲಿ ಪೂರ್ಣ 100 ಅಂಕಗಳನ್ನು ಗಳಿಸಿದ್ದು, ಇಂಗ್ಲಿಷ್, ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರದಲ್ಲಿ ತಲಾ 99 ಅಂಕಗಳನ್ನು ಪಡೆದು ತನ್ನ ಶೈಕ್ಷಣಿಕ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ.

ಅನಘ.ಕೆ ಅವರು ನೆಲ್ಯಾಡಿಯ ಸಂತ ಜಾರ್ಜ್ ಪದವಿ ಪೂರ್ವ ಕಾಲೇಜಿನ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಹಳೆ ವಿದ್ಯಾರ್ಥಿನಿಯಾಗಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿಯೂ 625ಕ್ಕೆ 616 ಅಂಕಗಳನ್ನು ಗಳಿಸಿ ಈಗಾಗಲೇ ಶ್ರೇಷ್ಠ ಸಾಧನೆ ಮಾಡಿದ್ದರು.

ಇವರು ನೆಲ್ಯಾಡಿ ಸಂತ ಚಾರ್ಜ್ ಪದವಿ ಪೂರ್ವ ಕಾಲೇಜಿನ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯಶಿಕ್ಷಕರಾದ ಹರಿಪ್ರಸಾದ್ ಕೆದಿಲಾಯ ಹಾಗೂ ಶ್ವೇತಾ ದಂಪತಿಗಳ ಪುತ್ರಿಯಾಗಿದ್ದಾರೆ

ಅನಘ.ಕೆ ಅವರ ಈ ಸಾಧನೆಗೆ ಕುಟುಂಬದವರು, ಗುರುಗಳು ಹಾಗೂ ಸ್ನೇಹಿತರಿಂದ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.

Related posts

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವ್ಹೀಲ್ ಚೇರ್ ಕೊಡುಗೆ

Suddi Udaya

ಉಜಿರೆ: ಕಾಮಧೇನು ಎಂಟರ್ ಪ್ರೈಸಸ್ ಶುಭಾರಂಭ

Suddi Udaya

ಕೊಕ್ಕಡ ಶ್ರೀ ಶಿವಶಕ್ತಿ ಭಜನಾ ಮಂದಿರದ ಲೋಕಾರ್ಪಣೆ ಹಾಗೂ ಭಜನೋತ್ಸವ

Suddi Udaya

ಬೆಳಾಲು ಶ್ರೀ ಧ.ಮಂ.ಅನುದಾನಿತ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಪ್ರಸಿದ್ದ ಪುಣ್ಯಕ್ಷೇತ್ರ ಶಿರ್ಡಿ ಸಾಯಿಬಾಬಾ ಕ್ಷೇತ್ರಕ್ಕೆ ತೀರ್ಥಯಾತ್ರೆ ಕೈಗೊಂಡ ಬೆಳ್ತಂಗಡಿಯ ನೂರಾರು ಭಕ್ತರು

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಸಹಯೋಗದೊಂದಿಗೆ ಕಬ್ ಬುಲ್ ಬುಲ್, ರೇಂಜರ್ ರೋವರ್, ಮಕ್ಕಳಿಗೆ ದೇಶ ಭಕ್ತಿ ಗೀತ ಗಾಯನ ಸ್ಪರ್ಧೆ

Suddi Udaya
error: Content is protected !!