September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

‘ಎಸ್.ಡಿ.ಎಂ. ಉದ್ಯೋಗಂ – 2026’ ಬೃಹತ್ ಉದ್ಯೋಗ ಮೇಳ ಸಂಪನ್ನ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ ಆಶ್ರಯದಲ್ಲಿ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನಲ್ಲಿ ಎಸ್.ಡಿ.ಎಂ. ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಎಸ್.ಡಿ.ಎಂ. ಪಾಲಿಟೆಕ್ನಿಕ್ ಸಹಯೋಗದಲ್ಲಿ ನಡೆದ ಎರಡು ದಿನಗಳ ‘ಎಸ್.ಡಿ.ಎಂ ಉದ್ಯೋಗಂ – 2026’ ಬೃಹತ್ ಉದ್ಯೋಗ ಮೇಳ ಯಶಸ್ವಿಯಾಗಿ ಸಂಪನ್ನಗೊಂಡಿತು.

1,776 ಉದ್ಯೋಗಾಕಾಂಕ್ಷಿಗಳು ಹಾಗೂ ದೇಶದ 124 ಪ್ರತಿಷ್ಠಿತ ಸಂಸ್ಥೆಗಳು ಭಾಗವಹಿಸಿದ್ದು, ಹಲವು ಹುದ್ದೆಗಳಿಗೆ ಸಂದರ್ಶನ ನಡೆಯಿತು. 1,390 ಉದ್ಯೋಗಾಕಾಂಕ್ಷಿಗಳು ಆಯ್ಕೆಯಾದರು. ಉದ್ಯೋಗಾಕಾಂಕ್ಷಿಗಳಿಗೆ ಉಚಿತ ನೋಂದಣಿ ವ್ಯವಸ್ಥೆ ಕಲ್ಪಿಸಲಾಗಿತ್ತು. ಬಹು ಕಂಪೆನಿಗಳಿಗೆ ಸಂದರ್ಶನ ನೀಡುವ ಅವಕಾಶ ಕಲ್ಪಿಸಲಾಗಿದ್ದ ಹಿನ್ನೆಲೆಯಲ್ಲಿ ಕೆಲವು ಅಭ್ಯರ್ಥಿಗಳಿಗೆ ಎರಡಕ್ಕೂ ಅಧಿಕ ಕಂಪೆನಿಗಳಲ್ಲಿ ಉದ್ಯೋಗ ಆಫರ್ ದೊರೆಯಿತು. ಹೀಗಾಗಿ, ಒಟ್ಟಾರೆ ಎರಡು ದಿನಗಳಲ್ಲಿ ಅಭ್ಯರ್ಥಿಗಳಿಗೆ 3,556 ಹುದ್ದೆಗಳ ಆಫರ್ ದೊರೆಯಿತು.

ಐಟಿ ಮತ್ತು ಸಾಪ್ಟ್ವೇರ್ ಡೆವಲಪ್‌ಮೆಂಟ್, ಫಾರ್ಮಾಸ್ಯೂಟಿಕಲ್ಸ್, ಬ್ಯಾಂಕಿಂಗ್ ಮತ್ತು ಫಿನ್ಯಾನ್ಸ್, ಐಟಿ ಮತ್ತು ಐಟಿಇಎಸ್, ಸೇಲ್ಸ್ ಮತ್ತು ಮಾರ್ಕೆಟಿಂಗ್, ರೀಟೈಲ್ ಮತ್ತು ಸೇಲ್ಸ್, ಶಿಕ್ಷಣ, ಪ್ರವಾಸೋದ್ಯಮ ಮತ್ತು ಆತಿಥ್ಯ, ಅಕೌಂಟಿಂಗ್ ಮತ್ತು ಟ್ಯಾಕ್ಸ್ ಕನ್ಸಲ್ಟೆನ್ಸಿ, ಉತ್ಪಾದನೆ, ಅಟೋಮೊಬೈಲ್, ಟೆಲಿಕಾಂ ಮತ್ತು ಮೀಡಿಯಾ, ಕನ್‌ಸಟ್ರ್ ಕ್ಚರ್ ಮತ್ತು ಇನ್‌ಫ್ರಾಸ್ಟ್ರಕ್ಚರ್ ಹಾಗೂ ಫಿನಾನ್ಶಿಯಲ್ ಕನ್ಸಲ್ಟೆನ್ಸಿ ಸೇರಿದಂತೆ ಹಲವು ಕ್ಷೇತ್ರಗಳಿಗೆ ಸಂಬಂಧಿಸಿದ ಹುದ್ದೆಗಳಿದ್ದವು.

ಎಲ್ಲಾ ಕ್ಷೇತ್ರದ ವಿದ್ಯಾರ್ಥಿಗಳಿಗೆ ಮುಕ್ತ ಮತ್ತು ಉಚಿತ ಅವಕಾಶ: ಉದ್ಯೋಗ ಮೇಳದಲ್ಲಿ ಪಿ.ಯು.ಸಿ., ಬಿ.ಎ, ಬಿ.ಬಿ.ಎ, ಬಿ.ಕಾಂ, ಬಿ.ಸಿ.ಎ, ಬಿ.ಎಸ್ಸಿ, ಬಿ.ವೋಕ್, ಐ.ಟಿ.ಐ, ಡಿಪ್ಲೋಮಾ, ಇಂಜಿನಿಯರಿಂಗ್, ಬಿ.ಟೆಕ್, ಬಿ.ಎಡ್, ಎಂ.ಎ, ಎಂ.ಸಿ.ಜೆ, ಎಂ.ಎಸ್.ಡಬ್ಲೂ, ಎಂ.ಕಾಂ, ಎಂ.ಸಿ.ಎ, ಎಂ.ಎಸ್ಸಿ, ಎಂ.ಬಿ.ಎ, ಮತ್ತು ಜಿ.ಎನ್.ಎಂ ನರ್ಸಿಂಗ್ ಸೇರಿದಂತೆ ಹಲವು ಶೈಕ್ಷಣಿಕ ಅರ್ಹತೆ ಹೊಂದಿದ ಅಭ್ಯರ್ಥಿಗಳು ಭಾಗವಹಿಸಿದ್ದರು. ಜಿಲ್ಲೆಯಾದ್ಯಂತ ವಿವಿಧ ಶೈಕ್ಷಣಿಕ ಸಂಸ್ಥೆಗಳಲ್ಲಿ ಅಂತಿಮ ಪದವಿ ಹಂತದಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳೂ ಪಾಲ್ಗೊಂಡಿದ್ದರು.

ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ರಾಜ್ಯದ ನಾನಾ ಭಾಗಗಳಲ್ಲಿ ಉದ್ಯೋಗ ಕಂಡುಕೊಳ್ಳಲು ಉದ್ಯೋಗ ಮೇಳ ನೆರವಾಯಿತು. ಪಾಲ್ಗೊಂಡಿದ್ದ ವಿದ್ಯಾರ್ಥಿಗಳು ಉದ್ಯೋಗ ಮೇಳದ ಬಗ್ಗೆ ಮೆಚ್ಚುಗೆ ‌ವ್ಯಕ್ತಪಡಿಸಿದರು.

Related posts

ಬಜಿರೆಯಲ್ಲಿ ಎರಡು ಕುಟುಂಬಗಳ ನಡುವೆ ಜಾಗದ ಪಾಲಿನ ವಿಷಯದಲ್ಲಿ ಹೊಡೆದಾಟ: ಪರಸ್ಪರ ಆರೋಪಿಸಿ ಪೊಲೀಸರಿಗೆ ದೂರು

Suddi Udaya

ನಾರಾವಿಯ ಪ್ರೀಮಲ್ ನಿಶ್ಮಾ ಸಂಶೋಧನಾ ಲೇಖನದಲ್ಲಿ ಪ್ರಥಮ ಸ್ಥಾನ

Suddi Udaya

ಕಾಜೂರು ಉರೂಸ್; ಪ್ರತಿದಿನ‌‌ ವಿಭಿನ್ನ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನ

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಕೇಂದ್ರ ಮಸೀದಿ ಖತೀಬ್ ಜನಾಬ್ ಅಶ್ರಫ್ ಫೈಝಿ ಅರ್ಕಾನರವರಿಗೆ ಪವಿತ್ರ ಉಮ್ರಾ ಯಾತ್ರೆಗೆ ಬೀಳ್ಕೊಡುಗೆ

Suddi Udaya

ಕೊಯ್ಯೂರು ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.84.38 ಫಲಿತಾಂಶ

Suddi Udaya

ಹೋಲಿ ರಿಡೀಮರ್ ಶಾಲಾ ಅಂಗಳದಲ್ಲಿ ಕೆಂಪು ಕಲರವ

Suddi Udaya
error: Content is protected !!