September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ- ಅಗ್ನಿ ಗುಳಿಗ ದೈವದ ಕೋಲ

ಮೇಲಂತಬೆಟ್ಟು: ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನ ಮೇಲಂತಬೆಟ್ಟುನಲ್ಲಿ ಶ್ರೀ ದೇವಿ ಭಗವತಿ ಅಮ್ಮನವರ 17ನೇ ವರ್ಷದ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಎ.8 ರಂದು ವೈಭವ ಪೂರ್ಣವಾಗಿ ಜರುಗಿತು.

ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಶ್ರೀ ಕುಕ್ಕೆಸುಬ್ರಹ್ಮಣ್ಯ ಮಠ ಇವರ ಗೌರವಾಧ್ಯಕ್ಷತೆಯಲ್ಲಿ, ಪದ್ಮವಿಭೂಷಣ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ, ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ, ಬ್ರಹ್ಮಶ್ರೀ ನಡ್ವಂತಾಡಿ ವೇದಮೂರ್ತಿ ಶ್ರೀಪಾದ ಪಾಂಗಣ್ಣಾಯ ಇವರ ಆಶೀರ್ವಾದದೊಂದಿಗೆ ಈ ಕಾರ್ಯಕ್ರಮ ನಡೆಯಿತು.

ಬೆಳಿಗ್ಗೆ ಆಚಾರ್ಯವರಣ, ಫಲನ್ಯಾಸ, ಸ್ವಸ್ತಿ ಪುಣ್ಯಾಹ, ಗಣಪತಿ ಹೋಮ, ಕಲಶ ಪೂಜೆ ನವಕ ಕಲಶಾಭಿಷೇಕ ದೇವಿಗೆ ಪಂಚಾಮೃತ ಅಭಿಷೇಕ, ಬೆಳಿಗ್ಗೆ ಗಂಟೆ ೯ಕ್ಕೆ ಗುರು ಪೂಜೆ, ದುರ್ಗಾ ಹೋಮ ಮಧ್ಯಾಹ್ನ ಶ್ರೀದೇವಿಗೆ ಮಹಾಪೂಜೆ, ಪ್ರಸಾದ ವಿತರಣೆ, ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.

ಸಂಜೆ ಶ್ರೀ ಚಕ್ರಪೂಜೆ ಪ್ರಾರಂಭಗೊಂಡಿತು. ಬಳಿಕ ಶ್ರೀ ದೇವಿ ಭಗವತೀ ಅಮ್ಮ ಭಜನಾ ಮಂಡಳಿ ಮೇಲಂತಬೆಟ್ಟು ಇವರಿಂದ ಭಜನಾ ಕಾರ್ಯಕ್ರಮ, ಶ್ರೀ ಚಕ್ರಪೂಜೆ ನೂರಾರು ಭಕ್ತರ ಉಪಸ್ಥಿತಿಯಲ್ಲಿ ಸಂಪನ್ನಗೊಂಡು ಶ್ರೀ ದೇವಿಗೆ ಮಹಾ ರಂಗ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ ಜರುಗಿತು. ರಾತ್ರಿ ಅಗ್ನಿಗುಳಿಗ ದೈವಕ್ಕೆ “ಸಿರಿ ಸಿಂಗಾರದ ಕೋಲ” ವಿಜೃಂಭಣೆಯಿಂದ ನಡೆಯಿತು.

ಕಾರ್ಯಕ್ರಮದಲ್ಲಿ ಊರ ಹಾಗೂ ಪರವೂರಿನ ಅಪಾರ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ಧನ್ಯತೆಯನ್ನು ಪಡೆದರು. ದೇವಸ್ಥಾನದ ಧರ್ಮದರ್ಶಿ ಯೋಗೀಶ್ ಪೂಜಾರಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಯಾನಂದ ಅಂಕಾಜೆ, ಕಾರ್ಯದರ್ಶಿ ಪ್ರಸನ್ನ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುರೇಶ್ ಶೆಟ್ಟಿ ಭ್ರಾಮರಿ ಮಾಪಲಾಡಿ, ಅರ್ಚಕ ಲಕ್ಷ್ಮಣ ಶಾಂತಿ, ಪ್ರಧಾನ ಅರ್ಚಕ ಯಶವಂತ ಶಾಂತಿ, ಭಜನಾ ಸಮಿತಿ ಅಧ್ಯಕ್ಷ ತಿಮ್ಮಪ್ಪ ಪೂಜಾರಿ ಮಾಪಲಾಡಿ ಹಾಗೂ ಊರ ಹಾಗೂ ಪರವೂರ ಭಕ್ತರ ಸಹಕಾರದಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ, ಮೇಲಂತಬೆಟ್ಟು ಕಾರ್ಯಕ್ರಮಕ್ಕೆ ಸಂಪೂರ್ಣ ಸಹಕಾರ ನೀಡಿದರು.

Related posts

ಬದನಾಜೆ ಸರಕಾರಿ ಪ್ರೌಢಶಾಲೆಯಲ್ಲಿ ರಾಷ್ಟೀಯ ಸುರಕ್ಷತಾ ಸಪ್ತಾಹ ಆಚರಣೆ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ನಲ್ಲಿ ಪೂಲ್ ಕ್ಯಾಂಪಸ್ ನೇಮಕಾತಿ

Suddi Udaya

ಧರ್ಮಸ್ಥಳದಲ್ಲಿ ಅಹೋರಾತ್ರಿ ಸಾಮೂಹಿಕ ಶಿವಪಂಚಾಕ್ಷರಿ ಪಠಣಕ್ಕೆ ಚಾಲನೆ

Suddi Udaya

ಬಳಂಜ ತಾಲೂಕು ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ಕ್ರೀಡಾ ಕೂಟ: ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿ: ಮೋಹನ್ ಕುಮಾರ್

Suddi Udaya

ಉಜಿರೆ ಎಸ್. ಡಿ.ಎಂ ಕಾಲೇಜು : ಎನ್ ಎಸ್ ಎಸ್ ಘಟಕಕ್ಕೆ ಸುವರ್ಣ ಸಂಭ್ರಮ: ಅ.5:ಹಿರಿಯ ಸ್ವಯಂಸೇವಕರ ಒಗ್ಗೂಡುವಿಕೆಯಲ್ಲಿ ‘ ಸುವರ್ಣ ಸಮ್ಮಿಲನ ‘ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಶಿಕ್ಷಕರಿಗೆ ‘ವೃತ್ತಿ-ವ್ಯಕ್ತಿತ್ವ ವಿಕಸನ’ ತರಬೇತಿ ಕಾರ್ಯಾಗಾರ

Suddi Udaya
error: Content is protected !!