September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಗುರುದೇವ ಪ್ರಥಮ ದರ್ಜೆ ಕಾಲೇಜು: ವಾರ್ಷಿಕ ವಿಶೇಷ ಶಿಬಿರದ ಸಮಾರೋಪ

ಬೆಳ್ತಂಗಡಿ: ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ 2025-26ನೇ ಶೈಕ್ಷಣಿಕ ವರ್ಷದ ವಾರ್ಷಿಕ ವಿಶೇಷ ಶಿಬಿರವನ್ನು ಕೊಯ್ಯೂರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎ.ರಿಂದ ಎ.9ರವರೆಗೆ ಜರುಗಿತು.

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ಗುರುದೇವ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷೆ ಪ್ರೀತಿತಾ ಧರ್ಮವಿಜೇತ್ ವಹಿಸಿ ಮಾತನಾಡಿ ವಿದ್ಯಾರ್ಥಿಗಳು ರಾಷ್ಟ್ರೀಯ ಸೇವಾ ಯೋಜನಾ ಘಟಕಕ್ಕೆ ಸೇರಿಕೊಂಡು ತಮ್ಮ ವ್ಯಕ್ತಿತ್ವವನ್ನು ನಿರ್ಮಾಣ ಮಾಡಿಕೊಳ್ಳಬೇಕು. ಶಿಸ್ತು, ಸಮಯಪ್ರಜ್ಞೆ, ತಾಳ್ಮೆ ಮುಂತಾದ ಮೌಲ್ಯಗಳನ್ನು ತಮ್ಮಲ್ಲಿ ಅಳವಡಿಸಿಕೊಳ್ಳಬೇಕು, ಹೆತ್ತವರಿಗೆ ಗೌರವ ಕೊಡಬೇಕು, ಎನ್ಎಸ್ಎಸ್ ನಂತಹ ಘಟಕಗಳ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ವಿದ್ಯಾರ್ಥಿಗಳು ಉತ್ತಮ ಆದರ್ಶ ವಿದ್ಯಾರ್ಥಿಯಾಗಿ ಬಾಳಬೇಕು ಎಂದು ಹೇಳಿದರು.

ಮುಖ್ಯ ಅತಿಥಿ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಜಗನ್ನಾಥ ಮಾತನಾಡಿ ಏಳು ದಿನಗಳ ಕಾಲ ನಡೆದ ಶಿಬಿರವು ನಮ್ಮ ಶಾಲೆಯ ಅಭಿವೃದ್ಧಿಗೆ ಬಹಳಷ್ಟು ಸಹಕಾರಿಯಾಗಿದೆ ಎಂದರು.

ಶಾಲಾ ಮುಖ್ಯೋಪಾಧ್ಯಾಯಿನಿ ವಸಂತಿ ಕೆ.ಎನ್ ಸಮಾರೋಪ ಭಾಷಣ ಮಾಡಿ ಎನ್ಎಸ್ಎಸ್ ಶಿಬಿರಾರ್ಥಿ ಗಳ ಕಾರ್ಯವೈಕರಿಯ ಬಗ್ಗೆ ಪ್ರಶಂಸನಿಯ ಮಾತುಗಳನ್ನಾಡಿದರು. ಕಾಲೇಜಿನ ಪ್ರಾಂಶುಪಾಲೆ ಡಾ. ಸವಿತಾ ಗೌರವ ಉಪಸ್ಥಿತರಿದ್ದು ಅಭಿನಂದನಾ ಭಾಷಣವನ್ನು ಮಾಡಿ ಶಿಬಿರಕ್ಕೆ ಸಹಕರಿಸಿದ ಎಲ್ಲರನ್ನು ಅಭಿನಂದಿಸಿದರು.

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ವಿಶ್ವನಾಥ ಪೂಜಾರಿ ಮಲೆಬೆಟ್ಟು, ಲೀಲಾ, ಸೇವಾ ಪ್ರತಿನಿಧಿಗಳು ಧರ್ಮಸ್ಥಳ , ಶಾಲೆಯ ತಾಯಂದಿರ ಸಮಿತಿಯ ಅಧ್ಯಕ್ಷೆ ಜಯಂತಿ ಬಾಲಚಂದ್ರ ಗೌಡ ಫೋಸಟ್ಟೂ, ಉಪಸ್ಥಿತರಿದ್ದು ಶುಭ ಹಾರೈಸಿದರು.

ಎನ್ಎಸ್ಎಸ್ ಘಟಕದ ನಾಯಕರಾದ ಆಶಿಕ್, ಭೂಮಿಕಾ ಶೆಟ್ಟಿ, ದೀಕ್ಷಾ, ಮನಘೋಷಿತ್ , ಚಿಂತನ್ , ಶಿಬಿರದ ಅನುಭವವನ್ನು ಹಂಚಿಕೊಂಡರು.

ಈ ಸಂದರ್ಭದಲ್ಲಿ ಶಿಬಿರದ ನೆನಪಿಗಾಗಿ ಶಾಲೆಗೆ ಕಂಚಿನ ಗಂಟೆಯನ್ನು ನೀಡಲಾಯಿತು. ಶಿಬಿರಾಧಿಕಾರಿ ಬಿ ಎ ಶಮೀವುಲ್ಲ ಪ್ರಾಸ್ತಾವಿಸಿ, ಸ್ವಾಗತಿಸಿದರು, ಸಹ ಶಿಬಿರ ಅಧಿಕಾರಿ ಅಂಬಿಕಾ ಶಿಬಿರದ ಸಂಪೂರ್ಣ ವರದಿಯನ್ನು ಮಂಡಿಸಿದರು, ಶಿಬಿರಾರ್ಥಿಗಳಾದ ದೀಕ್ಷಿತ್ ಮತ್ತು ಸ್ವಾತಿ ಕಾರ್ಯಕ್ರಮ ನಿರೂಪಿಸಿದರು. ಸಹ ಶಿಬಿರ ಅಧಿಕಾರಿ ಸತೀಶ್ ಸಾಲಿಯಾನ್ ಧನ್ಯವಾದಗೈದರು.

Related posts

ಮಡoತ್ಯಾರಿನ ಶಾನ್ವಿ ಪೂಜಾರಿ ಹಾಗೂ ಶ್ರೇಯಸ್ ಪೂಜಾರಿ ರವರಿಗೆ ಪ್ರತಿಭಾ ರತ್ನ ಪ್ರಶಸ್ತಿ

Suddi Udaya

ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ಕಾಜೂರು ಹಯಾತುಲ್ ಔಲಿಯಾ ದರ್ಗಾ ಶರೀಫ್ ನಲ್ಲಿ ಸಂಭ್ರಮದ ಈದುಲ್ ಫಿತ್ರ್ ಆಚರಣೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ

Suddi Udaya

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ‌ ಶಾಲೆಯ ಶಿಕ್ಷಕ – ರಕ್ಷಕ ಸಂಘದ ಸಭೆ

Suddi Udaya

ಉದ್ಭವ ಶ್ರೀ ಆದಿಲಿಂಗೇಶ್ವರ ದೇವಸ್ಥಾನ ಮೂಡೈಪಲ್ಕೆ ದೈವ ನಿಂದನೆ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟವರ ಮೇಲೆ ಪ್ರಕರಣ ದಾಖಲಿಸಿ- ರುಕ್ಮಯ್ಯ ಎಂ.

Suddi Udaya

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯದಿಂದ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅವಹೇಳನ ಮತ್ತು ಅಪಪ್ರಚಾರ ಮಾಡುವವರ ವಿರುದ್ಧ ಜಾನ್ ಡೋ ಆದೇಶ

Suddi Udaya
error: Content is protected !!