September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪಿಯುಸಿ ಫಲಿತಾಂಶ: ಎಸ್‌ಡಿಎಂ ಪಿಯು ಕಾಲೇಜಿಗೆ ಶೇ.98.78 ಫಲಿತಾಂಶ

ಉಜಿರೆ: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಉಜಿರೆಯ ಶ್ರೀ ಧ. ಮಂ. ಪದವಿಪೂರ್ವ ಕಾಲೇಜು ಶೇ.98.78 ಫಲಿತಾಂಶ ದಾಖಲಿಸಿದೆ.

ಪರೀಕ್ಷೆಗೆ ಹಾಜರಾದ 904 ವಿದ್ಯಾರ್ಥಿಗಳ ಪೈಕಿ 893 ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದು, ವಿಜ್ಞಾನ ವಿಭಾಗದಲ್ಲಿ ಶೇ.98.62, ವಾಣಿಜ್ಯ ವಿಭಾಗದಲ್ಲಿ ಶೇ.99.69, ಕಲಾ ವಿಭಾಗದಲ್ಲಿ ಶೇ.95.77 ಫಲಿತಾಂಶ ಲಭಿಸಿದೆ.

ವಾಣಿಜ್ಯ ವಿಭಾಗದಲ್ಲಿ ಹಂಸಿನಿ ಭಿಡೆ 595 ಅಂಕಗಳೊಂದಿಗೆ ಕಾಲೇಜಿಗೆ ಪ್ರಥಮ ಸ್ಥಾನ ಹಾಗೂ ರಾಜ್ಯ ಮಟ್ಟದಲ್ಲಿ 6ನೇ ರ‍್ಯಾಂಕ್, ಅಂಶುಲ ಶ್ರೇಷ್ಠ 592 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಹಾಗೂ ರಾಜ್ಯ ಮಟ್ಟದಲ್ಲಿ 9ನೇ ರ‍್ಯಾಂಕ್, ವಿಜ್ಞಾನ ವಿಭಾಗದ ಅಂಕಿತಾ 591 ಅಂಕಗಳೊಂದಿಗೆ ಕಾಲೇಜಿಗೆ ಪ್ರಥಮ ಸ್ಥಾನ ಹಾಗೂ ರಾಜ್ಯ ಮಟ್ಟದಲ್ಲಿ 9ನೇ ರ‍್ಯಾಂಕ್ ಪಡೆದಿದ್ದಾರೆ.

ರಾಮಚರಣ್ 591 ಅಂಕಗಳೊಂದಿಗೆ ತೃತೀಯ ಸ್ಥಾನ ಹಾಗೂ ರಾಜ್ಯ ಮಟ್ಟದಲ್ಲಿ 10ನೇ ರ‍್ಯಾಂಕ್ ಮತ್ತು ಕಲಾ ವಿಭಾಗದಲ್ಲಿ ನಿಜ ಕುಲಾಲ್ 593 ಅಂಕಗಳೊಂದಿಗೆ ಕಾಲೇಜಿಗೆ ಪ್ರಥಮ ಸ್ಥಾನ ಹಾಗೂ ರಾಜ್ಯ ಮಟ್ಟದಲ್ಲಿ 4ನೇ ರ‍್ಯಾಂಕ್, ಶ್ರೀಪೂರ್ಣ ಅಂಕಗಳೊಂದಿಗೆ 588 ಕಾಲೇಜಿಗೆ ದ್ವಿತೀಯ ಸ್ಥಾನ ಹಾಗೂ ರಾಜ್ಯ ಮಟ್ಟದಲ್ಲಿ 9ನೇ ರ‍್ಯಾಂಕ್ ಪಡೆದು ಕಾಲೇಜಿಗೆ ಕೀರ್ತಿ ತಂದಿರುತ್ತಾರೆ.

ವಿಜ್ಞಾನ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 510 ವಿದ್ಯಾರ್ಥಿಗಳಲ್ಲಿ 503 ಮಂದಿ ಉತ್ತೀರ್ಣಗೊಂಡಿದ್ದು, 234 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 260 ವಿದ್ಯಾರ್ಥಿಗಳು ಪ್ರಥಮ ಹಾಗೂ 9 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ.

ವಾಣಿಜ್ಯ ವಿಭಾಗದಲ್ಲಿ 323 ವಿದ್ಯಾರ್ಥಿಗಳಲ್ಲಿ 322 ಮಂದಿ ಉತ್ತೀರ್ಣಗೊಂಡಿದ್ದು, 132 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ , 182 ವಿದ್ಯಾರ್ಥಿಗಳು ಪ್ರಥಮ, 7 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ.

ಕಲಾ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 71 ವಿದ್ಯಾರ್ಥಿಗಳಲ್ಲಿ 68 ಮಂದಿ ಉತ್ತೀರ್ಣಗೊಂಡಿದ್ದು, 16 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 34 ವಿದ್ಯಾರ್ಥಿಗಳು ಪ್ರಥಮ, 18 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ.

ಸಾಧಕರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲ ಪ್ರಮೋದ್ ಕುಮಾರ್ ಬಿ., ಉಪ ಪ್ರಾಂಶುಪಾಲ ಡಾ. ರಾಜೇಶ್ ಬಿ., ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

Related posts

ವೇದ ವಿದ್ವಾಂಸರಾದ ವೇದಮೂರ್ತಿ ಶಂಭು ಭಟ್ ಚಾವಡಿಬಾಗಿಲು “ಹವ್ಯಕ ವೇದ ರತ್ನ” ಪ್ರಶಸ್ತಿಗೆ ಆಯ್ಕೆ

Suddi Udaya

ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಕಲೋತ್ಸವದಲ್ಲಿ ಎಲ್ . ಸಿ. ಆರ್ ವಿದ್ಯಾ ಸಂಸ್ಥೆಗೆ ಸಮಗ್ರ ಪ್ರಶಸ್ತಿ

Suddi Udaya

ರಾಷ್ಟ್ರ ಮುದ್ರೆಯನ್ನು ಅತೀ ಚಿಕ್ಕ ಅಳತೆಯಲ್ಲಿ ಬಿಡಿಸಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧನೆಗೈದ ಮೆಡಿಕಲ್ ವಿದ್ಯಾರ್ಥಿನಿ ಅಪೇಕ್ಷ ಎನ್.ಎಸ್ ಉಜಿರೆ

Suddi Udaya

ಉಜಿರೆ: ಅಪರಿಚಿತ ವ್ಯಕ್ತಿಯ ಶವ ಪತ್ತೆ: ವಾರೀಸುದಾರರ ಪತ್ತೆಗೆ ಮನವಿ

Suddi Udaya

ನೀವು ಯಾವ ದೇವಸ್ಥಾನ, ಯಾವ ರೀತಿಯ ಪ್ರಮಾಣ ಮಾಡಲು ಹೇಳುತ್ತೀರಿ ಅದಕ್ಕೆ ನಾನು ಸದಾ ಸಿದ್ಧ: ಶಾಸಕ ಹರೀಶ್ ಪೂಂಜರಿಗೆ ಮಾಜಿ ಶಾಸಕ ವಸಂತ ಬಂಗೇರ ಪತ್ರಿಕಾಗೋಷ್ಠಿಯಲ್ಲಿ ಪ್ರತಿ ಸವಾಲು

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮಸ್ಥಳದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ವಿಶೇಷ ಕಾರ್ಯಕ್ರಮ ತುಡಿತ ಭಾಗ ಆರು

Suddi Udaya
error: Content is protected !!