ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನೇತ್ರಾವತಿ ಸ್ನಾನಘಟ್ಟದ ಬಳಿ ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನ

ಧರ್ಮಸ್ಥಳ: ನೇತ್ರಾವತಿ ಸ್ನಾನಘಟ್ಟದ ಬಳಿ ಏ.11 ರಂದು ಸಂಜೆ ವ್ಯಕ್ತಿಯೊಬ್ಬರು ತಾನು ತಂದಿದ್ದ ಪೆಟ್ರೋಲ್ ಕ್ಯಾನ್ ನಿಂದ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ತಕ್ಷಣ ಸ್ಥಳೀಯರು ರಕ್ಷಣೆಗೆ ಆಗಮಿಸಿ ಬೆಂಕಿಯನ್ನು ನಂದಿಸಿ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಸಾಗಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.ಧರ್ಮಸ್ಥಳ ಪೊಲೀಸರು ತಕ್ಷಣ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಆಗಮಿಸಿ ಬೆಂಕಿ ಹಚ್ಚಿಕೊಂಡ ವ್ಯಕ್ತಿಯನ್ನು ವಿಚಾರಿಸಿದಾಗ ತಾನು ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಹಚ್ಚಿಗಟ್ಟ ಗ್ರಾಮದ ನಿವಾಸಿ ನರೇಂದ್ರ(50) ಎಂಬುವುದಾಗಿ ತಿಳಿಸಿದ್ದು. ನಾನು ಆತ್ಮಹತ್ಯೆ ಮಾಡಿಕೊಳ್ಳಲು ಧರ್ಮಸ್ಥಳದ ನೇತ್ರಾವತಿ ಬಳಿಗೆ ಆಗಮಿಸಿ ಪೆಟ್ರೋಲ್ ತಾನೆ ತಂದು ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವುದಾಗಿ ತಿಳಿಸಿದ್ದಾನೆ.

ಈ ಘಟನಾ ವಿಚಾರವನ್ನು ನರೇಂದ್ರ ಮನೆಯವರು ಮಾಹಿತಿ ನೀಡಿದ್ದು ಅವರು ಬಂದ ಬಳಿಕ ಆತ್ಮಹತ್ಯೆಗೆ ಯತ್ನಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಬೇಕಾಗಿದೆ.

Related posts

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಎಲ್ ಕೆ ಜಿ ಮತ್ತು ಯುಕೆಜಿ ಮಕ್ಕಳ ರೆಡ್ ಕಲರ್ ಸಂಭ್ರಮ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಮರಿಯಾಂಬಿಕ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಯುವ ದಿನಾಚರಣೆ ಪ್ರಯುಕ್ತ ತರಬೇತಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಮೆಸ್ಕಾಂನಲ್ಲಿ ಕಾರ್ಯನಿರ್ವಹಿಸುತ್ತಿರುವ ನಾಗೇಶ್ ಕುಲಾಲ್ ರಿಗೆ ಗೌರವಾರ್ಪಣೆ

Suddi Udaya

ನಿಡ್ಲೆ: ನೆಡಿಲು ನಾರಾಯಣ ಗೌಡರವರ ತೋಟಕ್ಕೆ ನುಗ್ಗಿದ್ದ ಒಂಟಿ ಸಲಗ: ಹಲವು ಬಾಳೆ ಗಿಡ ಹಾಗೂ ಅಡಿಕೆ ಗಿಡಗಳಿಗೆ ಹಾನಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ  ಬೆಂಗಳೂರಿನ ನೃತ್ಯಕುಟೀರ ತಂಡದವರಿಂದ ವಿದುಷಿ ಶ್ರೀಮತಿ ದೀಪಾ ಭಟ್ ನಿರ್ದೇಶನದಲ್ಲಿ ನೃತ್ಯರೂಪಕ

Suddi Udaya
error: Content is protected !!