September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಜಾರಿಗೆ ಹೈಕೋರ್ಟ್ ತಡೆ

ಬೆಂಗಳೂರು: ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿ ತಾಲೂಕಿಗೆ ಮೂರನೇ ಬಾರಿಗೆ ಗಡಿಪಾರು ಮಾಡಿ ಹೊರಡಿಸಿರುವ ಆದೇಶವನ್ನು ಏ.16ರವರೆಗೆ ಜಾರಿ ಮಾಡದಂತೆ ಹೈಕೋರ್ಟ್, ಸರಕಾರ ಮತ್ತು ಪುತ್ತೂರು ಉಪ ವಿಭಾಗಾಧಿಕಾರಿಗೆ ಸೂಚಿಸಿದೆ.

ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತಂದ ಆರೋಪದ ಮೇರೆಗೆ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಗೆ ಆರು ತಿಂಗಳ ಕಾಲ ಗಡಿಪಾರು ಮಾಡಿ ಮಾರ್ಚ್ 13ರಂದು ಪುತ್ತೂರು ಉಪ ವಿಭಾಗಾಧಿಕಾರಿ ಆದೇಶಿಸಿದ್ದರು. ಈ ಆದೇಶ ರದ್ದುಪಡಿಸಬೇಕು ಎಂದು ಕೋರಿ ತಿಮರೋಡಿ ಸಲ್ಲಿಸಿದ್ದ ಅರ್ಜಿಯು ಶುಕ್ರವಾರ ನ್ಯಾ. ಸಚಿನ್ ಶಂಕ‌ರ್ ಮಗದು. ಅವರಿದ್ದ ಏಕಸದಸ್ಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

ಅರ್ಜಿದಾರ ಪರ ವಕೀಲರು, “ಅರ್ಜಿ ವಿಚಾರಣೆಯನ್ನು ಏ.24 ಅಥವಾ 27ಕ್ಕೆ ಮುಂದೂಡಬೇಕು. ಅಲ್ಲಿಯವರೆಗೆ ಗಡಿಪಾರು ಆದೇಶ ಜಾರಿಗೆ ತಾತ್ಕಾಲಿಕ ತಡೆ ನೀಡಿ ಹೊರಡಿಸಿರುವ ಮಧ್ಯಂತರ ಆದೇಶವನ್ನು ಮುಂದುವರಿಸಬೇಕು,” ಎಂದು ಕೋರಿದರು.

ಅಡ್ವಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ, “ಇದು ಮೂರನೇ ಸುತ್ತಿನ ವ್ಯಾಜ್ಯವಾಗಿದೆ. ಅರ್ಜಿದಾರರನ್ನು ಗಡಿಪಾರು ಮಾಡಿ ಮೂರನೇ ಬಾರಿಗೆ ಆದೇಶ ಹೊರಡಿಸಲಾಗಿದೆ. ಪ್ರಕರಣ ಸಂಬಂಧ ಮೇಲ್ಮನವಿ ಪ್ರಾಧಿಕಾರದಲ್ಲಿ ಪರಿಹಾರ ಕಂಡುಕೊಳ್ಳಲು ಅರ್ಜಿದಾರರಿಗೆ ಅವಕಾಶವಿದೆ. ಅರ್ಜಿದಾರರು ರೌಡಿಶೀಟರ್ ಆಗಿದ್ದು, ಅವರ ವಿರುದ್ಧ 26 ಪ್ರಕರಣಗಳು ದಾಖಲಾಗಿವೆ. ಈ ಹಿಂದೆ ಗಡೀಪಾರು ವಿಚಾರವಾಗಿ ಹೈಕೋರ್ಟ್ ಏಕಸದಸ್ಯ ಪೀಠ ವಿಚಾರಣೆ ನಡೆಸಿ ಆದೇಶ ಮಾಡಿದೆ,” ಎಂದು ತಿಳಿಸಿದರು.

Related posts

ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ನೇತೃತ್ವದಲ್ಲಿ ಮಡಿವಾಳ ಮಾಚಿದೇವ ಜಯಂತಿ ಆಚರಣೆ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಭಾರತೀಯ ಮಜ್ದೂರು ಸಂಘದ ಜಿಲ್ಲಾದ್ಯಕ್ಷ ಅನಿಲ್ ಕುಮಾರ್ ಯು ಬೆಂಬಲ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಯೂತ್ ತರಬೇತಿ ಕಾರ್ಯಕ್ರಮ

Suddi Udaya

ಕರ್ನಾಟಕ ರಾಜ್ಯದ ವೃತ್ತಿಪರ ಸಿವಿಲ್ ಇಂಜಿನಿಯರುಗಳ ಪರಿಷತ್ತಿನ ಚೊಚ್ಚಲ ಸಮಿತಿಗೆ ಜಗದೀಶ ಪ್ರಸಾದ್ ಆಯ್ಕೆ

Suddi Udaya

ಕಡಿರುದ್ಯಾವರ, ಮಲವಂತಿಗೆ, ಮಿತ್ತಬಾಗಿಲು ಗ್ರಾಮದ ಕಾಂಗ್ರೆಸ್ ಬೂತ್ ಸಮಿತಿಯ ಸಭೆ

Suddi Udaya

ಕಾಶಿಪಟ್ಣ: ಬೈಕ್ ಗಳ ನಡುವೆ ಅಪಘಾತ: ಸವಾರರಿಗೆ ಗಾಯ

Suddi Udaya
error: Content is protected !!