September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಭೀಕರ ರಸ್ತೆ ಅಪಘಾತ; ಓರ್ವ ಯುವತಿಗೆ ಗಂಭೀರ ಗಾಯ

ಬೆಳ್ತಂಗಡಿ: ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗಳ ಓಮ್ಮಿ ಕಾರೊಂದು ಎರಗಿದ್ದು-ಯುವತಿಗೆ ಗಂಭೀರ ಗಾಯಗಳಾಗಿದ್ದು ಮೂವರು ಪವಾಡ ಸದೃಶ್ಯ ಪಾರಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಕೊಲ್ಪದಬೈಲು ಎಂಬಲ್ಲಿ ಭಾನುವಾರ ಮಧ್ಯಾಹ್ನ ಘಟನೆ ನಡೆದಿದೆ.

ಬೊಲೆರೋ ಜೀಪ್‌ನಿಂದ ಇಳಿದ ಇಬ್ಬರು ಯುವತಿಯರು ಹಾಗೂ ಇಬ್ಬರು ಮಕ್ಕಳು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಅತೀ ವೇಗವಾಗಿ ಬಂದ ಓಮ್ಮಿ ಕಾರು ಸಣ್ಣ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದು ಏಕಾಏಕಿ ಈ ನಾಲ್ವರು ಪಾದಚಾರಿಗಳ ಮೇಲೆರಗಿದೆ. ಅದೃಷ್ಟವಶಾತ್ ಮಕ್ಕಳಿಬ್ಬರು ಹಾಗೂ ಯುವತಿಯೊಬ್ಬರು ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ. ಆದರೆ ಓರ್ವ ಯುವತಿ ಓಮ್ಮಿ ಕಾರಿನಡಿ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ತಕ್ಷಣ ಅಲ್ಲೇ ಇದ್ದ ರಿಕ್ಷಾದಲ್ಲಿ ಬೆಳ್ತಂಗಡಿ ಆಸ್ಪತ್ರೆಗೆ ಸಾಗಿಸಲಾಗಿದೆ. ಅಪಘಾತದ ಭೀಕರ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

Related posts

ಹೊಸಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ಮಳೆಗೆ ಗುಡ್ಡ ಕುಸಿತ, ಸುಲ್ಕೇರಿಮೊಗ್ರು-ಶಿರ್ಲಾಲು ರಸ್ತೆ ಸಂಚಾರಕ್ಕೆ ಅಡ್ಡಿ

Suddi Udaya

ಅಕ್ರಮ ಮರಳು ಸಾಗಾಟದ ಲಾರಿಗಳ ಮೇಲೆ ವೇಣೂರು ಪೊಲೀಸರ ದಾಳಿ

Suddi Udaya

ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್ ಸಾಧಕ , ಯುವ ವಿಜ್ಞಾನಿ ದೀಪಕ್ ಸಂಶೋಧನಾ ಪಯಣದ ಕೆಲಸಕ್ಕೆ ಸುಧಾ ಮೂರ್ತಿರವರಿಂದ ಶ್ಲಾಘನೆ

Suddi Udaya

ಭಾ.ಜ.ಪಾ. ಹಿರಿಯ ನಾಗರೀಕ ಪ್ರಕೋಷ್ಠದ ರಾಜ್ಯ ಸಂಚಾಲಕರಾಗಿ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ನೇಮಕ

Suddi Udaya

ಮೇಲಂತಬೆಟ್ಟು ಅಂಗನವಾಡಿ ಕೇಂದ್ರದಲ್ಲಿ ಪೋಷಣಾ ಅಭಿಯಾನ

Suddi Udaya
error: Content is protected !!