28.1 C
ಪುತ್ತೂರು, ಬೆಳ್ತಂಗಡಿ
September 10, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಎ.15-16: ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ

ಬೆಳ್ತಂಗಡಿ: ಮಂಗಳೂರು ವಿಶ್ವವಿದ್ಯಾನಿಲಯದ ಸಂಯೋಜಿತ ಸಂಸ್ಥೆಯಾದ ಮಡಂತ್ಯಾರಿನ ಸೇಕ್ರೆಡ್ ಹಾರ್ಟ್ ಕಾಲೇಜು 2025–26ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಪುರುಷರ ಮತ್ತು ಮಹಿಳೆಯರ ಅಂತರ್ ಕಾಲೇಜು ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟವನ್ನು ಏ.15 ಮತ್ತು 16ರಂದು ಕಾಲೇಜಿನ ಕ್ರೀಡಾಂಗಣದಲ್ಲಿ ಆಯೋಜಿಸಲಿದೆ ಎಂದು ಕಾಲೇಜಿನ ಪ್ರಾಂಶುಪಾಲ ಪ್ರೊ.ಅಲೆಕ್ಸ್ ಐವನ್ ಸಿಕ್ವೇರಾ ಅವರು ಎ.13ರಂದು ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಪುರುಷರಿಗಾಗಿ ‘ಶ್ರೀ ಎಂ.ಕೆ. ಅನಂತರಾಜ್ ಸ್ಮರಣಾರ್ಥ ಟ್ರೋಫಿ’ ಹಾಗೂ ಮಹಿಳೆಯರಿಗಾಗಿ ‘ಫ್ಯಾಬಿಯನ್ ಬಿ.ಎನ್. ಕುಲಾಸೊ ಸ್ಮರಣಾರ್ಥ ರೋಲಿಂಗ್ ಟ್ರೋಫಿ’ಯನ್ನು ಒಳಗೊಂಡ ಈ ಪಂದ್ಯಾಟಕ್ಕೆ ವಿಶ್ವವಿದ್ಯಾನಿಲಯ ವ್ಯಾಪ್ತಿಯ ವಿವಿಧ ಕಾಲೇಜುಗಳಿಂದ ನೂರಾರು ಕ್ರೀಡಾಪಟುಗಳು ಭಾಗವಹಿಸುವ ನಿರೀಕ್ಷೆಯಿದೆ. ವಿದ್ಯಾರ್ಥಿಗಳಲ್ಲಿ ಕ್ರೀಡಾ ಮನೋಭಾವ, ಸಾಂಘಿಕ ಚಟುವಟಿಕೆ ಮತ್ತು ಸ್ಪರ್ಧಾತ್ಮಕ ಮನೋಭಾವವನ್ನು ಉತ್ತೇಜಿಸುವುದು ಈ ಕ್ರೀಡಾಕೂಟದ ಮುಖ್ಯ ಉದ್ದೇಶವಾಗಿದೆ.

ಉದ್ಘಾಟನಾ ಸಮಾರಂಭ: ಏ.15ರಂದು ಪಂದ್ಯಾಟದ ಉದ್ಘಾಟನೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ನೆರವೇರಿಸಲಿದ್ದಾರೆ. ಸೇಕ್ರೆಡ್ ಹಾರ್ಟ್ ಶಿಕ್ಷಣ ಸಂಸ್ಥೆಗಳ ಸಂಚಾಲಕ ವಂ| ಡಾ| ಸ್ಟ್ಯಾನಿ ಗೋವಿಯಸ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿಯ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ| ಕರುಣಾಕರ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಶಿಕ್ಷಣ ಮತ್ತು ಕ್ರೀಡಾ ಕ್ಷೇತ್ರದ ಗಣ್ಯರು ಗೌರವ ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ.

ಸಮಾರೋಪ ಸಮಾರಂಭ: ಏ.16ರಂದು ಸಮಾರೋಪ ಸಮಾರಂಭವು ವಂ| ಡಾ| ಸ್ಟ್ಯಾನಿ ಗೋವಿಯಸ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸೇಕ್ರೆಡ್ ಹಾರ್ಟ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ| ಜೋಸೆಫ್ ಎನ್.ಎಂ. ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

1982ರಲ್ಲಿ ಸ್ಥಾಪನೆಯಾದ ಸೇಕ್ರೆಡ್ ಹಾರ್ಟ್ ಕಾಲೇಜು ಶೈಕ್ಷಣಿಕ ಮತ್ತು ಕ್ರೀಡಾ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿದೆ. ಇತ್ತೀಚೆಗೆ ನಡೆದ 2024–25ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಕ್ರೀಡಾಕೂಟದ ಸಮಗ್ರ ಚಾಂಪಿಯನ್‌ಶಿಪ್‌ನಲ್ಲಿ ಈ ಕಾಲೇಜು ತೃತೀಯ ಸ್ಥಾನವನ್ನು ಪಡೆದುಕೊಂಡಿದೆ.

ಈ ಪಂದ್ಯಾಟವು ಕಾಲೇಜಿನ ಪ್ರಾಂಶುಪಾಲ ಪ್ರೊ.ಅಲೆಕ್ಸ್ ಐವನ್ ಸಿಕ್ವೇರಾ ಅವರ ನೇತೃತ್ವದಲ್ಲಿ, ದೈಹಿಕ ಶಿಕ್ಷಣ ನಿರ್ದೇಶಕ ಮತ್ತು ಕಾರ್ಯಕ್ರಮದ ಸಂಚಾಲಕ ಡಾ| ಪ್ರಕಾಶ್ ಡಿಸೋಜ, ಸಂಘಟನಾ ಕಾರ್ಯದರ್ಶಿ ಹಾಗೂ ವಾಣಿಜ್ಯ ವಿಭಾಗದ ಮುಖ್ಯಸ್ಥ ಡಾ| ಈಶ್ವರ ಗೌಡ ಪಿ. ಅವರ ಮಾರ್ಗದರ್ಶನದಲ್ಲಿ ಆಯೋಜಿಸಲ್ಪಟ್ಟಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ದೈಹಿಕ ಶಿಕ್ಷಣ ನಿರ್ದೇಶಕ ಮತ್ತು ಕಾರ್ಯಕ್ರಮ ಸಂಚಾಲಕ ಡಾ. ಪ್ರಕಾಶ್ ಡಿಸೋಜ, ಸಂಘಟನಾ ಕಾರ್ಯದರ್ಶಿ ಹಾಗೂ ವಾಣಿಜ್ಯ ವಿಭಾಗದ ಮುಖ್ಯಸ್ಥ ಡಾ. ಈಶ್ವರ ಗೌಡ ಪಿ., ಕನ್ನಡ ಉಪನ್ಯಾಸಕಿ ರಾಜೇಶ್ವರಿ ಉಪಸ್ಥಿತರಿದ್ದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಇಂಜಿನಿಯರ್ಸ್ ಡೇ ಆಚರಣೆ

Suddi Udaya

ಬೆಳಾಲು: ಸ್ಕೂಟರ್‌ಗೆ ಕ್ರೇನ್ ಡಿಕ್ಕಿ ಹೊಡೆದು ಅಪಘಾತ-ಬಳಂಜ ಕಾಪಿನಡ್ಕ ನಿವಾಸಿ ಜಯ ಮೇಸ್ತ್ರೀ ಸ್ಥಳದಲ್ಲೇ ಸಾವು

Suddi Udaya

ಮಚ್ಚಿನ : ಕಲಾಯಿ ರಸ್ತೆ ಪುಂಚಪಾದೆಯಲ್ಲಿ ವಾರಿಸುದಾರರಿಲ್ಲದೆ ಪತ್ತೆಯಾದ ಎರಡು ಬೈಕ್ ಗಳು

Suddi Udaya

ಉಜಿರೆ: ಎಸ್.ಡಿ.ಎಂ ವಸತಿ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನ ಆಚರಣೆ

Suddi Udaya

ಅ.19: ಪೊದುಂಬಿಲ ಕೆಸರ್‌ದ ಕಂಡಡ್ ಪರ್ಬದ ಗೊಬ್ಬು

Suddi Udaya

ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಬಿಜೆಪಿ ಬಿರುಸಿನ ಮತ ಬೇಟೆ

Suddi Udaya
error: Content is protected !!