September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳಿಯ ಗ್ರಾಮ ಪಂಚಾಯತ್ ಅರಿವು ಕೇಂದ್ರದ ಸಭೆ

ಕಳಿಯ: ಗ್ರಾಮ ಪಂಚಾಯತ್ ಗ್ರಂಥಾಲಯಗಳ ಪರಿಣಾಮಕಾರಿ ನಿರ್ವಹಣೆ ಕುರಿತು ಪಂಚಾಯತ್ ಅರಿವು ಕೇಂದ್ರದ ಸಲಹಾ ಸಮಿತಿ ಸಭೆಯು ಕಳಿಯ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರಗಿತು.

ಅರಿವು ಕೇಂದ್ರದಲ್ಲಿರುವ ಪುಸ್ತಕಗಳ ನಿರ್ವಹಣೆ , ಹಳೆ ಪುಸ್ತಕಗಳು , ನ್ಯೂಸ್ ಪೇಪರ್ ವಿಲೇವಾರಿ ಬಗ್ಗೆ ಚರ್ಚಿಸಲಾಯಿತು. ಅರಿವು ಕೇಂದ್ರದಲ್ಲಿ ಮೂಲ ಸೌಕರ್ಯಗಳ ಕೊರತೆ, ಮೇ ತಿಂಗಳಲ್ಲಿ ಬೇಸಿಗೆ ಶಿಬಿರ ನಡೆಸುವ ಬಗ್ಗೆ ಚರ್ಚಿಸಲಾಯಿತು.

ಅರಿವು ಕೇಂದ್ರದಲ್ಲಿರುವ ಗ್ರಂಥಾಲಯ ಮತ್ತು ಕಂಪ್ಯೂಟರ್ ಸೌಕರ್ಯಗಳನ್ನು ಗೇರುಕಟ್ಟೆ ಪ್ರೌಢಶಾಲೆಯ ವಿದ್ಯಾರ್ಥಿಗಳು ಗರಿಷ್ಠವಾಗಿ ಪಡೆಯುವಂತೆ ಪ್ರೋತ್ಸಾಹ ನೀಡುತ್ತಿರುವ ಸಂಸ್ಥೆಯ ಮುಖ್ಯಸ್ಥರನ್ನು ಅಭಿನಂದಿಸಲಾಯಿತು.

ಅರಿವು ಕೇಂದ್ರದ ಸಲಹಾ ಸಮಿತಿ ಸದಸ್ಯರಾದ ಸರಕಾರಿ ಪ್ರೌಢಶಾಲಾ ಉಪ ಪ್ರಾಚಾರ್ಯೆ ಈಶ್ವರಿ ಕೆ ,ನಿವೃತ್ತ ಉಪ ಪ್ರಾಂಶುಪಾಲ ದಿವಾಕರ ಆಚಾರ್ಯ ಗೇರುಕಟ್ಟೆ , ಪಂಚಾಯತ್ ಮಾಜಿ ಅಧ್ಯಕ್ಷ ಕೇಶವ ಪೂಜಾರಿ, ಶರತ್ ಕುಮಾರ್, ಪ್ರಜ್ಞಾ , ಶ್ರಾವ್ಯ, ಚಾರ್ವಿಕ್ ಹಾಗೂ ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕುಂಞ .ಕೆ , ಅರಿವು ಕೇಂದ್ರ ಮೇಲ್ವಿಚಾರಕಿ ಪ್ರಮೀಳಾ ಭಾಗವಹಿಸಿದ್ದರು. ಪಂಚಾಯತ್ ಸಿಬ್ಬಂದಿವರ್ಗದವರು ಸಹಕರಿಸಿದರು.

Related posts

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಸೇತುವೆ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ರೂ.14.25 ಕೋಟಿ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ ನಿನಾದ ಕ್ಲಾಸಿಕಲ್ಸ್ ನಲ್ಲಿ ನೋಂದಾವಣಿ ಆರಂಭ: ಒಂದೇ ಸೂರಿನಡಿಯಲ್ಲಿ ವಿವಿಧ ವಿದ್ಯೆಗಳನ್ನು ಕಲಿಯುವ ಸುವರ್ಣಾವಕಾಶ

Suddi Udaya

ಜು.14: ಅಳದಂಗಡಿಯಲ್ಲಿ ಪ್ರಾರಂಭಗೊಳ್ಳುತ್ತಿದೆ “ನೊಚ್ಚ ಸೆರಾಮಿಕ್ಸ್”

Suddi Udaya

ಆ.1: ವಿದ್ಯುತ್ ನಿಲುಗಡೆ

Suddi Udaya

ಮೇ 5: ‘ನನ್ನ ಬೂತ್ ನನ್ನ ಜವಾಬ್ದಾರಿ’ ಎಂಬ ಧ್ಯೇಯದೊಂದಿಗೆ ಪ್ರಚಾರ ಕಾರ್ಯ ಮಾಡುವಂತೆ ಕರೆ ನೀಡಿದ ಮಾಜಿ ಶಾಸಕ ವಸಂತ ಬಂಗೇರ

Suddi Udaya

ಫೆ. 2 : ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗ್ರಾಮ ಸಂಗ್ರಾಮ್; ಉದ್ಯೋಗ ಖಾತ್ರಿ ಯೋಜನೆಯ ಬಚಾವ್‌ ಆಂದೋಲನ: ಪ್ರದೀಪ್ ಈಶ್ವರ್ ಭಾಗಿ

Suddi Udaya
error: Content is protected !!