ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಬೆಳ್ತಂಗಡಿ: ಡಾ| ಬಿ. ಆರ್. ಅಂಬೇಡ್ಕರ್ ರವರ 135 ನೇ ಜನ್ಮದಿನಾಚರಣೆ

ಬೆಳ್ತಂಗಡಿ ತಾಲೂಕು ಆಡಳಿತ, ತಾಲೂಕು ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಪಟ್ಟಣ ಪಂಚಾಯತ್ ಸಂಯುಕ್ತ ಆಶ್ರಯದಲ್ಲಿ ಭಾರತ ರತ್ನ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಡಾ. ಬಿ. ಆರ್. ಅಂಬೇಡ್ಕರ್ ರವರ 135 ನೇ ಜನ್ಮದಿನಾಚರಣೆ ಎ. 14 ರಂದು ಬೆಳ್ತಂಗಡಿ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ನಡೆಯಿತು.

ಶಾಸಕ ಹರೀಶ್ ಪೂಂಜ ಕಾರ್ಯಕ್ರಮ ಉದಾಟಿಸಿ, ಅಧ್ಯಕ್ಷತೆ ವಹಿಸಿದ್ದರು. ಬ್ಯಾಂಕ್ ಆಫ್ ಬರೋಡದ ಶಿವಪ್ರಸಾದ್ ಸೂರ್ಯ ಮುಖ್ಯ ಭಾಷಣ ಮಾಡಿದರು.

ವೇದಿಕೆಯಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್,  ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ. ಎಂ. ಪಿ ಶ್ರೀನಾಥ್, ತಹಶೀಲ್ದಾರ್ ಪ್ರಥ್ವಿ ಸಾನಿಕಂ, ತಾ. ಪಂ. ಇಓ ಭವಾನಿಶಂಕರ್ ಎನ್., ಪ. ಪಂ. ಮುಖ್ಯಾಧಿಕಾರಿ ರಾಜೇಶ್ ಕೆ. ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ  ಧನಂಜಯ್ ಎನ್. ಎಸ್ ಉಪಸ್ಥಿತರಿದ್ದರು.

ವೇಣೂರು ಸ. ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿನಿ ಧನುಶ್ರೀ ಎಸ್ ಕುಲಾಲ್ ಡಾ. ಬಿ. ಆರ್. ಅಂಬೇಡ್ಕರ್ ಕುರಿತು ಭಾಷಣಗೈದರು.

ಮುಂಡಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಮುರಳೀಧರ ಸ್ವಾಗತಿಸಿ, ಗೃಹರಕ್ಷಕ ದಳದ ಘಟಕಾಧಿಕಾರಿ ಜಯಾನಂದ ಅಂಕಾಜೆ ವಂದಿಸಿ, ಸಮಾಜ ಕಲ್ಯಾಣ ಇಲಾಖೆಯ ಹೇಮಲತಾ ನಿರೂಪಿಸಿದರು.

ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ವಿದ್ಯಾರ್ಥಿಗಳು, ಪ. ಜಾತಿ ಮತ್ತು ಪ. ಪಂಗಡ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಮುಂಡಾಜೆ: ಕವಿ ವಿಶ್ರಾಂತ ಶಿಕ್ಷಕ ಶಂಕರ್ ಎನ್.ತಾಮನ್ಕರ್ ರವರ ಸೀತಾ ರಾಮಾಯಣ ಮತ್ತು ಮಕರಂದ ಕವನ ಸಂಕಲನಗಳ ಲೋಕಾರ್ಪಣೆ ಹಾಗೂ ಸಾಧಕರಿಗೆ ಸನ್ಮಾನ

Suddi Udaya

ಅಪಾಯಕಾರಿ ಮರದ ಕಾಲುಸಂಕ ಪ್ರದೇಶಕ್ಕೆ ಬೆಳ್ತಂಗಡಿ ನ್ಯಾಯಾಧೀಶರ ಭೇಟಿ

Suddi Udaya

ತಾಲೂಕು ಮಟ್ಟದ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆ: ವಾಣಿ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ: ಶ್ರೀ. ಧ. ಮಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಶ್ವ ಸಂಗೀತ ದಿನ

Suddi Udaya

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ವಾಹನಗಳು ಪಲ್ಟಿ: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

Suddi Udaya

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ : ನವಚೇತನ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!