September 6, 2026
ಅಭಿನಂದನೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಿಶ್ವವಿದ್ಯಾಲಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದ ಪ್ರಶಸ್ತಿ ಪ್ರದಾನ – ಸಮಾರೋಪ ಸಮಾರಂಭ

ಬೆಳ್ತಂಗಡಿ: ವಿಶ್ವವಿದ್ಯಾಲಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದ ಪ್ರಶಸ್ತಿ ಪ್ರದಾನ ಸಮಾರೋಪ ಸಮಾರಂಭ ಏ. 15 ರಂದು ಸೇಕ್ರೆಡ್ ಹಾರ್ಟ್ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಗಳ ಸಂಚಾಲಕರಾದ ರೆವರೆಂಡ್ ಡಾ. ಸ್ಟ್ಯಾನಿ ಗೋವಿಯಸ್ ವಿಜೇತ ತಂಡಗಳಿಗೆ ಪ್ರಶಸ್ತಿ ಪ್ರದಾನ ಮಾಡಿ ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಸೇಕ್ರೆಡ್ ಹಾರ್ಟ್ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ. ಜೋಸೆಫ್ ಎನ್ ಎಂ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

ಕಾಲೇಜು ಪ್ರಾಂಶುಪಾಲರಾದ ಪ್ರೊ ಅಲೆಕ್ಸ್ ಐವನ್ ಸಿಕ್ವೇರಾ ಕಾರ್ಯಕ್ರಮ ಸುಸೂತ್ರವಾಗಿ ನಡೆಯಲು ಸಹಕರಿದ ಎಲ್ಲರನ್ನೂ ಸ್ಮರಿಸಿದರು. ಪ್ರೊ ಮ್ಯಾಕ್ಸಿಮ್ ಕಾರ್ಲ್, ಸೇಸಪ್ಪ ಗೌಡ, ಪ್ರವೀಣ್ ಕುಮಾರ್ ಕೆ, ಆಲ್ಬರ್ಟ್ ಮೊರಾಸ್, ಜೈನುದ್ದಿನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈಶ್ವರ್ ಗೌಡ ಅವರು ವಂದಿಸಿದರು. ಪ್ರವೀಣ್ ಕುಮಾರ್ ಕೆ ವರದಿ ವಾಚಿಸಿದರು. ಡಾ. ಪ್ರಕಾಶ್ ಡಿ’ಸೋಜಾ ಧನ್ಯವಾದವಿತ್ತರು. ಸ್ನಾತಕೋತ್ತರ ವಿಭಾಗದ ಪ್ರೊ. ನೆಲ್ಸನ್ ಮೋನೀಸ್ ಕಾರ್ಯಕ್ರಮ ನಿರ್ವಹಿಸಿದರು.

ಫಲಿತಾಂಶ :ಮಂಗಳೂರು ವಿಶ್ವವಿದ್ಯಾನಿಲಯ ಪುರುಷರ ಮತ್ತು ಮಹಿಳೆಯರ ಬಾಲ್ ಬ್ಯಾಡ್ಮಿಂಟನ್ ಫೈನಲ್ ಪಂದ್ಯದಲ್ಲಿ ಪುರುಷರ ಮತ್ತು ಮಹಿಳೆಯರ ವಿಭಾಗದಲ್ಲಿ ಆಳ್ವಾಸ್ ಕಾಲೇಜ್ ಮೂಡುಬಿದ್ರೆ ಪ್ರಥಮ ಸ್ಥಾನ ಪಡೆಯಿತು.ಪುರುಷರ ರನ್ನರ್ಸ್ ಅಪ್ ತಂಡವಾಗಿ ಶ್ರೀ ಭುವನೇಂದ್ರ ಕಾಲೇಜು ಕಾರ್ಕಳ ಮತ್ತು ಮಹಿಳೆಯರ ರನ್ನರ್ಸ್ ಅಪ್ ತಂಡವಾಗಿ ಎಸ್ ಡಿ ಪಿ ಟಿ ಪ್ರಥಮ ದರ್ಜೆ ಕಾಲೇಜ್ ಕಟೀಲು ಮೂಡಿಬಂತು . ತೃತೀಯ ಸ್ಥಾನವನ್ನು ಪುರುಷರ ವಿಭಾಗದಲ್ಲಿ ಮಂಗಳೂರು ವಿ ವಿ ಕ್ಯಾಂಪಸ್ ಕೊಣಾಜೆ ಮತ್ತು ಮಹಿಳೆಯರ ವಿಭಾಗದಲ್ಲಿ ಶ್ರೀ ಭುವನೇಂದ್ರ ಕಾಲೇಜು ಕಾರ್ಕಳ ಪಡೆಯಿತು. ಪುರುಷರ ಮತ್ತು ಮಹಿಳೆಯರ ವಿಭಾಗದಲ್ಲಿ ನಾಲ್ಕನೇ ಸ್ಥಾನವನ್ನು ಸೇಕ್ರೆಡ್ ಹಾರ್ಟ್ ಕಾಲೇಜು ಪಡೆಯಿತು. ಒಟ್ಟು ಒಂಭತ್ತು ಪುರುಷರ ಮತ್ತು ಎಂಟು ಮಹಿಳೆಯರ ತಂಡಗಳಿದ್ದ ಪಂದ್ಯಾಟ ಅತ್ಯಂತ ಯಶಸ್ವಿಯಾಗಿ ಸಂಪನ್ನಗೊಂಡಿತು.

Related posts

ಎ.29-30: ಲಾಯಿಲ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾಭವನಕ್ಕೆ ಹಾಗೂ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ಶ್ರೀ ದುರ್ಗಾದೇವಿ) ದೇವಸ್ಥಾನಕ್ಕೆ ಶ್ರೀಮಜ್ಜಗದ್ಗುರುಗಳಾದ ಶಂಕರಾಚಾರ್ಯ ಶ್ರೀ ಭಾರತೀತೀರ್ಥಮಹಾಸ್ವಾಮಿ ಹಾಗೂ ಶ್ರೀ ವಿಧುಶೇಖರಭಾರತೀ ಸ್ವಾಮೀಜಿ ಭೇಟಿ

Suddi Udaya

ಬೆಳ್ತಂಗಡಿ ವಿ.ಹಿಂ.ಪ ಬಜರಂಗದಳ ಪ್ರಖಂಡದ ವತಿಯಿಂದ ಬಕ್ರೀದ್ ಹಬ್ಬದ ಸಂದರ್ಭ ಗೋ ಹತ್ಯೆಯನ್ನು ಖಂಡಿಸಿ ಪೋಲಿಸ್ ಠಾಣೆ ಮತ್ತು ಗೋ ಆಸ್ಪತ್ರೆಯ ಅಧಿಕಾರಿಗಳಿಗೆ ಮನವಿ

Suddi Udaya

ಬೆಳ್ತಂಗಡಿ ನಗರದಲ್ಲಿ ರೂ.40 ಲಕ್ಷ ವೆಚ್ಚದ ಹಿಂದೂ ರುದ್ರಭೂಮಿ ಲೋಕಾರ್ಪಣೆ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ವಾರ್ಷಿಕ ಸಾಂಸ್ಕೃತಿಕ ದಿನಾಚರಣೆ

Suddi Udaya

ಧರ್ಮಸ್ಥಳ: ನೇರ್ತನೆ ಪ್ರದೇಶದಲ್ಲಿ ಕಾಡಾನೆ ದಾಳಿ

Suddi Udaya

ಉಜಿರೆ: ಕುಂಜರ್ಪದಲ್ಲಿ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya
error: Content is protected !!