September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಉಜಿರೆ: ಗಾಂಧಿನಗರದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಜನ್ಮದಿನಾಚರಣೆ

ಉಜಿರೆ: ಸಂವಿಧಾನ ಶಿಲ್ಪಿ ಡಾ‌.ಬಿ.ಆರ್ ಅಂಬೇಡ್ಕರ್ ಅವರ ಚಿಂತನೆಗಳನ್ನು ನಾವು ಅಳವಡಿಸಿಕೊಂಡಾಗ ನಮ್ಮ ಜೀವನ ಪರಿಪೂರ್ಣಗೊಳ್ಳುತ್ತದೆ ಎಂದು ಬೆಳ್ತಂಗಡಿ ಉಪ ವಿಭಾಗದ ಪೋಲಿಸ್ ಉಪ ಅಧೀಕ್ಷಕಿ ರೋಹಿಣಿ ಸಿ‌‌.ಕೆ ಹೇಳಿದರು. ಅವರು ಉಜಿರೆ ಗ್ರಾಮದ ಗಾಂಧಿನಗರದಲ್ಲಿ ನಡೆದ ಡಾ.ಬಿ.ಆರ್ ಅಂಬೇಡ್ಕರ್ ರವರ 135 ನೇ ಜನ್ಮದಿನಾಚರಣೆಯನ್ನು ದೀಪ ಬೆಳಗಿಸಿ, ಉದ್ಘಾಟಿಸಿ ಮಾತನಾಡಿದರು.

ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದ ಭಾರತೀಯರು ಸಹಬಾಳ್ವೆಯ ಜೀವನ ನಡೆಸುತ್ತಿದ್ದೇವೆ. ಅಂಬೇಡ್ಕರ್ ರವರು ಒಂದು ಜಾತಿ, ಧರ್ಮಕ್ಕೆ ಸೀಮಿತವಾಗಿಲ್ಲ, ಬದಲಾಗಿ ವಿಶ್ವಮಾನವರಾಗಿದ್ದಾರೆ. ಸಂವಿಧಾನ ನಮಗೆ ನೀಡಿರುವ ಹಕ್ಕುಗಳನ್ನು ತಿಳಿದುಕೊಂಡು ಬದುಕಬೇಕು ಎಂದು ಕರೆ ನೀಡಿದರು.

ಮುಖ್ಯ ಅಥಿತಿಯಾಗಿ ಭಾಗವಹಿಸಿದ ಸಾಮಾಜಿಕ ಹೋರಾಟಗಾರ ಶೇಖರ್ ಲಾಯಿಲ ಮಾತನಾಡಿ ಜಗತ್ತಿನೆಲ್ಲೆಡೆ ಜನ್ಮದಿನಾಚರಣೆ ಆಚರಿಸಿಕೊಳ್ಳುವ ಏಕೈಕ ವ್ಯಕ್ತಿ ಡಾ.ಬಿ.ಆರ್ ಅಂಬೇಡ್ಕರ್ ಮಾತ್ರ. ಅಂತಹ ಮಹಾನ್ ಚೇತನವನ್ನು ನಾವು ಕೇವಲ ಒಂದು ದಿನಕ್ಕೆ ಸೀಮಿತಗೊಳಿಸುವ ಬದಲಾಗಿ ದಿನನಿತ್ಯ ಅವರನ್ನು ಅನುಸರಿಸುವ ಅಗತ್ಯವಿದೆ ಎಂದ ಶಿಕ್ಷಣ, ಸಂಘಟನೆ, ಹೋರಾಟ ಎಂಬ ಘೋಷಣೆಯನ್ನು ಕೇವಲ ಘೋಷಣೆಯಾಗಿ ನೋಡದೆ ಅದನ್ನು ಅಳವಡಿಸಿಕೊಳ್ಳುವ ತುರ್ತು ಅಗತ್ಯವಿದೆ. ಸಂವಿಧಾನದ ಪೀಠಿಕೆಯಲ್ಲಿರುವಂತೆ ಸರ್ವಧರ್ಮ ಸಮನ್ವಯತೆಯನ್ನು ಸಾಧಿಸುವ ಮೂಲಕ ಸಾಮರಸ್ಯದ ಸಮಾಜದ ನಿರ್ಮಾಣಕ್ಕೆ ನಾವೆಲ್ಲರೂ ಕಟಿಬದ್ಧರಾಗಬೇಕಾಗಿದೆ ಎಂದರು.

ಸಭೆಯನ್ನು ಉದ್ದೇಶಿಸಿ ಉಜಿರೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಶ್ರೀನಿವಾಸ್ ಕೆ ಮಾತನಾಡುತ್ತಾ ಅಂಬೇಡ್ಕರ್ ಅವರ ದಲಿತ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ಅಪಾರ ಕೊಡುಗೆಯನ್ನು ನೆನಪಿಸಿದರು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಯುವ ಉದ್ಯಮಿ ಇರ್ಫಾನ್ ಗಾಂಧಿನಗರ, ಖಲೀಫಾ ಜುಮ್ಮಾ ಮಸೀದಿ ಗಾಂಧಿನಗರ ಉರು ಅಧ್ಯಕ್ಷರಾದ ಅಕ್ಬರ್ ಮತ್ತು ಊರಿನ ಎಲ್ಲಾ ಹಿರಿಯ ನಾಗರಿಕರು ಉಪಸ್ಥಿತರಿದ್ದರು ವಿನಯ್ ಕುಮಾರ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ಧನ್ಯವಾದವಿತ್ತರು.

Related posts

ಬಳ್ಳಾಲರಾಯನ ದುರ್ಗಕ್ಕೆ ಚಾರಣಕ್ಕೆ ಬಂದು ನಾಪತ್ತೆಯಾಗಿದ್ದ ಯುವಕ ಕಾಡಿನಲ್ಲಿ ಪತ್ತೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧಕ ದೀಪಕ್ ಎ.ಎಸ್. ಲೋಕಸಭಾ ಸಂಸದ ಬ್ರಿಜೇಶ್ ಚೌಟರ ಭೇಟಿ

Suddi Udaya

ಪಣಕಜೆ ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಅಶಕ್ತ ಕುಟುಂಬಗಳಿಗೆ ಧನ ಸಹಾಯ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಪ್ರಥಮ ಚಿಕಿತ್ಸೆ ಹಾಗೂ ಹೃದಯ-ಶ್ವಾಸ ಪುನಶ್ಚೇತನ ಕುರಿತು ಮಾಹಿತಿ, ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ಜ.13-14: ರೆಖ್ಯ ಗುಡ್ರಾದಿ ಶ್ರೀ ಗುಡ್ರಾಮಲ್ಲೇಶ್ವರ ದೇವಸ್ಥಾನದ ವರ್ಷಾವಧಿ ಉತ್ಸವ

Suddi Udaya
error: Content is protected !!