September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ವಾರ್ಷಿಕ ಶಿಬಿರ ಉದ್ಘಾಟನೆ

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್, ಕಬ್ ಮತ್ತು ಬುಲ್-ಬುಲ್ ಘಟಕಗಳ 2025-26ನೇ ಸಾಲಿನ ವಾರ್ಷಿಕ ಶಿಬಿರಕ್ಕೆ ಎ.15ರಂದು ಚಾಲನೆ ನೀಡಲಾಯಿತು.

ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆಯ ರಾಜ್ಯ ಸಹಾಯಕ ಸಂಘಟನಾ ಆಯುಕ್ತ ಭರತ್ ರಾಜ್ ಕೆ. ಶಿಬಿರವನ್ನು ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿ ಜೀವನದಲ್ಲಿ ಶಿಸ್ತು, ಸೇವಾ ಮನೋಭಾವ ಮತ್ತು ನಾಯಕತ್ವ ಗುಣಗಳನ್ನು ಬೆಳೆಸುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ಆಶಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಾಣಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಪಿ. ಕುಶಾಲಪ್ಪ ಗೌಡ ವಹಿಸಿ ಮಾತನಾಡಿ ಸಂಸ್ಥೆಯು ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ಇಂತಹ ಶಿಬಿರಗಳಿಗೆ ಸದಾ ಪ್ರೋತ್ಸಾಹ ನೀಡಲಿದೆ ಎಂದು ನುಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಾಣಿ ಶಿಕ್ಷಣ ಸಂಸ್ಥೆಗಳ ಜೊತೆ ಕಾರ್ಯದರ್ಶಿ ಕೆ. ಎಂ ಶ್ರೀನಾಥ್, ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಪ್ರಮೀಳಾ, ಸಂಸ್ಥೆಯ ಆಡಳಿತಾಧಿಕಾರಿ ಪ್ರಸಾದ್ ಕುಮಾರ್, ಪ್ರೌಢಶಾಲಾ ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಕೆ. ಹಾಗೂ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಸುಹಾಸಿನಿ ಎ. ಉಪಸ್ಥಿತರಿದ್ದರು.

ಶಾಲಾ ಸಹಶಿಕ್ಷಕಿ ಗೈಡ್ ಕ್ಯಾಪ್ಟನ್ ಸುಮಲತಾ. ಎ ಸ್ವಾಗತಿಸಿ, ವಂದಿಸಿದರು. ಗೈಡ್ ವಿದ್ಯಾರ್ಥಿನಿ ಅಂಜನಾ. ಕೆ ಮತ್ತು ಸ್ಕೌಟ್ ವಿದ್ಯಾರ್ಥಿ ನಿಶಾನ್ ಸಾಲಿಯಾನ್ ಕಾರ್ಯಕ್ರಮ ನಿರೂಪಿಸಿದರು.

Related posts

ಕಳೆಂಜ: ರಸ್ತೆಗೆ ಅಡ್ಡಲಾಗಿ ಬಿದ್ದ ವಿದ್ಯುತ್ ಕಂಬ ಹಾಗೂ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಗ್ರಾಮಸ್ಥರಿಂದ ತೆರವು ಕಾರ್ಯ

Suddi Udaya

ಬೆಳ್ತಂಗಡಿ ತಾಲೂಕು ಕುಣಿತ ಭಜನಾ ತರಬೇತಿಗಾರರ ಸಂಘದ ಅಧ್ಯಕ್ಷರಾಗಿ ಸಂದೇಶ್, ಕಾರ್ಯದರ್ಶಿಯಾಗಿ ವಿ ಹರೀಶ್, ಸಂಘಟನಾ ಕಾರ್ಯದರ್ಶಿಯಾಗಿ ನಾಗೇಶ್ ಆಯ್ಕೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಧರ್ಮಗುರುಗಳಾದ ಫಾ. ಜೇಮ್ಸ್ ಪಟ್ಟೇರಿಲ್ ಆಯ್ಕೆ

Suddi Udaya

ಪ್ರಕೃತಿಯ ವಿಸ್ಮಯ: ತೊತಪುರಿ ಮಾವಿನ ಕಾಯಿಯಂತೆ ಕಂಡು ಬಂದ ಪಪ್ಪಾಯಿ ಹಣ್ಣು

Suddi Udaya

ಗಸ್ತಿನಲ್ಲಿದ್ದ ಉರ್ವಾ ಠಾಣಾ ಪೊಲೀಸ್ ಕಾನ್‌ಸ್ಟೇಬಲ್ ಮೇಲೆ ಬೈಕ್ ಸಹಸವಾರನಿಂದ ಹಲ್ಲೆ

Suddi Udaya

ಕಾರ್ಯಕ್ರಮ ನಿರೂಪಕ ಅರುಣ್ ಗರ್ಡಾಡಿ ಅಸೌಖ್ಯದಿಂದ ನಿಧನ

Suddi Udaya
error: Content is protected !!