September 6, 2026
ಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಎಲ್ ಸಿ ಆರ್ ಇಂಡಿಯನ್ ಪದವಿ ವಿಭಾಗದ ವಿದ್ಯಾರ್ಥಿಗಳಿಂದ ಜಿಲ್ಲಾ ನ್ಯಾಯಾಲಯಕ್ಕೆ ಭೇಟಿ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಶನ್‌ ಟ್ರಸ್ಟ್ ನಡೆಸುತ್ತಿರುವ ಎಲ್.ಸಿ.ಆರ್. ಇಂಡಿಯನ್ ಪದವಿ ಕಾಲೇಜು ಇದರ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ ತಂಡವು ಜಿಲ್ಲಾ ನ್ಯಾಯಾಲಯ ದಕ್ಷಿಣ ಕನ್ನಡ, ಮಂಗಳೂರು ಗೆ ಶೈಕ್ಷಣಿಕ ಭೇಟಿಯನ್ನು ಎ.16ರಂದು ಆಯೋಜಿಸಿತು.

ಈ ಭೇಟಿಯ ಮುಖ್ಯ ಉದ್ದೇಶ ವಿದ್ಯಾರ್ಥಿಗಳಿಗೆ ನ್ಯಾಯಾಲಯದ ಕಾರ್ಯವಿಧಾನ, ಕಾನೂನು ಪ್ರಕ್ರಿಯೆ ಹಾಗೂ ನ್ಯಾಯನಿರ್ವಹಣೆಯ ಬಗ್ಗೆ ನೇರ ಅನುಭವ ನೀಡುವುದು. ಭೇಟಿಯ ಸಮಯದಲ್ಲಿ ವಿದ್ಯಾರ್ಥಿಗಳು ನ್ಯಾಯಾಲಯದ ವಿವಿಧ ವಿಭಾಗಗಳನ್ನು ವೀಕ್ಷಿಸಿದರು. ನ್ಯಾಯಾಧೀಶರ ನ್ಯಾಯನಿರ್ವಹಣೆ, ವಕೀಲರ ವಾದ-ಪ್ರತಿವಾದ, ಪ್ರಕರಣಗಳ ವಿಚಾರಣೆ ಮುಂತಾದ ಪ್ರಕ್ರಿಯೆಗಳನ್ನು ಗಮನಿಸಿದರು. ಇದರಿಂದ ವಿದ್ಯಾರ್ಥಿಗಳಿಗೆ ನ್ಯಾಯಾಂಗ ವ್ಯವಸ್ಥೆಯ ಬಗ್ಗೆ ಉತ್ತಮ ತಿಳುವಳಿಕೆ ದೊರೆಯಿತು.

ಈ ಶೈಕ್ಷಣಿಕ ಭೇಟಿ ವಿದ್ಯಾರ್ಥಿಗಳಲ್ಲಿ ಕಾನೂನು ಜ್ಞಾನ, ಸಾಮಾಜಿಕ ಜವಾಬ್ದಾರಿ ಹಾಗೂ ನ್ಯಾಯದ ಮಹತ್ವದ ಬಗ್ಗೆ ಅರಿವು ಮೂಡಿಸಿತು. ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಪ್ರಾಯೋಗಿಕ ಜ್ಞಾನವನ್ನು ಹೆಚ್ಚಿಸಲು ಸಹಾಯಕವಾಗಿವೆ.
ಈ ಶೈಕ್ಷಣಿಕ ಅಧ್ಯಯನದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಜೋಸ್ಟನ್ ಲೋಬೋ, ಸಂಸ್ಥೆಯ ಸಂಯೋಜಕರಾದ ಯಶವಂತ ಜಿ ನಾಯಕ್ ಹಾಗೂ ವಿಭಾಗದ ಮುಖ್ಯಸ್ಥರಾದ ದೀಕ್ಷಿತಾ ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ.ಪೂ. ಕಾಲೇಜಿನ ವಾರ್ಷಿಕೋತ್ಸವ ‘ಆರೋಹಣಮ್

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ – ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಜೂ.24: ಜನಸಂಪರ್ಕ ಸಭೆ

Suddi Udaya

ರುಪ್ಸಾ ನೀಡುವ ತಾಲೂಕು ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಎಸ್. ಡಿ. ಎಂ. ಆಂಗ್ಲ ಮಾಧ್ಯಮ ಶಾಲೆಯ ಸಹಶಿಕ್ಷಕಿ ರೇಷ್ಮಾ ಕೆ.ಎಸ್ ಆಯ್ಕೆ

Suddi Udaya

ಕಲ್ಮಂಜ: ಆಟೋ ಚಾಲಕ ಪ್ರಮೋದ್ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!