25.8 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಚಾರಣಕ್ಕೆ ಮೊಬೈಲ್ ಆ್ಯಪ್, ಗೈಡ್ ಕಡ್ಡಾಯ-ಚಾರಣಿಗರ ಸುರಕ್ಷತೆಗೆ ಮಾರ್ಗದರ್ಶಿ ಬಿಡುಗಡೆ

ಬೆಳ್ತಂಗಡಿ: ರಾಜ್ಯದಲ್ಲಿ ಅರಣ್ಯ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲ ಅನುಮೋದಿತ ಚಾರಣ ಪಥಗಳಲ್ಲಿ ಇನ್ನು ಮುಂದೆ ಪ್ರಕೃತಿ ಮಾರ್ಗದರ್ಶಕ (ನೇಚರ್ ಗೈಡ್) ಇಲ್ಲದೆ ಚಾರಣಕ್ಕೆ ಅವಕಾಶ ಇರುವುದಿಲ್ಲಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.

ಚಾರಣಿಗರ ಸುರಕ್ಷೆಗಾಗಿ ರೂಪಿಸಲಾಗಿರುವ ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್ ಒಪಿ) ಬಿಡುಗಡೆಗೊಳಿಸಿದ್ದಾರೆ. ಪ್ರತಿ 10 ಚಾರಣಿಗರಿಗೆ ಒಬ್ಬರು ಸ್ಥಳೀಯ ಪ್ರಕೃತಿ ಮಾರ್ಗದರ್ಶಕರು, ಆನ್ ಲೈನ್‌ನಲ್ಲಿ ನೋಂದಣಿ ಕಡ್ಡಾಯ.

ಪ್ರತಿ ಚಾರಣಿಗರ ಮೊಬೈಲ್‌ಗೆ ಚಾರಣಪಥದ ನಕ್ಷೆ ಸಹಿತ ಆ್ಯಪ್ ಅಳವಡಿಸಲಾಗುವುದು. ಅಪ್ರಾಪ್ತ ವಯಸ್ಕರು ಚಾರಣಕ್ಕೆ ತೆರಳಲು ಪೋಷಕರ ಅನುಮತಿ ಪತ್ರ ಕಡ್ಡಾಯ. ಫ್ಲಾಶ್ ಬಳಸಿ ಫೋಟೋ ತೆಗೆಯುವುದು, ಏಕ ಬಳಕೆ ಪ್ಲಾಸ್ಟಿಕ್ ಬ್ಯಾಗ್ ಬಳಸುವಂತಿಲ್ಲ. ಮುಂಗಡ ಟಿಕೆಟ್ ಕಾದಿರಿಸಲು ಅವಕಾಶ ಆಗುವಂತೆ ಎಲ್ಲ ಚಾರಣ ಪಥಗಳನ್ನೂ https://aranyavihaara.karnataka. gov.in/ ಅಂತರ್ಜಾಲ ತಾಣದಲ್ಲಿ ಸೇರಿಸುವಂತೆ ಸೂಚಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.

Related posts

ದ.ಕ. ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸರಳಿಕಟ್ಟೆ: ಗುಡ್ಡ ಕುಸಿದು ರಸ್ತೆ ಸಂಚಾರ ಸಂಪೂರ್ಣ ಬಂದ್: ಅಜಿಲಮೊಗರು – ಸರಳಿಕಟ್ಟೆ- ಉಪ್ಪಿನಂಗಡಿ ಸಂಪರ್ಕ ಕಡಿತ

Suddi Udaya

ಧರ್ಮಸ್ಥಳ ಶಾಂತಿವನ ಟ್ರಸ್ಟ್‌ನ ವತಿಯಿಂದ ಸುಪ್ರಿಯಾ ಹರ್ಷೇಂದ್ರ ಕುಮಾರ್ ಅವರಿಗೆ ಸನ್ಮಾನ

Suddi Udaya

ಮಡಂತ್ಯಾರು: ಜೆಸಿಐ ಭಾರತದ ವಲಯ 15ರ ವಲಯ ಕಾರ್ಯಕ್ರಮ ವಿಭಾಗದ ನಿರ್ದೇಶಕರಾಗಿ ಜೇಸಿ ಭರತ್ ಶೆಟ್ಟಿ ಆಯ್ಕೆ

Suddi Udaya

ಭಾರತ್ ಬ್ಯಾಂಕಿಗೆ 48 ವರ್ಷಗಳ ಸಂಭ್ರಮ: ಬೆಳ್ತಂಗಡಿ ಶಾಖೆಯಲ್ಲಿ ಆಚರಣೆ

Suddi Udaya

ಗಂಡಿಬಾಗಿಲು: ಸಿಯೋನ್ ಆಶ್ರಮದಲ್ಲಿ ಓಣಂ ಹಬ್ಬ ಆಚರಣೆ

Suddi Udaya
error: Content is protected !!