September 18, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿಸಂಘ-ಸಂಸ್ಥೆಗಳು

ಅಪ್ರಾಪ್ತ ಬಾಲಕಿ ಮೇಲೆ ಇಬ್ಬರು ಯುವಕರಿಂದ ಅತ್ಯಾಚಾರ:ಆರೋಪಿಗಳನ್ನು ಬಂಧಿಸಿದ ಪೊಲೀಸರು

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಇಬ್ಬರು ಯುವಕರು ಅತ್ಯಾಚಾರ ಮಾಡಿದ ಪ್ರಕರಣ ಸಂಬಂಧ ಇಬ್ಬರು ಯುವಕರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ 15 ವರ್ಷದ ಅಪ್ರಾಪ್ತ ಬಾಲಕಿಯನ್ನು ಇಬ್ಬರು ಯುವಕರು ಪುಸಲಾಯಿಸಿ ಎರ್ಮಾಯಿ ಫಾಲ್ಸ್ ಬಳಿಯ ಕಾಡಿಗೆ ಏ.16 ರಂದು ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿರುವ ಬಗ್ಗೆ ಮನೆಯವರಿಗೆ ಬಾಲಕಿ ತಿಳಿಸಿದ್ದು ಅದರಂತೆ ಪೋಷಕರು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಏ.17 ರಂದು ದೂರು ನೀಡಿದ್ದು ಅದರಂತೆ ಪೊಲೀಸರು ಪೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿನಿ.ಸಿ.ಕೆ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ.ಬಿ.ಎಸ್ ನೇತೃತ್ವದ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಸಮರ್ಥ ಆರ್ ಗಾಣಿಗೇರ ತಂಡ ಪ್ರಕರಣದಲ್ಲಿ ಭಾಗಿಯಾದ ಬೆಳ್ತಂಗಡಿ ತಾಲೂಕಿನ ಕಡುರುದ್ಯಾವರ ಗ್ರಾಮದ ಸುಮಂತ್(28) ಮತ್ತು ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ನವನೀತ್(26) ನನ್ನು ಏ.18 ರಂದು ಸಂಜೆ ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

ನವ ವರ ಅಂದರ್: ಈ ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾದ ಓರ್ವ ಆರೋಪಿ ಕಡುರುದ್ಯಾವರ ಗ್ರಾಮದ ಸುಮಂತ್ ಗೆ ಮೇ.10 ರಂದು ಮದುವೆ ಕಾರ್ಯಕ್ರಮ ನಿಗದಿಯಾಗಿತ್ತು.

Related posts

ಸುಲ್ಕೇರಿ: ಶ್ರೀ ನೇಮಿನಾಥಸ್ವಾಮಿ ಸಭಾಭವನ ಉದ್ಘಾಟನೆ

Suddi Udaya

ವೇಣೂರು ಎಸ್.ಡಿ.ಎಂ ಐಟಿಐ ಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಉಮೇಶ್ ಕೆ. ರವರಿಗೆ ಬೀಳ್ಕೊಡುಗೆ

Suddi Udaya

ಮಾ.31: ಲಾಯಿಲ ಪಿಲಿಪಂಜರ ಕ್ಷೇತ್ರದಲ್ಲಿ ದೈವಗಳ ಪ್ರತಿಷ್ಠಾ ಮಹೋತ್ಸವ ಹಾಗೂ ದೈವಗಳ ನೇಮೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗುರವಾಯನಕೆರೆ: ವಿದ್ವತ್ ಕಾಲೇಜಿನಲ್ಲಿ ಆಂಗ್ಲ ಭಾಷೆ ಉಪನ್ಯಾಸಕರ ಕಾರ್ಯಾಗಾರ

Suddi Udaya

ಉಜಿರೆ: ಸುರ್ಯ ರಸ್ತೆಯ ಪಡುವೆಟ್ಟು ಜನವಸತಿ ಪ್ರದೇಶಕ್ಕೆ ‘ಕೃಷ್ಣನಗರ’ ನಾಮಫಲಕ ಅನಾವರಣ

Suddi Udaya

ಬೆಳ್ತಂಗಡಿ : ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ‘ಅಭಿನಂದನಂ’ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya
error: Content is protected !!