September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ತಾಲೂಕು ಜನಜಾಗೃತಿ ವೇದಿಕೆ ಸಭೆ: ನೂತನ ಅಧ್ಯಕ್ಷರಾಗಿ ಗಿರೀಶ್ ಕೆ.ಎಸ್ ವೇಣೂರು ಆಯ್ಕೆ

ಬೆಳ್ತಂಗಡಿ: ತಾಲೂಕು ಜನಜಾಗೃತಿ ವೇದಿಕೆಯ ಸರ್ವ ಸದಸ್ಯರ ವಿಶೇಷ ಸಭೆಯು ಎಸ್.ಡಿ.ಎಂ ಕಲಾಭವನದ ಪಿನಾಕಿ ಸಭಾಂಗಣದಲ್ಲಿ ಏ.21 ರಂದು ಜರುಗಿತು. ಸಭಾಧ್ಯಕ್ಷತೆಯನ್ನು ತಾ. ಸಮಿತಿ ಅಧ್ಯಕ್ಷ ಎಂ.ಎ ಕಾಸಿಂ ಮಲ್ಲಿಗೆಮನೆ ವಹಿಸಿದ್ದರು.

ವ್ಯಸನಮುಕ್ತ ಸಮಾಜ‌ ನಿರ್ಮಾಣದ ಸವಾಲಿನ ಸಂಕಲ್ಪದೊಂದಿಗೆ ಮುನ್ನಡೆಯುತ್ತಿರುವ ವೇದಿಕೆಯ ಕಾರ್ಯಕ್ರಮಗಳಿಗೆ ಶಕ್ತಿ ತುಂಬುವ ಉದ್ದೇಶದೊಂದಿಗೆ ವರದಿ ಸಾಲಿನಲ್ಲಿ ತಾಲೂಕಿನ ಗರ್ಡಾಡಿಯಲ್ಲಿ ಮದ್ಯವರ್ಜನ‌ ಶಿಬಿರ ಆಯೋಜಿಸುವ ಬಗ್ಗೆ ನಿರ್ಧರಿಸಲಾಯಿತು. ಇದೇ ವೇಳೆ ವಿದ್ಯಾರ್ಥಿ ಮತ್ತು ಯುವ ಸಮೂಹವನ್ನು ಗುರಿಯಾಗಿಸಿ ತಾಲೂಕಿನ ವಿವಿಧ ಶಾಲಾ ಕಾಲೇಜುಗಳಲ್ಲಿ ಒಟ್ಟು 40 ಕಡೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಗಳನ್ನು ಸಂಯೋಜಿಸುವುದೆಂದು ತೀರ್ಮಾನಿಸಲಾಯಿತು. ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ, ವಿಶ್ವ ತಂಬಾಕು ವಿರೋಧಿ ದಿನಾಚರಣೆ ಯನ್ನೂ ನಡೆಸಲು ನಿರ್ಧರಿಸಲಾಯಿತು.

ವಲಯಕ್ಕೊಂದು ನವಜೀವನ‌ ಸಮಿತಿ ರಚನೆಯ ಗುರಿ, ನವಜೀವಮೋತ್ಸವ ಕಾರ್ಯಕ್ರಮ, ಅಕ್ಟೋಬರ್ 2 ಗಾಂಧಿ ಜಯಂತಿ ಆಚರಣೆ ಸೇರಿದಂತೆ ಜನಜಾಗೃತಿ ವೇದಿಕೆಯ ವಾರ್ಷಿಕ ಕ್ರಿಯಾಯೋಜನೆಯ ಅನುಷ್ಠಾನದ ಕುರಿತು‌ ಚರ್ಚಿಸಿ ನಿರ್ಧಾರಗಳನ್ನು ಕೈಗೊಳ್ಳಲಾಯಿತು.

ಜಿಲ್ಲಾಧ್ಯಕ್ಷ ಪದ್ಮನಾಭ ಶೆಟ್ಟಿ, ಜಿಲ್ಲಾ ನಿರ್ದೇಶಕ ದಿನೇಶ್ ಡಿ ಶುಭ ಹಾರೈಸಿದರು.

ಜನಜಾಗೃತಿ ವೇದಿಕೆಯ ಪೂರ್ವಾಧ್ಯಕ್ಷರುಗಳಾದ ಡಿ.ಎ ರಹಿಮಾನ್, ಕಿಶೋರ್ ಹೆಗ್ಡೆ, ಪಿ.ಕೆ ರಾಜು ಪೂಜಾರಿ, ಜನಜಾಗೃತಿ ಆಡಳಿತ ಯೋಜನಾಧಿಕಾರಿ ಮಾಧವ ಗೌಡ, ಎಲ್ಲಾ ವಲಯಗಳ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಕಾರ್ಯದರ್ಶಿ ವಿವೇಕ್ ವಿನ್ಸೆಂಟ್ ಪಾಯಸ್ ಕ್ರಿಯಾಯೋಜನೆ ಮಂಡಿಸಿ ಸಭೆಯ ಸಂಯೋಜನೆ ಮಾಡಿದರು. ಇದೇ ವೇಳೆ ಮುಂದಿನ ಎರಡು ವರ್ಷಗಳ ಅವಧಿಗೆ ನೂತ‌ನ ಅಧ್ಯಕ್ಷರಾಗಿ ಗಿರೀಶ್ ಕೆ.ಎಸ್ ವೇಣೂರು ಅವರನ್ನು ಆಯ್ಕೆ ಮಾಡಲಾಯಿತು. ಇದುವರೆಗೆ ತಾಲೂಕು ಅಧ್ಯಕ್ಷರಾಗಿ ಯಶಸ್ವಿಯಾಗಿ ಜವಾಬ್ಧಾರಿ ನಿರ್ವಹಿಸಿದ ಕಾಸಿಂ ಮಲ್ಲಿಗೆಮನೆ ಅವರನ್ನು ಸನ್ಮಾನಿಸಲಾಯಿತು.

ಬೆಳ್ತಂಗಡಿ ಯೋಜನಾಧಿಕಾರಿ ಯಶೋಧರ ಕೆ ಸ್ವಾಗತಿಸಿದರು. ಜನಜಾಗೃತಿ ಕರಾವಳಿ ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿ ಗಣೇಶ್ ಆಚಾರ್ಯ ನಿರೂಪಿಸಿ ವಂದಿಸಿದರು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ತಾಲೂಕು ಸಂಘಟನಾ ಅಧ್ಯಕ್ಷರಾಗಿ ಗಿರೀಶ್ ಕೆ.ಎಸ್ ವೇಣೂರು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜನಜಾಗೃತಿ ವೇದಿಕೆಯ ಆರಂಭಿಕ ಕಾಲಘಟ್ಟದಿಂದಲೇ ಸದಸ್ಯರಾಗಿ ಸೇವೆ ಸಲ್ಲಿಸಿರುವ ಹಿರಿಯ ಅನುಭವಿ ಕಾರ್ಯಕರ್ತರಾಗಿರುವ ಗಿರೀಶ್ ಅವರು ವೇಣೂರಿನಲ್ಲಿ ಸೀತಾ ಶ್ರೀರಾಮ ಪ್ರಿಂಟರ್ಸ್ ಸಂಸ್ಥೆಯನ್ನು ಮುನ್ನಡೆಸುತ್ತಿದ್ದಾರೆ. ಜನಜಾಗೃತಿ ವೇದಿಕೆಯ ವಲಯಾಧ್ಯಕ್ಷರಾಗಿ, ತಾಲೂಕು ಸಮಿತಿ ಸದಸ್ಯರಾಗಿ, ಕಳೆದ ಸಾಲಿನ ಕೋಶಾಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಜೊತೆಗೆ ಲಯನ್ಸ್ ಕ್ಲಬ್ ವೇಣೂರು ಇಲ್ಲಿ ಕಳೆದ 20 ವರ್ಷಗಳಿಂದ ಸೇವೆ,
ಯುವ ಸೇವಾ ಸಂಗಮ ಇದರ ಟ್ರಸ್ಟಿಯಾಗಿ, ಯೂತ್ ಕ್ಲಬ್ ವೇಣೂರು ಗೌರವಾಧ್ಯಕ್ಷರಾಗಿ, ಗಣೇಶೋತ್ಸವ ಸಮಿತಿಯ ವಿವಿಧ ಜವಾಬ್ಧಾರಿ ನಿರ್ವಾಹಕರಾಗಿ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವೇಣೂರು ಇದರ ಮೂರು ಅವಧಿಯ ಮಾಜಿ ಟ್ರಸ್ಟಿಯಾಗಿ, ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿ ಜೊತೆ ಕಾರ್ಯದರ್ಶಿ ಸೇರಿದಂತೆ ಸಾಮಾಜಿಕ ಮತ್ತು ಧಾರ್ಮಿಕವಾಗಿ ತನ್ನನ್ನು ತಾನು ತೊಡಗಿಸಿಕೊಂಡವರಾಗಿದ್ದಾರೆ. ಇವರ ಅಧಿಕೃತ ಪದಗ್ರಣ ಕಾರ್ಯಕ್ರಮ ಮುಂದಿನ ಗಾಂಧಿಜಯಂತಿ ಕಾರ್ಯಕ್ರಮದ ಜೊತೆಗೆ ನಡೆಯಲಿದೆ.

Related posts

ವಾಣಿ ಶಿಕ್ಷಣ ಸಂಸ್ಥೆಯ ಮುಂಭಾಗದಲ್ಲಿ ಅತಿ ಶೀಘ್ರದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲು ಇಂಜಿನಿಯರ್ ಗಳಿಗೆ ಜಯನಂದ ಗೌಡ ಮನವಿ

Suddi Udaya

ಪೆರುವಡಿ ನಾರಾಯಣ ಭಟ್ ನಿಧನಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ ಅಭಿನಂದನ್ ಹರೀಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಕಾರಿಣಿ ಸಭೆ

Suddi Udaya

ಬೆಳ್ತಂಗಡಿ: ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರುಗಳ ಆಯ್ಕೆ

Suddi Udaya

ಲಾಯಿಲ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜೆ

Suddi Udaya

ಗೇರುಕಟ್ಟೆ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಕೆಸರುಗದ್ದೆ ಕ್ರೀಡಾಕೂಟ: ಅಧ್ಯಕ್ಷರಾಗಿ ನವೀನ್ ಗೌಡ ಆಯ್ಕೆ

Suddi Udaya
error: Content is protected !!