26.5 C
ಪುತ್ತೂರು, ಬೆಳ್ತಂಗಡಿ
September 19, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಮಗನಿಂದ ತಂದೆಯ ಕೊಲೆ ಯತ್ನ ಆರೋಪಿ ಮಗನನ್ನು ಬಂಧಿಸಿದ ಪೊಲೀಸರು

ಬೆಳ್ತಂಗಡಿ : ಕುಡಿದ ಮತ್ತಿನಲ್ಲಿ ತಂದೆ ಮಗನ ನಡುವೆ ನಡೆದ ಗಲಾಟೆ ಕತ್ತಿಯಿಂದ ಕಡಿದು ಕೊಲೆ ಮಾಡುವವರೆಗೂ ಹೋಗಿದ್ದು. ಸದ್ಯ ತಂದೆ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು. ಮಗನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಮಣಿಕೆ ನಿವಾಸಿ ಗಾರೆಕೆಲಸ ಮಾಡುತ್ತಿರುವ ನಾರಾಯಣ(52) ಮತ್ತು ಟಿಂಬರ್ ಕೆಲಸ ಮಾಡುತ್ತಿದ್ದ ಮಗ ಭರತ್ (25) ಎಂಬಾತ ನಡುವೆ ಮನೆಯಲ್ಲಿರುವಾಗ ಏ.19 ರಂದು ರಾತ್ರಿ ಸುಮಾರು 7:30 ಕ್ಕೆ ಕುಡಿದ ಮತ್ತಿನಲ್ಲಿ ಇಬ್ಬರ ನಡುವೆ ಗಲಾಟೆ ನಡೆದಿದೆ. ಈ ನಡುವೆ ಮನೆಯ ಹೊರಭಾಗದಲ್ಲಿದ್ದ ತಂದೆಗೆ ಕತ್ತಿಯಿಂದ ಕುತ್ತಿಗೆ ಮತ್ತು ಕೈಗೆ ಕಡಿದಿದ್ದಾನೆ. ತಕ್ಷಣ ಹತ್ತಿರದ ಮನೆಯವರು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಏ.19 ರಂದು ಮಧ್ಯರಾತ್ರಿ ಕಲಂ 109,352,351(3) BNS ಅಡಿಯಲ್ಲಿ ಪ್ರಕರಣ ದಾಖಲಾಗಿದೆ.ಬೆಳ್ತಂಗಡಿ ಪ್ರಭಾರ ಸಬ್ ಇನ್ಸ್‌ಪೆಕ್ಟರ್ ಸಿಖಂದರ್ ಪಾಷ ನೇತೃತ್ವದ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿರುವಾಗ ಆರೋಪಿ ಮಗ ಭರತ್(25) ಎಂಬಾತನನ್ನು ಏ.20 ರಂದು ಬೆಳಗ್ಗೆ ಉಜಿರೆಯಲ್ಲಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿ ರಾತ್ರಿ ಬಂಟ್ವಾಳ ನ್ಯಾಯಾಧೀಶರ ಮನೆಗೆ ಹಾಜರುಪಡಿಸಿದ್ದು ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿನಿ.ಸಿ.ಕೆ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ.ಬಿ.ಎಸ್ ನೇತೃತ್ವದ ಬೆಳ್ತಂಗಡಿ ಪ್ರಭಾರ ಸಬ್ ಇನ್ಸ್‌ಪೆಕ್ಟರ್ ಸಿಖಂದರ್ ಪಾಷ ತಂಡದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Related posts

ಬೆಳ್ತಂಗಡಿ: ಹಳೆಕೋಟೆ ಬಳಿ ಓಮಿನಿ ಕಾರು ಹಾಗೂ ಬೈಕ್ ಮುಖಾಮುಖಿ ಡಿಕ್ಕಿ : ಬೈಕ್ ಸವಾರ ಗಂಭೀರ ಗಾಯ

Suddi Udaya

ವಿಶ್ವ ಹಿಂದೂ ಪರಿಷತ್ ಭಜರಂಗದಳ ಚಾರ್ಮಾಡಿ, ಘಟಕ ಶ್ರೀ ರಾಮ್ ಚಾರ್ಮಾಡಿ ಇದರ ಸಹಭಾಗಿತ್ವದಲ್ಲಿ ಹೊನಲು ಬೆಳಕಿನ ಹಿಂದೂ ಭಾಂಧವರ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಗೋಸಾಗಾಟ ವಿಷಯಕ್ಕೂ ನನಗೂ ಯಾವುದೇ ಸಂಬಂಧವಿಲ್ಲ : ಭಾಜಪಾ. ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ಸ್ಪಷ್ಟನೆ

Suddi Udaya

ಬೆಳ್ತಂಗಡಿ : ಎ.3 ರಂದು ಬಿ.ಎಸ್.ಪಿ ಯ ಅಭ್ಯರ್ಥಿ ಕಾಂತಪ್ಪ ಅಲಂಗಾರ್ ನಾಮಪತ್ರ ಸಲ್ಲಿಕೆ

Suddi Udaya

ಬಳ್ಳಮಂಜ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮೇಷ ಜಾತ್ರೆಗೆ ಚಾಲನೆ

Suddi Udaya

ಕೋಳಿ ತ್ಯಾಜ್ಯದಿಂದ ಅಶುದ್ಧಿಯಾಗುತ್ತಿರುವ ಶಿಶಿಲದ‌ ” ಕಪಿಲೆ”

Suddi Udaya
error: Content is protected !!