September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಉಡುಪಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಉಪಾಧ್ಯಕ್ಷರಾಗಿ ಕೆ‌ ಧರಣೇಂದ್ರ ಜೈನ್ ಆಯ್ಕೆ

ಬೆಳ್ತಂಗಡಿ: ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಉಡುಪಿ ಇದು 112 ವರ್ಷಗಳ ಇತಿಹಾಸವುಳ್ಳ ಪ್ರತಿಷ್ಠಿತ ಬ್ಯಾಂಕ್ ಆಗಿದ್ದು ಇದರ ಉಪಾಧ್ಯಕ್ಷರಾಗಿ ಕೆ ಧರಣೇಂದ್ರ ಜೈನ್ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಈಗಾಗಲೇ ರಾಜ್ಯದ 18 ಜಿಲ್ಲೆಗಳಲ್ಲಿ ಪ್ರಸ್ತುತ 16 ಶಾಖೆಗಳನ್ನು, 25000 ಕ್ಕಿಂತಲೂ ಹೆಚ್ಚು ಸದಸ್ಯರನ್ನು ಹೊಂದಿರುವ ಪ್ರತಿಷ್ಠಿತ ಬ್ಯಾಂಕ್, ರಾಷ್ಟ್ರ, ರಾಜ್ಯ ಹಾಗೂ ಜಿಲ್ಲಾ ಮಟ್ಟದ ಹಲವಾರು ಪ್ರಶಸ್ತಿಗಳನ್ನು ಪಡೆದಿರುವ ಬ್ಯಾಂಕ್ ಆಗಿರುತ್ತದೆ.

ಕರ್ನಾಟಕ ಪಬ್ಲಿಕ್ ಸ್ಕೂಲ್ ಪೂಂಜಾಲಕಟ್ಟೆಯ ಪ್ರೌಢಶಾಲಾ ವಿಭಾಗದ ಸಮಾಜ ವಿಜ್ಞಾನ ಶಿಕ್ಷಕರಾದ ಧರಣೇಂದ್ರ ಕೆ ಇವರು
ಅತ್ಯುತ್ತಮ ಕಾರ್ಯಕ್ರಮ ನಿರೂಪಕನಾಗಿ, ಅಸಾಮಾನ್ಯ ಸಂಘಟನಾಗಿ, ಜಿಲ್ಲೆ ಹಾಗೂ ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿಯಾಗಿ ಗುರುತಿಸಿಕೊಂಡವರು.

ಸಾಮಾಜಿಕ ಸೇವೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಸೈ ಎನಿಸಿಕೊಂಡವರು. ಮಡಂತ್ಯಾರು ಜೆಸಿಐನ ಅಧ್ಯಕ್ಷರಾಗಿ, ಅಂತರಾಷ್ಟ್ರೀಯ ಲಯನ್ ಸೇವಾ ಸಂಸ್ಥೆಯ ಬೆಳ್ತಂಗಡಿಯ ಅಧ್ಯಕ್ಷರಾಗಿ, ವಲಯಾಧ್ಯಕ್ಷ, ಪ್ರಾಂತ್ಯಾಧ್ಯಕ್ಷ, ಲಯನ್ಸ್ ಜಿಲ್ಲಾ ಸಂಪುಟದಲ್ಲಿ ವಿವಿಧ ಹುದ್ದೆಗಳಲ್ಲಿ ತೊಡಗಿಸಿಕೊಂಡು ಸಾಧಕರಾದವರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಮಡಂತ್ಯಾರ್ ಸಂಸ್ಥೆಯ ಜೊತೆ ಕಾರ್ಯದರ್ಶಿಯಾಗಿ, ಬೆಳ್ತಂಗಡಿ ತಾಲೂಕು ಸರಕಾರಿ ನೌಕರ ಸಂಘದ ಪದಾಧಿಕಾರಿಯಾಗಿ, ರಾಜ್ಯ ಪರಿಷತ್ತು ಸದಸ್ಯರಾಗಿ, ಬೆಳ್ತಂಗಡಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಹೀಗೆ ಹಲವಾರು ಸಂಸ್ಥೆಗಳಲ್ಲಿ ತೊಡಗಿಸಿಕೊಂಡು ಆ ಹುದ್ದೆಗೆ ನ್ಯಾಯವನ್ನು ಒದಗಿಸಿಕೊಟ್ಟು ಎಲ್ಲರ ಮೆಚ್ಚುಗೆಗೆ ಪಾತ್ರರಾದವರು.

Related posts

ಮೆಸ್ಕಾಂ ಬೆಳ್ತಂಗಡಿ ಉಪವಿಭಾಗದ ಸ.ಕಾ ಅಭಿಯಂತರ ಶಿವಶಂಕರ್ ಪುತ್ತೂರಿಗೆ ವರ್ಗಾವಣೆ

Suddi Udaya

ಸುಳ್ಳೋಡಿ ಶಾಲೆಯಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಮಹಿಳಾ ಗ್ರಾಮ ಸಭೆ

Suddi Udaya

ಅಜ್ಮೀರ್ ಖಾಜಾ ಸಂಸ್ಮರಣೆ; ಸರ್ವಧರ್ಮೀಯ ಐದು ಕುಟುಂಬಗಳಿಗೆ ಆಹಾರದ ಕಿಟ್ ವಿತರಣೆ

Suddi Udaya

ಬೆಳ್ತಂಗಡಿ ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಮಂತ್ರಿ ಮಂಡಲದ ಪ್ರತಿಜ್ಞಾ ಸ್ವೀಕಾರ – ಪ್ರತಿಭಾ ಪುರಸ್ಕಾರ

Suddi Udaya
error: Content is protected !!