30.1 C
ಪುತ್ತೂರು, ಬೆಳ್ತಂಗಡಿ
September 11, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಬೆದ್ರಬೆಟ್ಟು ಮರಿಯಾಂಬಿಕಾ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

ಬೆದ್ರಬೆಟ್ಟು: ಎಸ್‌ಎಸ್‌ಎಲ್‌ಸಿಯಲ್ಲಿ ಮರಿಯಾಂಬಿಕಾ ಆಂಗ್ಲ ಮಾಧ್ಯಮ ಶಾಲೆಗೆ ಸತತ ೭ನೇ ಬಾರಿ ಶೇ.೧೦೦ ಫಲಿತಾಂಶ ಲಭಿಸಿದೆ.

೨2025-26ನೇ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮರಿಯಾಂಬಿಕಾ ಆಂಗ್ಲ ಮಾಧ್ಯಮ ಶಾಲೆಯಿಂದ 15 ಹುಡುಗಿಯರು, 12 ಹುಡುಗರು, ಒಟ್ಟು 27 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ೨೭ ವಿದ್ಯಾರ್ಥಿಗಳಲ್ಲಿ 14 ವಿದ್ಯಾರ್ಥಿಗಳು ಉನ್ನತ ಶ್ರೇಣಿ, ಉಳಿದ13 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ 100 ಶೇಕಡ ಫಲಿತಾಂಶವನ್ನು ದಾಖಲಿಸಿದೆ

ಜಿ.ಕೆ ಶ್ರಾವ್ಯ-616 ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ತರುಣ್.ಎಸ್-609 ಅಂಕಗಳನ್ನು ಗಳಿಸಿ ಶಾಲೆಗೆ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಶಾನಿಹಾಝ್-602 ಅಂಕಗಳನ್ನು ಗಳಿಸಿ ಶಾಲೆಗೆ ತೃತೀಯ ಸ್ಥಾನವನ್ನುಗಳಿಸಿರುತ್ತಾರೆ. ಶೈಕ್ಷಣಿಕವಾಗಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಹಾಗೂ ಶಿಕ್ಷಕರನ್ನು ಶಾಲಾ ಸಂಚಾಲಕರಾದ ವಂದನೀಯ ಫಾ. ಸೆಬಾಸ್ಟಿನ್ ಹಾಗೂ ಶಾಲಾ ಪ್ರಾಂಶುಪಾಲರಾದ ವಂದನೀಯ ಫಾ. ಮ್ಯಾತ್ಯು ಹಾಗೂ ಶಾಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು, ಶಾಲಾ ಆಡಳಿತ ಮಂಡಳಿ, ವಿದ್ಯಾರ್ಥಿಗಳು ಹಾಗೂ ಪೋಷಕರು ಅಭಿನಂದಿಸಿರುತ್ತಾರೆ.

Related posts

ಬೆಳ್ತಂಗಡಿ ಎಸ್ ಡಿ ಎಮ್ ಶಾಲೆಯಲ್ಲಿ ಸ್ಕೌಟ್ಸ್ ಗೈಡ್ಸ್ ಗಳ ಬೇಸಿಗೆ ಶಿಬಿರ

Suddi Udaya

ಲೂಮೋಸ್ – ಟೆಸರಾಕ್ಟ್ ಫಿಲ್ಮ್ ಸೊಸೈಟಿ ವಾರ್ಷಿಕ ಸಮಾರೋಪ ; ನಮ್ಮ ಕಲ್ಪನೆಯೇ ನಮ್ಮ ಮಿತಿ: ಡಾ. ರಾಘವೇಂದ್ರ

Suddi Udaya

ಸಹಾಯಕ ಪ್ರಾಧ್ಯಾಪಕಿ ಗೀತಾ ಏ.ಜೆ ರವರಿಗೆ ಪಿಎಚ್ ಡಿ ಪದವಿ

Suddi Udaya

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ಪ್ರಾರಂಭೋತ್ಸವ, ಅದ್ಧೂರಿಯಾಗಿ ವಿದ್ಯಾರ್ಥಿಗಳಿಗೆ ಸ್ವಾಗತ

Suddi Udaya

ಉಜಿರೆ ಶ್ರೀ ಧ.ಮಂ.ವಸತಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ.

Suddi Udaya

ರಾಜ್ಯಮಟ್ಟದ ಜನಪದ ಗೀತಗಾಯನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಪಂಚಮಿಗೆ ದ್ವಿತೀಯ ಸ್ಥಾನ

Suddi Udaya
error: Content is protected !!