September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್ಸೆಸ್ಸೆಲ್ಸಿ ಫಲಿತಾಂಶ: ಹೋಲಿ ರಿಡೀಮರ್ ಶಾಲೆಗೆ ಸತತ 11ನೇ ಬಾರಿಗೆ ಶೇ.100 ಫಲಿತಾಂಶ

ಬೆಳ್ತಂಗಡಿ: 2025-26ನೇ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯು ಸತತ 11ನೇ ಬಾರಿಗೆ ಶೇ.100 ಫಲಿತಾಂಶವನ್ನು ದಾಖಲಿಸಿ, ಅಮೋಘ ಸಾಧನೆಯನ್ನು ಮಾಡಿದೆ.

ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಸುಧನ್ವ ಎ ಆರ್ 616 ಅಂಕಗಳನ್ನು ಗಳಿಸಿ ಶಾಲೆಗೆ ಕೀರ್ತಿಯನ್ನು ತಂದಿರುತ್ತಾರೆ. ಜಿತೇಶ್ ಎನ್ 604 ಅಂಕಗಳನ್ನು ಪಡೆದು ದ್ವಿತೀಯ ಸ್ಥಾನ ಹಾಗೂ ರಿಯೋನಾ ಮೋನಿಸ್ ಮತ್ತು ಪಿ ವಿ ಪೃಥ್ವಿ 601 ಅಂಕಗಳನ್ನು ಪಡೆದು ತೃತೀಯ ಸ್ಥಾನವನ್ನು ಗಳಿಸಿರುತ್ತಾರೆ.

ಒಟ್ಟು 46 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದು, 24 ವಿದ್ಯಾರ್ಥಿಗಳು ಉನ್ನತ ಶ್ರೇಣಿಯನ್ನು ಹಾಗೂ 22 ವಿದ್ಯಾರ್ಥಿಗಳು ಪ್ರಥಮ ದರ್ಜೆಯನ್ನು ಪಡೆದು ಉತ್ತಮ ಫಲಿತಾಂಶವನ್ನು ದಾಖಲಿಸಿರುತ್ತಾರೆ.

ವಿದ್ಯಾರ್ಥಿಗಳನ್ನು ಶಾಲಾ ಸಂಚಾಲಕ ಅತೀ ವಂ. ಗುರುಗಳು ವಾಲ್ಟರ್ ಡಿಮೆಲ್ಲೋ ಮತ್ತು ಶಾಲಾ ಮುಖ್ಯೋಪಾಧ್ಯಾಯ ವಂ. ಗುರು ಕ್ಲಿಫರ್ಡ್ ಪಿಂಟೋರವರು ಅಭಿನಂದಿಸಿದರು.

Related posts

ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಸುಧೀರ್ ಕೆ ಎನ್ ಆಯ್ಕೆ

Suddi Udaya

ಸೆ. 3: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕದ 16ನೇ ವರ್ಧಂತ್ಯುತ್ಸವ

Suddi Udaya

ಎ.30: ಲಾಯಿಲ 48ನೇ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಶಾಲಾ ಬೇಡಿಕೆಗೆ ರಕ್ಷಿತ್ ಶಿವರಾಂ ಸ್ಪಂದನೆ: ಕಲ್ಲೇರಿ ಶಾಲೆಯಲ್ಲಿ ನೂತನ ಶೌಚಾಯ ನಿರ್ಮಾಣ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ 2023-24ನೆಯ ಸಾಲಿನಲ್ಲಿ ದಾಖಲೆಯ ನೇರ ನೇಮಕಾತಿಯ ಮೂಲಕ ಉದ್ಯೋಗಾವಕಾಶ

Suddi Udaya

ಸುಲ್ಕೇರಿ ಲಯನ್ಸ್ ಕ್ಲಬ್‌ನ ನೂತನ ಪದಗ್ರಹಣ ಸಮಾರಂಭ

Suddi Udaya
error: Content is protected !!