September 17, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಮಂಜು ಶ್ರೀ ಸೀನಿಯ‌ರ್ ಚೇಂಬರ್‌ ಬೆಳ್ತಂಗಡಿ ಘಟಕ: ಅಧ್ಯಕ್ಷರಾಗಿ ಜಾನ್ ಅರ್ವಿನ್ ಡಿ’ಸೋಜ, ಕಾರ್ಯದರ್ಶಿಯಾಗಿ ಶರತ್

ಬೆಳ್ತಂಗಡಿ: ಅಂತಾರಾಷ್ಟ್ರೀಯ ಸೀನಿಯರ್ ಚೇಂಬರ್‌ನ ಮಂಜುಶ್ರೀ ಬೆಳ್ತಂಗಡಿ ಘಟಕದ ಅಧ್ಯಕ್ಷ ಮಂಜುನಾಥ ರೈ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಸಾಮಾನ್ಯ ಸಭೆಯಲ್ಲಿ 2026-27 ಸಾಲಿನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.

ಅಧ್ಯಕ್ಷರಾಗಿ ಸೀನಿಯರ್ ಪಿಪಿಎಫ್ ಜಾನ್ ಅರ್ವಿನ್ ಡಿ’ಸೋಜ, ಕಾರ್ಯದರ್ಶಿಯಾಗಿ ಶರತ್ ಕುಮಾ‌ರ್, ಕೋಶಾಧಿಕಾರಿಯಾಗಿ ಪದ್ಮಕುಮಾರ್, ಜತೆ ಕಾರ್ಯದರ್ಶಿಯಾಗಿ ಹರೀಶ್ ಶೆಟ್ಟಿ, ಉಪಾಧ್ಯಕ್ಷರಾಗಿ ಪುಷ್ಪರಾಜ ಶೆಟ್ಟಿ ಪಿ. ಮತ್ತು ವಿಲ್ಸನ್ ಗೊನ್ಸಾಲಿಸ್ ಅವಿರೋಧವಾಗಿ ಆಯ್ಕೆಯಾದರು.

ಪದಗ್ರಹಣ ಸಮಾರಂಭ: ಗುರುವಾಯನಕೆರೆ ಛಾಯಾ ಭವನದಲ್ಲಿ ಏ.28 ರಂದು ಸೀನಿಯರ್ ಪಿಪಿಎಫ್ ಮಂಜುನಾಥ ರೈ ಅಧ್ಯಕ್ಷತೆಯಲ್ಲಿ ಪದಗ್ರಹಣ ಸಮಾರಂಭ ಜರುಗಲಿದ್ದು ಅಂತಾರಾಷ್ಟ್ರೀಯ ಸೀನಿಯರ್ ಚೇಂಬರ್ ಉಪಾಧ್ಯಕ್ಷೆ ಪಿಪಿಎಫ್ ಅಕ್ಷತಾ ಆರ್. ನೂತನವಾಗಿ ಆಯ್ಕೆಯಾದ ಅಧ್ಯಕ್ಷರಿಗೆ ಮತ್ತು ಸದಸ್ಯರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ಸುವರ್ಣ ಪ್ರತಿಷ್ಠಾನ ಅಧ್ಯಕ್ಷ ಸಂಪತ್‌ ಬಿ.ಸುವರ್ಣ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ರಾಷ್ಟ್ರೀಯ ನಿರ್ದೇಶಕ ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ಸ್ಥಾಪಕಾಧ್ಯಕ್ಷ ಸೀನಿಯರ್ ಪಿಪಿಎಫ್ ಸಿಎಸ್ಎಲ್ ಪ್ರಮೋದ್ ಆರ್. ನಾಯಕ್ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.

Related posts

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ಬಿ.ಕಾಂ ವಿದ್ಯಾರ್ಥಿಗಳಿಗೆ “ಸಂದರ್ಶನ ಕೌಶಲ್ಯಗಳ ” ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ನೈತಿಕ ಪೊಲೀಸ್ ಗಿರಿ: ಸೂಕ್ತ ಕ್ರಮಕ್ಕೆ ಆಗ್ರಹಿಸಿ ಎಸ್‌ವೈಎಸ್ ಬೆಳ್ತಂಗಡಿ ಝೋನ್ ನಿಂದ ತಹಶೀಲ್ದಾರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಮತದಾನ ಆರಂಭ

Suddi Udaya

ಖಾಸಗಿ ವಿದ್ಯುತ್ ಉತ್ಪಾದನಾ ಕಂಪೆನಿಯ ವಯರ್ ನಲ್ಲಿ‌ ರಾತ್ರಿ ಕಾಣಿಸಿಕೊಂಡ ಬೆಂಕಿ: ತಪ್ಪಿದ ಭಾರೀ ಅನಾಹುತ

Suddi Udaya

ನಾರಾವಿ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಿವಿಧ ರೋಗಗಳ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಕಳೆದ 25 ವರ್ಷಗಳಿಂದ ಸಹಕಾರಿ ರಂಗದಲ್ಲಿ ಅಗ್ರಮಾಣ್ಯ ಸೇವೆ ಸಲ್ಲಿಸುತ್ತಿರುವ ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣರವರಿಗೆ ಈ ವರ್ಷದ ರಾಜ್ಯ “ಸಹಕಾರಿ ರತ್ನ” ಪ್ರಶಸ್ತಿ, ಬೆಂಗಳೂರಿನಲ್ಲಿ ನ. 14 ರಂದು ಮುಖ್ಯಮಂತ್ರಿಗಳಿಂದ ಪ್ರಶಸ್ತಿ ಪ್ರದಾನ

Suddi Udaya
error: Content is protected !!