September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ: ಕಾಯ್ದಿರಿಸಿದ ತೀರ್ಪು-ಏ.29ರವರೆಗೆ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ

ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸಂಸ್ಥಾಪಕ, ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧದ ಗಡಿಪಾರು ಆದೇಶವನ್ನು ಏ.29ರವರೆಗೆ ಜಾರಿಗೊಳಿ ಸದಂತೆ ಹೊರಡಿಸಲಾಗಿದ್ದ ಮಧ್ಯಂತರ ಆದೇಶವನ್ನು ಹೈಕೋರ್ಟ್ ಶುಕ್ರವಾರ ವಿಸ್ತರಣೆ ಮಾಡಿದೆ. ಅಲ್ಲದೆ, ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ, ತೀರ್ಪು ಕಾಯ್ದಿರಿಸಿದೆ.

ದ.ಕ. ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ 2026ರ ಮಾ.13ರಂದು ಪುತ್ತೂರು ವಿಭಾಗಾಧಿಕಾರಿ (ಮೂರನೇ ಬಾರಿ) ಹೊರಡಿಸಿರುವ ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿರುವ ಅರ್ಜಿ ಕುರಿತು ನ್ಯಾಯಮೂರ್ತಿ ಸಚಿನ್ ಶಂಕರ್‌ ಮಗದುಂ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ತಿಮರೋಡಿ ಪರ ವಕೀಲರು, “ಪ್ರಕರಣದಲ್ಲಿ ಪೊಲೀಸರು ಅವಲಂಬಿಸಿರುವ 26ರ ಪೈಕಿ 13 ಪ್ರಕರಣಗಳಲ್ಲಿ ಅರ್ಜಿದಾರರು ಖುಲಾಸೆ ಗೊಂಡಿದ್ದಾರೆ. ಎರಡು ಪ್ರಕರಣಗಳಲ್ಲಿ ”ಬಿ” ರಿಪೋರ್ಟ್ ಸಲ್ಲಿಕೆಯಾಗಿದೆ. ಉಳಿದ 10 ಪ್ರಕರಣ ಕೇವಲ ತನಿಖೆ ಮತ್ತು ವಿಚಾರಣಾ ಹಂತದಲ್ಲಿದ್ದು, ಅವೆಲ್ಲವೂ ಜಾಮೀನು ನೀಡಬಹುದಾದ ಸ್ವರೂಪದ್ದಾಗಿವೆ. ಅರ್ಜಿದಾರರ ವಿರುದ್ಧ ದಾಖಲಾದ ಎಲ್ಲ ಹೊಸ ಕ್ರಿಮಿನಲ್ ಪ್ರಕರಣಗಳು ಗಡಿಪಾರು ಪ್ರಸ್ತಾವನೆಗೆ ಸಂಬಂಧಿಸಿದಂತೆ ಪೊಲೀಸರು ವರದಿ ಸಲ್ಲಿಸಿದ ನಂತರ ದಾಖಲಾಗಿವೆ. ಎಸಿ ಮುಂದೆ ಮೊದಲ ಗಡಿಪಾರು ಪ್ರಕ್ರಿಯೆ ನಡೆಯುತ್ತಿದ್ದಾಗ ಐದು ಪ್ರಕರಣಗಳನ್ನು ಉದ್ದೇಶಪೂರ್ವಕವಾಗಿ ದಾಖಲಿಸಲಾಗಿದೆ ಎಂದು ದೂರಿದರು.

ಅಲ್ಲದೆ, “ಅರ್ಜಿದಾರರು ಒಬ್ಬ ಪ್ರಸಿದ್ಧ ಸಾಮಾಜಿಕ ಕಾರ್ಯಕರ್ತ ರಾಗಿದ್ದು, ಸೌಜನ್ಯಾ ಕೊಲೆ ಪ್ರಕರಣದ ಹೋರಾಟದ ನೇತೃತ್ವ ವಹಿಸಿದ್ದಾರೆ. ಅದೇ ಕಾರಣಕ್ಕೆ ಹಲವಾರು ಪ್ರಕರಣಗಳನ್ನು ದಾಖಲಿಸಿ ಗಡಿಪಾರು ಆದೇಶ ಹೊರಡಿಸಿದ್ದಾರೆ,” ಎಂದು ಆಕ್ಷೇಪಿಸಿದರು.

ಈ ವಾದದ ಬಗ್ಗೆ ಆಕ್ಷೇಪಿಸಿದ ಅಡ್ವಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ, “ಅರ್ಜಿದಾರರು 1997ರಿಂದಲೂ ಹಲವಾರು ಕ್ರಿಮಿನಲ್‌ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ತಾನು ಸೌಜನ್ಯಾ ಪ್ರಕರಣದ ಕಾರ್ಯಕರ್ತನೆಂದು ಹೇಳಿಕೊಳ್ಳುತ್ತಾ, ಅರ್ಜಿದಾರರು ನಿತ್ಯ ಕಾನೂನು ಮತ್ತು ಸುವ್ಯವಸ್ಥೆಯ ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದಾರೆ,” ಎಂದು ನ್ಯಾಯಪೀಠಕ್ಕೆ ವಿವರಿಸಿದರು.

Related posts

ಚೆನ್ನೆಮಣೆ ಗೊಬ್ಬು ಪಂಥೊ ಮತ್ತು ಸಂಧಿ ಪಾರ್ದನ ಸುಗಿಪ್ಪು ಪಂಥೊದ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ: ಜೈ ಕರ್ನಾಟಕ ಗಾಯಕರ ಬಳಗದ ಜಿಲ್ಲಾ ಪದಾಧಿಕಾರಿಗಳ ಆಯ್ಕೆ: ಗೌರವ ಅಧ್ಯಕ್ಷರಾಗಿ ಮನೋಹರ ಪ್ರಸಾದ್, ಜಿಲ್ಲಾ ಅಧ್ಯಕ್ಷರಾಗಿ ಇಸ್ಮಾಯಿಲ್ ಬಂಗಾಡಿ

Suddi Udaya

ಕಾಶಿಪಟ್ಣ ಕೇಳ ದೈವ ಕೊಡಮಣಿತ್ತಾಯ ಬ್ರಹ್ಮ ಬೈದರ್ಕಳ ಗರಡಿಯ ವಾರ್ಷಿಕ ನೇಮೋತ್ಸವ ಸಮಾರಂಭದಲ್ಲಿ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ ಕಾಶಿಪಟ್ಣರವರಿಗೆ ಸನ್ಮಾನ

Suddi Udaya

ಬೂಡುಜಾಲು ರಸ್ತೆ ಬದಿಯಲ್ಲಿದ್ದ ಗೂಡಂಗಡಿಯ ಸೊತ್ತುಗಳಿಗೆ ಕಿಡಿಗೇಡಿಗಳಿಂದ ‌ಹಾನಿ

Suddi Udaya

ಮಹಾಶಿವರಾತ್ರಿ: ಧಮ೯ಸ್ಥಳಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸಿದ ಪಾದಯಾತ್ರಿಗಳು

Suddi Udaya

ಗಮಕ ಜಿಲ್ಲಾಧ್ಯಕ್ಷರಾಗಿ ಮೋಹನ ಕಲ್ಲೂರಾಯರ ನೇಮಕ

Suddi Udaya
error: Content is protected !!