32.1 C
ಪುತ್ತೂರು, ಬೆಳ್ತಂಗಡಿ
September 15, 2026
Uncategorized

ಬೆಳ್ತಂಗಡಿ ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ – ಸಾಧಕ ವಿದ್ಯಾರ್ಥಿಗೆ ಸನ್ಮಾನ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ಗುರುವಾಯನಕೆರೆ ಇದರ ವತಿಯಿಂದ ಭಕ್ತಿಭಾವದಿಂದ ‘ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ’ ಕಾರ್ಯಕ್ರಮ ಎ.26 ರಂದು ಗುರುವಾಯನಕೆರೆ ಕುಲಾಲ ಮಂದಿರದಲ್ಲಿ ಜರುಗಿತು.

ಬೆಳಿಗ್ಗೆ 10.30ರಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ ಆರಂಭಗೊಂಡು ಮಧ್ಯಾಹ್ನ 12.30ಕ್ಕೆ ಸಂಪನ್ನಗೊಂಡಿತು.

ಈ ಸಂದರ್ಭದಲ್ಲಿ ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಸಿಂಚನಾ ಸಿ. ಇವಳನ್ನು‌ಸಂಘದ ವತಿಯಿಂದ ಗೌರವಿಸಲಾಯಿತು.

ಸಂಘದ ಅಧ್ಯಕ್ಷ ಸೋಮಯ್ಯ ಮೂಲ್ಯ ಅನೈನಡೆ ಮಾತನಾಡಿ, ಸಂಘದ ವತಿಯಿಂದ ಮುಂದೆ ನಡೆಯಲಿರುವ ವಿವಿಧ ಯೋಜನೆಗಳಿಗೆ ಪೂರಕವಾಗಿ ಇಂದು ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಸಲಾಗಿದೆ. ಸಮಾಜ ಬಾಂಧವರು ಸಂಘಟಿತರಾಗಬೇಕು, ಸಂಘದ ವತಿಯಿಂದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಲಾಗುವುದು. ಜೊತೆಗೆ ಅನಾರೋಗ್ಯಕ್ಕೆ ಒಳಗಾದವರಿಗೆ ಸಹಕಾರ ನೀಡುವ ಬಗ್ಗೆಯೂ ಚಿಂತನೆ ನಡೆಸಲಾಗುವುದು. ಹೊಸದಾಗಿ ಖರೀದಿಸಿದ ಜಾಗದಲ್ಲಿ ಸುಮಾಜ ಭವನ ನಿರ್ಮಾಣಕ್ಕೆ ಎಲ್ಲರ ಒಂದೇ ಮನಸ್ಸಿನಿಂದ ಸಹಕಾರ ಬೇಕು ಎಂದು ತಿಳಿಸಿದರು.

ವಿಧಾನ ಪರಿಷತ್ ಶಾಸಕ ‌ಪ್ರತಾಪಸಿಂಹ ನಾಯಕ್, ಧಾಮಿ೯ಕ‌ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ, ಬೆಸ್ಟ್ ಫೌಂಡೇಷನ್ ಅಧ್ಯಕ್ಷ ಅಧ್ಯಕ್ಷ ರಕ್ಷೀತ್ ಶಿವರಾಂ, ಪುತ್ತೂರು ಕುಂಬಾರರ ಸಹಕಾರ ಸಂಘದ ಅಧ್ಯಕ್ಷ ಭಾಸ್ಕರ ಮೂಲ್ಯ ಪೆರುವಾಯಿ ಭೇಟಿ ನೀಡಿದರು. ಹೆಚ್. ಪದ್ಮಕುಮಾರ್,ಸಂಘದ ಪ್ರಧಾನ ಕಾರ್ಯದರ್ಶಿ ಉಪನ್ಯಾಸಕ ಸುಧೀರ್ ಕೆ.ಎನ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬಂದಾರು ಗ್ರಾ.ಪಂ. ನಲ್ಲಿ ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿಯ ಬಿತ್ತಿ ಪತ್ರ ಅನಾವರಣ

Suddi Udaya

ಜ.22: ಅಯೋಧ್ಯೆಯಲ್ಲಿ ಶ್ರೀರಾಮ ಮೂರ್ತಿ ಪ್ರತಿಷ್ಠಾಪನೆಯೊಂದಿಗೆಕೋಟಿ ಕೋಟಿ ರಾಮ ಭಕ್ತರ ಅಭಿಲಾಷೆ ಈಡೇರುತ್ತಿದೆ

Suddi Udaya

ರಾಷ್ಟ್ರೀಯ ಹೆದ್ದಾರಿಯ  ಚರಂಡಿ ದುರಸ್ತಿ           

Suddi Udaya

ಮೃತ ಅಕಾಂಕ್ಷ ಮೃತದೇಹ ಮನೆಗೆ ಆಗಮನ : ಶಾಸಕ ಹರೀಶ್ ಪೂಂಜ ಭೇಟಿ, ಸಾಂತ್ವನ

Suddi Udaya

ಸೋಣಂದೂರು: ಕೊಲ್ಪದಬೈಲು ಬಳಿ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ: ಸ್ಥಳೀಯರಿಂದ ತೆರವು ಕಾರ್ಯ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಕಣಿಯೂರು ಗುತ್ತು ಮನೆಗೆ ಭೇಟಿ

Suddi Udaya
error: Content is protected !!